2030ಕ್ಕೆ ರಾಜ್ಯದಲ್ಲಿ ಎಚ್‌ಐವಿ ಶೂನ್ಯಕ್ಕೆ ಇಳಿಸಲು ಪಣ: ಸಚಿವ ಸುಧಾಕರ್‌

ಸಮಾಜದಲ್ಲಿ ಎಚ್‌ಐವಿ ಸೋಂಕಿತರನ್ನು ಕಳಂಕ ಅಥವಾ ತಾರತಮ್ಯದಿಂದ ನೋಡುವುದು ಶಿಕ್ಷಾರ್ಹ ಅಪರಾಧ ಎಂದು ಘೋಷಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. 

Strive to reduce HIV to zero in karnataka by 2030 says minister dr k sudhakar gvd

ಚಿಕ್ಕಬಳ್ಳಾಪುರ (ಡಿ.02): ಸಮಾಜದಲ್ಲಿ ಎಚ್‌ಐವಿ ಸೋಂಕಿತರನ್ನು ಕಳಂಕ ಅಥವಾ ತಾರತಮ್ಯದಿಂದ ನೋಡುವುದು ಶಿಕ್ಷಾರ್ಹ ಅಪರಾಧ ಎಂದು ಘೋಷಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಏಡ್ಸ್‌ ಪ್ರಿವೆನಷನ್‌ ಸೊಸೈಟಿ, ಜಿಲ್ಲಾ ಏಡ್‌್ಸ ನಿಯಂತ್ರಣ ಘಟಕ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ವಿಶ್ವ ಏಡ್‌್ಸ ದಿನಾಚಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

2 ವರ್ಷ ಜೈಲು 1 ಲಕ್ಷ ದಂಡ: ಎಚ್‌ಐವಿ ಸೋಂಕಿತರನ್ನು ತಾರತಮ್ಯದಿಂದ ನೋಡಿದರೆ 2 ವರ್ಷದವರೆಗೆ ಜೈಲು ಸಜೆ ಅಥವಾ ಒಂದು ಲಕ್ಷದವರೆಗೂ ದಂಡ ವಿಧಿಸುವ ಅವಕಾಶ ಕಾನೂನಿನಲ್ಲಿ ಇದ್ದು, ಈ ಎಲ್ಲ ಕ್ರಮಗಳಿಂದಾಗಿ ರಾಜ್ಯದಲ್ಲಿ ಸೋಂಕು ಕಡಿಮೆಯಾಗುತ್ತಿದೆ. ಅಲ್ಲದೆ ಸೋಂಕಿನ ಬಗ್ಗೆ ಅರಿವು ಕಾರ್ಯಕ್ರಮಗಳು ಹೆಚ್ಚಾಗಿರುವುದರಿಂದ ಸೋಂಕಿತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಇಳಿಮುಖವಾಗಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿಯದಿದ್ದರೆ ಮತ್ತೆ ಸೋಂಕು ಹೆಚ್ಚಾಗುವ ಆತಂಕ ಇದೆ ಎಂದ ಸಚಿವರು ಎಚ್ಚರಿಸಿದರು.

ಉಪನಗರವಾಗಿ ನೆಲಮಂಗಲದ ಸಮಗ್ರ ಅಭಿವೃದ್ಧಿಗೆ ಕ್ರಮ: ಸಚಿವ ಸುಧಾಕರ್‌

ಎಚ್‌ಐವಿ ಸೋಂಕಿನ ಬಗ್ಗೆ ಉದಾಸೀನ ಮಾಡುವ ಕಾಯಿಲೆ ಇದಲ್ಲ, ನಿಯಂತ್ರಣಾ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು, ರಾಜ್ಯದಲ್ಲಿ ಸೋಂಕನ್ನು ಶೂನ್ಯಕ್ಕೆ ತರುವ ಪ್ರಯತ್ನ ಮುಂದುವರಿಯಬೇಕು. ಸೋಂಕಿತರನ್ನು ಯಾವುದೇ ತಾರತಮ್ಯದಿಂದ ನೋಡದೆ ಸಮಾನಗೊಳಿಸುವುದು ಈ ವರ್ಷದ ಘೋಷವಾಕ್ಯವಾಗಿದೆ. ಅಸಮಾನತೆ ಪರಿಹರಿಸೋಣ, ಏಡ್ಸ್‌ ಕೊನೆಗಾಣಿಸೋಣ ಎಂದು ಪ್ರಚುರ ಪಡಿಸಲಾಗುತ್ತಿದೆ. ಎಚ್‌.ಐ.ವಿ.ಯೊಂದಿಗೆ ಬದುಕುತ್ತಿರುವವರಿಗೆ ಬೆಂಬಲ ಸೂಚಿಸುವ ದಿನವಿದು ಎಂದರು.

ಸೋಂಕಿಗೆ ನಿಖರ ಚಿಕಿತ್ಸೆ ಇಲ್ಲ: ಎಚ್‌ಐವಿಗೆ ಈ ಹಿಂದೆ ನಿಖರ ಚಿಕಿತ್ಸೆ ಇರಲಿಲ್ಲ. ಇದರಿಂದ ಎಚ್‌ಐವಿ ಸೋಂಕಿತರಿಗೆ ಸಾಮಾಜಿಕ ಬಹಿಷ್ಕಾರದಂತಹ ಪರಿಸ್ಥಿತಿ ಇತ್ತು. ಈ ಅಸಮಾನತೆ ಹೋಗಬೇಕು, 30 ವರ್ಷಕ್ಕೂ ಹೆಚ್ಚು ಕಾಲದಿಂದ ವೈದ್ಯಕೀಯ ವ್ಯವಸ್ಥೆಯಲ್ಲಿ ಎಚ್‌.ಐ.ವಿ ಸೋಂಕಿತರು ದೀರ್ಘ ಕಾಲದವರೆಗೂ ಬದುಕಲು ವೈದ್ಯಕೀಯ ರಂಗ ಮುಂದುವರಿದಿದೆ. ಕೆಲವರು ಎರಡು ದಶಕಗಳಿಂದ ಸಹಜವಾಗಿ ಬದುಕುತ್ತಿರುವುದೇ ಇದಕ್ಕೆ ನಿದರ್ಶನ ಎಂದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ನಿರ್ದೇಶಕಿ ಇಂದುಮತಿ, ಎನ್‌ಎಚ್‌ಎಂ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್‌, ಜಿಪಂ ಸಿಇಒ ಶಿವಶಂಕರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಕಾರಿ ನಾಗೇಶ್‌, ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ್‌, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ. ನಾಗರಾಜ್‌, ನಗರಸಭೆ ಅಧ್ಯಕ್ಷ ಆನಂದರೆಡ್ಡಿ, ಹಾಸ್ಯ ಕಲಾವಿದ ಪ್ರಾಣೇಶ್‌, ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದಲ್ಲಿ 3.73 ಲಕ್ಷ ಸೋಂಕಿತರು: ರಾಜ್ಯದಲ್ಲಿ 3.73 ಲಕ್ಷ ಮಂದಿ ಹೆಚ್‌ಐವಿ ಸೋಂಕಿತರಿದ್ದಾರೆ, ಇವರಲ್ಲಿ 1.76 ಲಕ್ಷ ಮಂದಿ ಸ್ವಷ್ಟಚಿಕಿತ್ಸೆ ಪಡೆಯುತ್ತಿದ್ದು, ಉಳಿದವರು ಹೊರ ರಾಜ್ಯಗಳವರಾಗಿ ಹೋಗಿರುವುದು ಮತ್ತು ಮೃತಪಟ್ಟಿರುವವರೂ ಆಗಿದ್ದಾರೆ. ಸೋಂಕಿನ ತಡೆಯುವಿಕೆ ಬಗ್ಗೆ ಅರಿವು ಮೂಡಿಸಲು ಶ್ರಮಿಸಲಾಗುತ್ತಿದೆ, ರಾಜ್ಯದ 7 ಜಿಲ್ಲೆಗಳಲ್ಲಿ ಈ ಸೋಂಕು ಹೆಚ್ಚಿದೆ. ರಾಜ್ಯದಲ್ಲಿ ಎಚ…ಐವಿ ಸೋಂಕು ಹರಡುವುದು ಮತ್ತು ಇದರಿಂದ ಸಾವು ಎರಡನ್ನೂ ಶೂನ್ಯಕ್ಕೆ ತರಲು ಶ್ರಮಿಸಲಾಗುತ್ತಿದೆ. ಅದೇ ರೀತಿಯಲ್ಲಿ ಸೋಂಕು ಹರಡಿದ ವ್ಯಕ್ತಿಯ ವಿರುದ್ಧ ತಾರತಮ್ಯವನ್ನು ಶೂನ್ಯಕ್ಕೆ ತರಲು ಶ್ರಮಿಸಲಾಗುತ್ತಿದೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ನಮ್ಮ ಕ್ಲಿನಿ​ಕ್‌​ನಲ್ಲಿ ಎಲ್ಲರಿಗೂ ಶುಗರ್‌ ಟೆಸ್ಟ್‌: ಸಚಿವ ಸುಧಾಕರ್‌

ಇಡೀ ದೇಶದಲ್ಲಿಯೇ ಏಡ್ಸ್‌ ಸೋಂಕು ನಿಯಂತ್ರಣಾ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದ್ದು, ಏಡ್ಸ್‌ ತಡೆಗಟ್ಟುವಿಕೆಗಾಗಿ ಓಂಬಡ್ಸಮನ್‌ ನೇಮಸಿದ ಎರಡನೇ ರಾಜ್ಯ ಕರ್ನಾಟಕ. ಸಂಪೂರ್ಣ ಏಡ್ಸ್‌ ಮುಕ್ತ ರಾಜ್ಯವಾಗಿಸಲು ಎಲ್ಲರ ಸಹಕಾರ ಅಗತ್ಯ. 2030ರ ವೇಳೆಗೆ ರಾಜ್ಯ ಎಚ್‌ಐವಿ ಮುಕ್ತ ಕರ್ನಾಟಕವಾಗಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕಿದೆ.
-ಡಾ.ಕೆ. ಸುಧಾಕರ್‌, ಆರೋಗ್ಯ ಸಚಿವ

Latest Videos
Follow Us:
Download App:
  • android
  • ios