ಬೆಂಗ್ಳೂರಲ್ಲಿ ಅಕ್ರಮ ಕಟ್ಟಡ ತಡೆಗೆ ಶೀಘ್ರದಲ್ಲೇ ಪ್ರಬಲ ಕಾನೂನು: ಸಿದ್ದರಾಮಯ್ಯ

ಅಕ್ರಮ ಕಟ್ಟಡಗಳ ನಿರ್ಮಾಣ ನಿಯಂತ್ರಿಸಲು ಬಿಬಿಎಂಪಿ, ಬಿಎಂಆರ್‌ಡಿಎ ಹಾಗೂ ಬಿಡಿಎಗೆ ಹೆಚ್ಚು ಅಧಿಕಾರ ನೀಡುವ ಕೆಲಸ ಮಾಡುತ್ತಿದ್ದೇವೆ. ತನ್ಮೂಲಕ ನಿಯಮ ಬಾಹಿರವಾಗಿ ಆಗುವ ಕಟ್ಟಡ ನಿರ್ಮಾಣ ತಡೆಯಲು ಹಾಗೂ ಅದರ ಅನಾಹುತ ತಡೆಯಲು ಕಾನೂನು ಬಿಗಿ ಮಾಡುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ 

Strong law to prevent illegal construction in Bengaluru soon Says CM Siddaramaiah grg

ಬೆಂಗಳೂರು(ಅ.27): ನಗರದಲ್ಲಿ ಕಾನೂನು ಬಾಹಿರ ಕಟ್ಟಡಗಳಿಗೆ ಕಡಿವಾಣ ಹಾಕಲು ಕಷ್ಟವಾಗುತ್ತಿದೆ. ಹೀಗಾಗಿ ನಿಯಮ ಬಾಹಿರ ಕಟ್ಟಡ ನಿರ್ಮಾಣ ಹಾ ಗೂ ಅದರಿಂದ ಆಗುವ ಅನಾಹುತ ತಡೆಗಟ್ಟಲು ಪ್ರಬಲ ಕಾನೂನು ರೂಪಿಸಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಂಟಾಗಿರುವ ಅತಿ ವೃಷ್ಟಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಆಯುಕ್ತ ರೊಂದಿಗೆ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. 
ಬೆಂಗಳೂರು ನಗರದಲ್ಲಿ ಅನಧಿಕೃತ ಕಟ್ಟಡಗಳ ನಿರ್ಮಾಣ ಅವ್ಯಾಹತವಾಗಿ ನಡೆಯುತ್ತಿದೆ. ಕಂದಾಯ ಬಡಾವಣೆಗಳಲ್ಲಿ ಹಾಗೂ ಬಿ ಖಾತಾ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯುತ್ತಿಲ್ಲ. ಸೆಟ್ ಬ್ಯಾಕ್ ಬಿಡದೆ ಅಕ್ರಮವಾಗಿ 6 ರಿಂದ 8 ಮಹಡಿ ಕಟ್ಟುತ್ತಿದ್ದಾರೆ. ಇಂತಹ ಅಕ್ರಮ ನಿರ್ಮಾಣ ಇತ್ತೀಚೆಗೆ ಕಟ್ಟಡ ನೆಲಸಮ ಆಗಿ 8 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಅಕ್ರಮ ನಿರ್ಮಾಣಗಳನ್ನು ನಿಯಂತ್ರಿಸಲು ಕಾನೂನು ಭದ್ರ ಮಾಡುತ್ತಿದ್ದೇವೆ ಎಂದು ಹೇಳಿದರು. 

ಬಿಬಿಎಂಪಿ ರಾಜಕಾಲುವೆ ಮೇಲಿನ ಕಟ್ಟಡಗಳ ನೆಲಸಮಕ್ಕೆ ನ.15 ಗಡುವು!

ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚು ಅಧಿಕಾರ: 

ಅಕ್ರಮ ಕಟ್ಟಡಗಳ ನಿರ್ಮಾಣ ನಿಯಂತ್ರಿಸಲು ಬಿಬಿಎಂಪಿ, ಬಿಎಂಆರ್‌ಡಿಎ ಹಾಗೂ ಬಿಡಿಎಗೆ ಹೆಚ್ಚು ಅಧಿಕಾರ ನೀಡುವ ಕೆಲಸ ಮಾಡುತ್ತಿದ್ದೇವೆ. ತನ್ಮೂಲಕ ನಿಯಮ ಬಾಹಿರವಾಗಿ ಆಗುವ ಕಟ್ಟಡ ನಿರ್ಮಾಣ ತಡೆಯಲು ಹಾಗೂ ಅದರ ಅನಾಹುತ ತಡೆಯಲು ಕಾನೂನು ಬಿಗಿ ಮಾಡುತ್ತೇವೆ ಎಂದರು.

ನಿರ್ಮಾಣ ಹಂತದ ಅಕ್ರಮ ಕಟ್ಟಡ ತೆರವು 

ಡಿಸಿಎಂ ಡಿಕೆಶಿ ಮಾತನಾಡಿ, ನಗರದಲ್ಲಿ ಅಕ್ರಮವಾಗಿ ನಿರ್ಮಾ ಣವಾಗುತ್ತಿರುವ ಹಾಗೂ ಕಳಪೆ ಗುಣಮಟ್ಟದ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿಯುತ್ತಿದೆ. ಈ ಹಿಂದೆ ಅಧಿಕಾರಿಗಳಿಗೆ ಇದ್ದ ಅಧಿಕಾರವನ್ನು ಕಳೆದ ಸರ್ಕಾರ ಮೊಟಕುಗೊಳಿಸಿತ್ತು. ಈಗ ಪೊಲೀಸ್ ಅಧಿಕಾರಿ ಗಳಿಗೆ ನಮ್ಮ ಸರ್ಕಾರ ಪೂರ್ಣ ಅಧಿಕಾರ ನೀಡಿದೆ ಎಂದರು. ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ನಾವು ಮುಂದಾಗಿದ್ದೇವೆ. ಈಗ ನಮ್ಮ ಸರ್ಕಾರ ಬಿಬಿಎಂಪಿ, ಬಿಡಿಎ, ಅಧಿಕಾರಿಗಳಿಗೆ ಈ ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ಅಧಿಕಾರ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ. 

Latest Videos
Follow Us:
Download App:
  • android
  • ios