ಪಾಕಿಸ್ತಾನ ಪರ ಘೋಷಣೆ ಕೂಗಿದವನನ್ನ ಬಂಧಿಸದಿದ್ರೆ ಉಗ್ರ ಹೋರಾಟ: ಪ್ರಮೋದ್ ಮುತಾಲಿಕ್
ಪಾಕಿಸ್ತಾನ ಜಿಂದಾಬಾದ್ ಪ್ರಕರಣದಲ್ಲಿ ಗೃಹ ಸಚಿವ ಜಿ. ಪರಮೇಶ್ವರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಇದು ದೇಶದ್ರೋಹದ ಹೇಳಿಕೆಯಾಗಿದೆ. ಕಾಂಗ್ರೆಸ್ ನಾಯಕರು ದೇಶದ್ರೋಹ ಹೇಳಿಕೆ ನೀಡಿದ್ದ ವ್ಯಕ್ತಿಯ ರಕ್ಷಣೆಗೆ ಮುಂದಾಗಿರುವುದು ದುರಂತದ ವಿಷಯವಾಗಿದೆ: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್
ಚಿಕ್ಕೋಡಿ(ಜೂ.06): ಮತ ಎಣಿಕೆ ದಿನ ಚಿಕ್ಕೋಡಿಯಲ್ಲಿ ಎರಡು ಘಟನೆಗಳಿಗೆ ವರದಿಯಾಗಿತ್ತು. ಪ್ರಧಾನಿ ಮೋದಿಯವರಿಗೆ ಹಮಾರಾ ಕುತ್ತಾ ಎಂದಿದ್ದು. ಮತ್ತೊಂದು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಘಟನೆಗಳು ನಡೆದಿದ್ದವು. ಮೋದಿ ಹಮಾರಾ ಕುತ್ತಾ ಹೈ ಎಂಬ ಘೋಷಣೆ ಕೂಗಿದವ ಜಮೀರ್ ನಾಯಿಕವಾಡಿ ಎಂಬ ವ್ಯಕ್ತಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಆದ್ರೆ ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯನ್ನು ಬಂಧಿಸಿಲ್ಲ. ಪಾಕಿಸ್ತಾನ ಜಿಂದಾಬಾದ್, ಮೋದಿ ಹಮಾರಾ ಕುತ್ತಾ ಹೈ ಎಂದು ಕಾಂಗ್ರೆಸ್ ಕಾರ್ಯಕರ್ತರು ಕೂಗಿದ್ದರು. ಆದರೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ವಿಫಲವಾಗಿದ್ದಾರೆ. ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರದಿಂದ ಒತ್ತಡವಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅರೋಪಿಸಿದ್ದಾರೆ.
ಇಂದು(ಗುರುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್ ಅವರು, ಪಾಕಿಸ್ತಾನ ಜಿಂದಾಬಾದ್ ಕೂಗಿದ ವ್ಯಕ್ತಿಯನ್ನು ಬಂಧಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ.
ಜನಸಂಖ್ಯೆ ಹೆಚ್ಚಿಸುವ ಲವ್ ಜಿಹಾದ್‌ಗೆ ಒಪ್ಪದ ನೇಹಾಳನ್ನು ಫಯಾಜ್ ಕೊಂದಿದ್ದಾನೆ; ಪ್ರಮೋದ್ ಮುತಾಲಿಕ್ ಆರೋಪ
ಪಾಕಿಸ್ತಾನ ಜಿಂದಾಬಾದ್ ಪ್ರಕರಣದಲ್ಲಿ ಗೃಹ ಸಚಿವ ಜಿ. ಪರಮೇಶ್ವರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಇದು ದೇಶದ್ರೋಹದ ಹೇಳಿಕೆಯಾಗಿದೆ. ಕಾಂಗ್ರೆಸ್ ನಾಯಕರು ದೇಶದ್ರೋಹ ಹೇಳಿಕೆ ನೀಡಿದ್ದ ವ್ಯಕ್ತಿಯ ರಕ್ಷಣೆಗೆ ಮುಂದಾಗಿರುವುದು ದುರಂತದ ವಿಷಯವಾಗಿದೆ. ಆತನನ್ನು ಕಾಂಗ್ರೆಸ್ ಒದ್ದು ಒಳಗೆ ಹಾಕುವ ಕೆಲಸ ಮಾಡಬೇಕಿತ್ತು. ಕಾಂಗ್ರೆಸ್ ಸರ್ಕಾರ ಮುಸ್ಲಿಂರ ತುಷ್ಠೀಕರಣ ಮಾಡ್ತಿದೆ. ಹೀಗಾಗಿ ಭಾರತದಲ್ಲಿ ಕಾಂಗ್ರೆಸ್ ಬೆಂಬಲದಿಂದ ಮುಸ್ಲಿಂರು ಉದ್ಧಟತನ ಮೆರೆಯುತ್ತಿದ್ದಾರೆ ಎಂದು ಮುತಾಲಿಕ್ ಕಿಡಿಕಾರಿದ್ದಾರೆ.
ಭೂತಕಾಲದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರೋ ವ್ಯಕ್ತಿಗಳಿವೆ ಕಾನೂನು ರೀತಿಯಲ್ಲಿ ಯಾವುದೇ ಕ್ರಮ ಆಗಿಲ್ಲ ಎಂದು ಮುಸ್ಲಿಂರು ಹಾಗೂ ಕಾಂಗ್ರೆಸ್ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.