ಮಂಗಳೂರು[ಜು.03]: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಸಹಪಾಠಿ ವಿದ್ಯಾರ್ಥಿನಿ ಮೇಲೆ ನಡೆಸಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ಆರಂಭವಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದಲ್ಲಿ ಭಾಗಿಯಾದ ಐವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಅತ್ಯಾಚಾರವೆಸಗಿದ ಐವರನ್ನೂ ಕಾಲೇಜಿನಿಂದ ಅಮಾನತ್ತುಗೊಳಿಸಲಾಗಿದೆ.

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿಯಲ್ಲಿ ಗುರುನಂದನ್(19), ಪ್ರಜ್ವಲ್ (19), ಕಿಶನ್(19), ಸುನಿಲ್(19) ಪ್ರಖ್ಯಾತ್ (19) ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಇತ್ತ ಕಾಲೇಜಿನ ಆಡಳಿತ ಮಂಡಳಿಯೂ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಡಿಬಾರ್ ಮಾಡಿದೆ.

ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಗ್ಯಾಂಗ್ ರೇಪ್: ಇಬ್ಬರು ಕ್ಲಾಸ್‌ಮೇಟ್ಸ್ ಅರೆಸ್ಟ್

ಕಳೆದ ಫೆಬ್ರವರಿಯಲ್ಲಿ ನಡೆದ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ವಿದ್ಯಾರ್ಥಿಗಳು ಗ್ಯಾಂಗ್‌ ರೇಪ್ ನಡೆಸುವುದರೊಂದಿಗೆ, ಇದನ್ನು ಚಿತ್ರೀಕರಿಸಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದರು. ಈ ಮಾಹಿತಿ ಪಡೆದ ಪೊಲೀಸರು ಕೂಡಲೇ ಸುಮೋಟೋ ಕೇಸ್ ದಾಖಲಿಸಿ ತನಿಖೆ ಆರಂಭಿಸಿದ್ದರು. ಇದೀಗ ಐವರನ್ನೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ವಿಚಾರಣೆ ಮುಂದುವರೆಸಿದ್ದಾರೆ.