ಉಚಿತ ಪ್ರಯಾಣದ ಎಫೆಕ್ಟ್‌: ಮಹಿಳೆಯರು ತುಂಬಿದ್ದ ಬಸ್ಸಲ್ಲಿ ತಳ್ಳಾಟ, ವಿದ್ಯಾರ್ಥಿನಿ ಅಸ್ವಸ್ಥ

ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ ಜೇವರ್ಗಿ ಬಸ್‌ ಭರ್ತಿಯಾಗಿತ್ತು. ವಸ್ತಾರಿ ಗ್ರಾಮದ ಪ್ರಥಮ ಪಿಯು ವಿದ್ಯಾರ್ಥಿನಿ ಶರಣಮ್ಮ ಇದೇ ಬಸ್‌ನಲ್ಲಿ ವಸ್ತಾರಿಯಿಂದ ಜೇವರ್ಗಿಗೆ ಕಾಲೇಜಿಗೆ ಹೊರಟಿದ್ದಳು. ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳದಿಂದ ತಳ್ಳಾಟ-ನೂಕಾಟ ಸಂಭವಿಸಿದೆ. ಇದರಿಂದ ಮಧ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿನಿ ಅಸ್ವಸ್ಥಳಾಗಿದ್ದಳು.

Student Unwell Due to KSRTC Bus Rush in Kalaburagi grg

ಕಲಬುರಗಿ(ಜೂ.27):  ಮಹಿಳೆಯರಿಂದ ತುಂಬಿ ತುಳುಕುತ್ತಿದ್ದ ಸರ್ಕಾರಿ ಬಸ್‌ನಲ್ಲಿ ತಳ್ಳಾಟ-ನೂಕಾಟದಿಂದ ವಿದ್ಯಾರ್ಥಿನಿಯೊಬ್ಬಳು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಕುಮ್ಮನಸಿರಸಗಿ ಗ್ರಾಮದ ಬಳಿ ಸೋಮವಾರ ನಡೆದಿದೆ.

ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ ಜೇವರ್ಗಿ ಬಸ್‌ ಭರ್ತಿಯಾಗಿತ್ತು. ವಸ್ತಾರಿ ಗ್ರಾಮದ ಪ್ರಥಮ ಪಿಯು ವಿದ್ಯಾರ್ಥಿನಿ ಶರಣಮ್ಮ ಇದೇ ಬಸ್‌ನಲ್ಲಿ ವಸ್ತಾರಿಯಿಂದ ಜೇವರ್ಗಿಗೆ ಕಾಲೇಜಿಗೆ ಹೊರಟಿದ್ದಳು. ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳದಿಂದ ತಳ್ಳಾಟ-ನೂಕಾಟ ಸಂಭವಿಸಿದೆ. ಇದರಿಂದ ಮಧ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿನಿ ಶರಣಮ್ಮ ಅಸ್ವಸ್ಥಳಾಗಿದ್ದಾಳೆ. ನಂತರ ವಿದ್ಯಾರ್ಥಿನಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಕುಮ್ಮನಸಿರಸಗಿ ಗ್ರಾಮದ ಬಳಿ ವಿದ್ಯಾರ್ಥಿಗಳು ಬಸ್‌ ತಡೆದು, ಗ್ರಾಮಕ್ಕೆ ಹೆಚ್ಚಿನ ಬಸ್‌ಗಳನ್ನು ಬಿಡುವಂತೆ ಆಗ್ರಹಿಸಿದ್ದಾರೆ.

ಮಹಿಳೆಯರಂತೆ ಉಚಿತ ಪ್ರಯಾಣ ಬೇಡ, ಬಸ್‌ನಲ್ಲಿ ಮದ್ಯದ ಬಾಟಲಿ ಸಾಗಾಟಕ್ಕೆ ಅವಕಾಶ ಕೊಡಿ

ಜೇವರ್ಗಿ ತಾಲೂಕಿನ ರೇವನೂರು ಗ್ರಾಮದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ಬಸ್‌ ಬಿಡದ ಕಾರಣ ಮತ್ತು ನಾಲ್ಕು ಊರುಗಳಿಗೂ ಒಂದೇ ಬಸ್‌ ಬಿಟ್ಟಿರುವುದರಿಂದ ಬಸ್‌ ಭರ್ತಿ​ಯಾ​ಗಿತ್ತು. ಹೀಗಾಗಿ 50-60 ವಿದ್ಯಾರ್ಥಿಗಳು ಶಾಲೆಗೆ ಹೋಗದೆ ಊರಲ್ಲೇ ಉಳಿಯುತ್ತಿದ್ದಾರೆ. ಆದ್ದರಿಂದ ಮಾವನೂರು ಗ್ರಾಮಕ್ಕೆ ಪ್ರತ್ಯೇಕ ಬಸ್‌ ಬಿಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

Latest Videos
Follow Us:
Download App:
  • android
  • ios