ರಾಯಚೂರು: ಪರೀಕ್ಷೆಯಲ್ಲಿ ನಕಲು ಮಾಡಿ ಡಿಬಾರ್ ಆದ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ
ವಿವಿಯ ಸ್ನಾತಕೋತ್ತರ ಪದವಿಯ ರಸಾಯನಶಾಸ್ತ್ರ ವಿಭಾಗದ ನಾಲ್ಕನೇ ಸೆಮಿಸ್ಟರ್‌ನಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಯಚೂರು(ನ.30): ಪರೀಕ್ಷೆ ವೇಳೆ ನಕಲು ಮಾಡುವಾಗ ಸಿಕ್ಕಿಬಿದ್ದಿದ್ದರಿಂದ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಯರಗೇರಾ ಸಮೀಪದ ರಾಯಚೂರು ವಿಶ್ವವಿದ್ಯಾಲಯದ ಆವರಣದಲ್ಲಿ ಜರುಗಿದೆ.
ವಿವಿಯ ಸ್ನಾತಕೋತ್ತರ ಪದವಿಯ ರಸಾಯನಶಾಸ್ತ್ರ ವಿಭಾಗದ ನಾಲ್ಕನೇ ಸೆಮಿಸ್ಟರ್‌ನಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಂಜನಗೂಡು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ
ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳನ್ನು ನಕಲು ಮಾಡುತ್ತಿದ್ದಾಗ ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಡಿಬಾರ್ ಮಾಡಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿನಿ ವಿವಿ ಕಟ್ಟಡ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತೀವ್ರ ಗಾಯಗೊಂಡ ವಿದ್ಯಾರ್ಥಿನಿಯನ್ನು ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿವಿ ಕುಲಪತಿ ಪ್ರೊ.ಹರೀಶ ರಾಮಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಯರಗೇರಾ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.