Asianet Suvarna News Asianet Suvarna News

Bagalkote: ಬಸ್‌ ಇಲ್ಲದೇ ಪರದಾಡುತ್ತಿರುವ ವಿದ್ಯಾರ್ಥಿಗಳು

ಶಾಲಾ ಕಾಲೇಜುಗಳು ಪ್ರಾರಂಭವಾಗಿ ಮುಗಿಯುತ್ತಾ ಬಂದರೂ ಗ್ರಾಮಾಂತರ ಪ್ರದೇಶಗಳಿಂದ ನಗರ, ಪಟ್ಟಣ ಪ್ರದೇಶಗಳ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಬಸ್‌ ಸಿಗುತ್ತಿಲ್ಲ. ಶಾಲಾ ಕಾಲೇಜಿಗೆ ತೆರಳಲು ಪರದಾಡುತ್ತಿರುವ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಹಿಡಿಶಾಪ ಹಾಕುತ್ತಿದ್ದಾರೆ.

Students are struggling without a Bus At Bagalkote gvd
Author
First Published Dec 30, 2022, 9:08 PM IST

ಶ್ರೀನಿವಾಸ ಬಬಲಾದಿ

ಲೋಕಾಪುರ (ಡಿ.30): ಶಾಲಾ ಕಾಲೇಜುಗಳು ಪ್ರಾರಂಭವಾಗಿ ಮುಗಿಯುತ್ತಾ ಬಂದರೂ ಗ್ರಾಮಾಂತರ ಪ್ರದೇಶಗಳಿಂದ ನಗರ, ಪಟ್ಟಣ ಪ್ರದೇಶಗಳ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಬಸ್‌ ಸಿಗುತ್ತಿಲ್ಲ. ಶಾಲಾ ಕಾಲೇಜಿಗೆ ತೆರಳಲು ಪರದಾಡುತ್ತಿರುವ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಶಾಲಾ ಕಾಲೇಜಿಗೆ ಬರಲು ಹರಸಾಸಹ ಪಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದಕ್ಕೆ ಮುನ್ನವೇ ಪದವಿ, ಸ್ನಾತಕೋತ್ತರ ಪದವಿ ತರಗತಿಗಳು ಆರಂಭವಾಗಿರುತ್ತವೆ, ಬೆಳಿಗ್ಗೆ ವೇಳೆ ಹಳ್ಳಿಗಳ ಪಟ್ಟಣದ ಬಸ್‌ ನಿಲ್ದಾಣಕ್ಕೆ ತೆರಳಿದರೆ ಬಸ್‌ಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳ ತಂಡವೇ ಕಣ್ಣಿಗೆ ಕಟ್ಟುತ್ತದೆ.

ತರಗತಿಗಳು ತಪ್ಪಿಹೋಗುತ್ತವೆ ಎಂಬ ಕಾರಣಕ್ಕೆ ಪ್ರಾಣ ಪಣಕ್ಕಿಟ್ಟು ಬಸ್‌ಗಳ ಪುಟ್‌ ಬೋರ್ಡನಲ್ಲಿ ನೇತಾಡಿಕೊಂಡು ಹೋಗುವುದು ಸಾಮಾನ್ಯವಾಗಿದೆ. ಇದನ್ನು ಕಂಡೂ ಕಾಣದಂತಿರುವ ಅಧಿಕಾರಿಗಳು ಒಮ್ಮೊಮ್ಮೆ ಹೆಚ್ಚುವರಿ ಬಸ್‌ ಹಾಕಿದದರೆ ಉಳಿದ ದಿನಗಳಲ್ಲಿ ದಿನ ಸಾಯುವವರಿಗೆ ಅಳುವವರು ಯಾರು ಎಂಬಂತೆ ಸುಮ್ಮನಿರುತ್ತಾರೆ. ಸಮರ್ಪಕ ಬಸ್‌ ಇಲ್ಲದೆ ವಿದ್ಯಾರ್ಥಿಗಳಿಗೆ ಪ್ರಯಾಣಿಕರಿಗೆ ನರಕ ಯಾತೆ ಅನುಭವಿಸುವಂತೆ ಮಾಡುತ್ತಿದ್ದಾರೆ. ಪಟ್ಟಣದಿಂದ ಜಿಲ್ಲಾ ಕೇಂದ್ರಕ್ಕೆ, ತಾಲೂಕಾ ಕೇಂದ್ರಕ್ಕೆ ನಿತ್ಯವೂ ಕಚೇರಿಗೆ ಆಸ್ಪತ್ರೆಗೆ ತೆರಳುವವರು ಬೆಳಿಗ್ಗೆಯೇ ಬಸ್‌ ನಿಲ್ದಾಣದಲ್ಲಿ ಇರುತ್ತಾರೆ. 

ಸುಳ್ಳು ಹೇಳುವುದು ಕಾಂಗ್ರೆಸ್‌ನ ಜಾಯಮಾನ: ಸಚಿವ ಗೋವಿಂದ ಕಾರಜೋಳ

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಬರಲಿದ್ದು, ಇದರಿಂದ ಸಾರ್ವಜನಿಕರಿಗೂ ತೀವ್ರ ಸಮಸ್ಯೆಯಾಗಿದೆ. ವಯಸ್ಸಾದಯವರು ಕೆಎಸ್‌ಆರ್‌ಟಿಸಿ ಬಸ್‌ಗಳಿಲ್ಲದೆ ಖಾಸಗಿ ಬಸ್‌ ಮೊರೆ ಹೋಗುವುದು ಸಾಮಾನ್ಯವಾಗಿದೆ. ಬೆಳಿಗ್ಗೆ ಮುಧೋಳಕ್ಕೆ ಹೋಗಬೇಕಾದರೆ ವಿದ್ಯಾರ್ಥಿಗಳು ಮಹಾರಾಷ್ಟ್ರ ಬಸ್ಸೆ ಅವಲಂಬಿತ ಕೇವಲ 5 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡರು. ಲೋಕಲ್‌ ಬಸ್‌ ಇಲ್ಲದೇ ಕೇವಲ ಮೀರಜ, ಕೋಲ್ಹಾರ, ಸಾಂಗಲಿ, ಬಸ್‌ಗಳು ಇದ್ದು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಬಸ್‌ ಬಂದಾಗ ಒಮ್ಮೆಲೇ ವಿದ್ಯಾರ್ಥಿಗಳು ಮುಗಿಬೀಳುವ ಕಾರಣ, ಸಾಮಾನ್ಯ ಪ್ರಯಾಣಿಕರು ಬಸ್‌ ಹತ್ತಲಾಗದೆ ಅಸಾಯಕರಾಗಿದ್ದಾರೆ. 

ಕಾಲೇಜಿಗೆ ತೆರಳುವ ಸಮಯದಲ್ಲಿ ಹೆಚ್ಚುವರಿ ಬಸ್‌ಗಳನ್ನು ಹಾಕದೇ ಸಮಸ್ಯೆಯಾಗುತ್ತಿದೆ ಎಂದು ನಿತ್ಯ ಜಮಖಂಡಿಗೆ ಕೆಲಸಕ್ಕೆ ತೆರಳುವ ಸಾಕಷ್ಟುಸಾರ್ವಜನಿಕರು ಆರೋಪಿಸಿದ್ದಾರೆ. ನಿಗದಿತ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತಲುಪಲು ಸಾಧ್ಯವಾಗದ ಕಾರಣ ಆಕ್ರೋಶಗೊಂಡ ವಿದ್ಯಾರ್ಥಿಗಳು ಅನೇಕ ಬಾರಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಗಳ ವಿರುದ್ಧ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದ ಉದಾಹರಣೆಗಳು ಸಾಕಷ್ಟಿವೆ. ಇಷ್ಟೇಲ್ಲಾ ಸಮಸ್ಯೆಗಳಿದ್ದರೂ ಅಧಿಕಾರಿಗಳಾಗಲಿ ಹಾಗೂ ಜನಪ್ರತಿನಿಧಿಗಳಾಗಲಿ ಕ್ಯಾರೇ ಅನ್ನುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.

ಪ್ರತಿನಿತ್ಯ ನಾವು ಮುಧೋಳ ಕಾಲೇಜಿಗೆ ಹೋಗಬೇಕಾದರೆ ಮಹಾರಾಷ್ಟ್ರ ಬಸ್‌ಗಳಿಗೆ ಅವಲಂಬಿತರಾಗಿದ್ದೇವೆ. ಎಲ್ಲ ಬಸ್‌ಗಳು ಮುಂಜಾನೆ ಮಹಾರಾಷ್ಟ್ರ ಬಸ್‌ಗಳೇ ಆಗಿವೆ ಇದರಿಂದ ವಿದ್ಯಾರ್ಥಿಗಳಿಗೆ ಬಹಳ ತೊಂದರೆಯಾಗಿದೆ, ಕೇವಲ 5 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ ಇದರಿಂದ ಮುಂಜಾನೆ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ. ಈ ಸಮಸ್ಯೆಯನ್ನು ಬೇಗನೆ ಪರಿಹರಿಸಿ ವಿದ್ಯಾರ್ಥಿಗಳ ಕಷ್ಟವನ್ನು ಬಗೆಹರಿಸಬೇಕು.
-ರಾಘವೇಂದ್ರ ಜೋಶಿ, ವಿದ್ಯಾರ್ಥಿ

ದಲಿತರ ಶ್ರೇಯೋಭಿವೃದ್ಧಿಗೆ ಸವಲತ್ತು ಪಡೆದುಕೊಳ್ಳಿ: ಸಚಿವ ಕಾರಜೋಳ

ವಿದ್ಯಾರ್ಥಿಗಳ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ 2 ದಿವಸದಲ್ಲಿಯೇ ಈ ಸಮಸ್ಯೆಯನ್ನು ಬಗೆಹರಿಸುತ್ತೇನೆ. ವಿದ್ಯಾರ್ಥಿಗಳ ವ್ಯಾಸಾಂಗಕ್ಕೆ ನಮ್ಮ ಇಲಾಖೆ ಸಂಪೂರ್ಣ ಸಹಾಯ, ಸಹಕಾರಿ ಇದ್ದೆ ಇರುತ್ತದೆ, ಮುಧೋಳ, ಬಾಗಲಕೋಟಗೆ ಹೋಗುವ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಲು ಪ್ರಯತ್ನ ಮಾಡುತ್ತೇನೆ.
-ಅಶೋಕ ಕ ಕೋರಿ, ಬಾಗಲಕೋಟ ಘಟಕ ವ್ಯವಸ್ಥಾಪಕರು

Follow Us:
Download App:
  • android
  • ios