ಕಳೆದ ಸಾಲಿನ ಪಾಸ್ ತೋರಿಸಿ ಬಸ್‌ಗಳಲ್ಲಿ ಪ್ರಯಾಣಿಸಿ
ವಿದ್ಯಾರ್ಥಿಗಳೇ ಕಳೆದ ಸಾಲಿನ ಪಾಸ್ ತೋರಿಸಿ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ
ಬೆಂಗಳೂರು(ಜ.03): ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಳೆದ ಸಾಲಿನ ಬಸ್ ಪಾಸ್ ಅಥವಾ ದಾಖಲಾತಿ ಶುಲ್ಕದ ರಶೀದಿ ಅಥವಾ ಗುರುತಿನ ಚೀಟಿ ತೋರಿಸಿ ನಿಗಮದ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಆರರಿಂದ ಹತ್ತನೇ ತರಗತಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ತಾಂತ್ರಿಕ, ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಈ ಮೇಲ್ಕಂಡ ದಾಖಲೆ ತೋರಿಸಿ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
ಇಯರ್ ಫೋನ್ ಖರೀದಿಸೋಕೆ ಬಂದು ಅಂಗಡಿಯನ್ನೇ ಸುಲಿಗೆ ಮಾಡಿದ್ರು
ನಿಗಮವು ಈಗಾಗಲೇ 2020-21ನೇ ಸಾಲಿನ ವಿದ್ಯಾರ್ಥಿ ಪಾಸ್‌ಗಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರ ಅಥವಾ ಸೇವಾ ಸಿಂಧು ವೆಬ್ ಪೋರ್ಟಲ್ ಅಥವಾ ನಿಗಮದ ಅಧಿಕೃತ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ನಿಗಮ ತಿಳಿಸಿದೆ.