Mangaluru: ಫುಡ್ ಪಾಯ್ಸನ್‌ಗೆ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
ನಗರದ ಸಿಟಿ ನರ್ಸಿಂಗ್ ಹಾಸ್ಟೆಲ್‌ನಲ್ಲಿ ಫುಡ್ ಪಾಯಿಸನ್ ಸಂಭವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಶಕ್ತಿನಗರ ಬಳಿಯ ಸಿಟಿ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಘಟನೆ ನಡೆದಿದೆ.
ಮಂಗಳೂರು (ಫೆ.06): ನಗರದ ಸಿಟಿ ನರ್ಸಿಂಗ್ ಹಾಸ್ಟೆಲ್‌ನಲ್ಲಿ ಫುಡ್ ಪಾಯಿಸನ್ ಸಂಭವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಶಕ್ತಿನಗರ ಬಳಿಯ ಸಿಟಿ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಘಟನೆ ನಡೆದಿದೆ. ಮಂಗಳೂರಿನ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿಗಳಾಗಿದ್ದು, ಪೊಲೀಸ್ ಇಲಾಖೆ ಮಾಹಿತಿ ಪ್ರಕಾರ 137 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.
ಫುಡ್ ಪಾಯಿಸನ್‌ನಿಂದ ವಾಂತಿ, ಹೊಟ್ಟೆ ನೋವು ಮತ್ತು ಬೇಧಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಲೇಜಿನ ಬಸ್ಸು ಹಾಗೂ ಅಂಬ್ಯುಲೆನ್ಸ್ ಗಳ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರದ ಕದ್ರಿ ಬಳಿಯ ಸಿಟಿ ಆಸ್ಪತ್ರೆ, ಕೆಎಂಸಿ, ಫಾದರ್ ಮುಲ್ಲರ್, ಎಜೆ ಆಸ್ಪತ್ರೆಯಲ್ಲಿ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಾಲೇಜು ಆಡಳಿತ ಮಂಡಳಿ ವಿರುದ್ದ ನಿರ್ಲಕ್ಷ್ಯ ಆರೋಪ ವ್ಯಕ್ತವಾಗಿದ್ದು, ಆಸ್ಪತ್ರೆಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ.
ಯುವಕರು ನೌಕರಿ ಕೇಳಿದ್ರೆ ಮೋದಿಯವರು ಪಕೋಡಾ ಮಾರಿ ಅಂತಾರೆ: ಸಿದ್ದರಾಮಯ್ಯ
ಸದ್ಯ ವಿದ್ಯಾರ್ಥಿನಿಯರು ಅಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಪ್ರಕಾರ ಇಂದು ಬೆಳಿಗ್ಗಿನ ಆಹಾರದ ಬಳಿಕವೇ ಹಲವರು ಅಸ್ವಸ್ಥಗೊಂಡು ಕಾಲೇಜಿಗೆ ತೆರಳಿರಲಿಲ್ಲ ಎನ್ನಲಾಗಿದೆ. ಆದರೆ ಮಧ್ಯಾಹ್ನ ಬಳಿಕ ಕೆಲವರು ಆಸ್ಪತ್ರೆಗೆ ದಾಖಲಾಗಿದ್ದು, ಸಂಜೆ ಹೊತ್ತಿಗೆ ತೀವ್ರ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಚಿಕಿತ್ಸೆ ನೀಡಲಾಗಿದ್ದು, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆಸ್ಪತ್ರೆಗೆ ಬೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.