ವಿದ್ಯಾರ್ಥಿಗಳಿಗೆ ಆಭಾ ಕಾರ್ಡ್ ಕಡ್ಡಾಯ : ಅಧಿಕಾರಿಗಳ ಸೂಚನೆ
ತುಮಕೂರು ಜಿಲ್ಲೆಯಲ್ಲಿರುವ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆæ ಕಡ್ಡಾಯವಾಗಿ ಆಯುಷ್ಮಾನ್ (ಆಭಾ) ಕಾರ್ಡ್‌ಗಳನ್ನು ವಿತರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತುಮಕೂರು (ಅ.14): ತುಮಕೂರು ಜಿಲ್ಲೆಯಲ್ಲಿರುವ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆæ ಕಡ್ಡಾಯವಾಗಿ ಆಯುಷ್ಮಾನ್ (ಆಭಾ) ಕಾರ್ಡ್‌ಗಳನ್ನು ವಿತರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆರೋಗ್ಯ ಇಲಾಖೆ (Health Department ) ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆ (School) ಹಾಗೂ ಕಾಲೇಜಿನ 0-19 ವರ್ಷದೊಳಗಿನ ಮಕ್ಕಳಿಗೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ತಪ್ಪದೇ ವೈದ್ಯಾಧಿಕಾರಿಗಳು ಶಾಲಾ/ಕಾಲೇಜುಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಬೇಕು ಎಂದರು.
ಶಾಲೆ/ಕಾಲೇಜುಗಳಲ್ಲಿ ಪ್ರತಿ ವರ್ಷ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಪ್ರತಿ 3 ತಿಂಗಳಿಗೊಮ್ಮೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಬೇಕು. ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಂಡು ಬಂದರೆ ಅವರ ಪೋಷಕರ ಗಮನಕ್ಕೆ ತಂದು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಬೇಕು. ಹೆಚ್ಚಿನ ಚಿಕಿತ್ಸೆ ಅವಶ್ಯಕವಿದ್ದಲ್ಲಿ ತಾಲೂಕು ಆಸ್ಪತ್ರೆ/ಜಿಲ್ಲಾಸ್ಪತ್ರೆಗೆ ರೆಫರ್ ಮಾಡಬೇಕು ಎಂದು ಸೂಚನೆ ನೀಡಿದರು.
ರೋಗ ಪತ್ತೆಯಾದ ಮಕ್ಕಳು ಸೂಕ್ತ ಚಿಕಿತ್ಸೆ ಪಡೆದಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಅನುಸರಣೆ ಮಾಡಬೇಕು ಎಂದರಲ್ಲದೆ, ಮಕ್ಕಳನ್ನು ಹೆಚ್ಚಾಗಿ ಕಾಡುವ ದಂತ ಸಮಸ್ಯೆಗಳಿಗೆ ತಾಲೂಕು ಮಟ್ಟದ ದಂತ ವೈದ್ಯಾಧಿಕಾರಿಗಳಿಂದ ದಂತ ಪರೀಕ್ಷೆಗೊಳಪಡಿಸಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ವೇಳಾಪಟ್ಟಿಯನ್ವಯ 5, 10, 16 ವರ್ಷದ ಮಕ್ಕಳಿಗೆ ಡಿಫ್ತೀರಿಯಾ, ನಾಯಿ ಕೆಮ್ಮು, ಧನುರ್ವಾಯು ರೋಗಗಳಿಗೆ ಸಂಬಂಧಿಸಿದ ಡಿಪಿಟಿ, ಟಿಡಿ ಲಸಿಕೆಯನ್ನು ಕಡ್ಡಾಯವಾಗಿ ನೀಡಬೇಕು. ಮಕ್ಕಳಿಗೆ ಬಾಕಿ ಉಳಿಸಿಕೊಳ್ಳದೆ ಕೋವಿಶೀಲ್ಡ್, ಕೋವ್ಯಾಕ್ಸಿನ್ 2ನೇ ಡೊಸ್ ಲಸಿಕೆ ನೀಡಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಕೇಶವ್‌ರಾಜ್ ಮಾತನಾಡಿ, ಡಿಸೆಂಬರ್ ಮಾಹೆಯಲ್ಲಿ ಜಾಪ್ನೀಸ್ ಎನ್ಸೆಫೆಲೈಟಿಸ್(ಜೆಇ) ಲಸಿಕೆ ನೀಡಲು ಜಿಲ್ಲಾದ್ಯಂತ ಅಭಿಯಾನ ಹಮ್ಮಿಕೊಳ್ಳಲಾಗುವುದು. ಈ ಅಭಿಯಾನದಡಿ 1-15 ವರ್ಷದೊಳಗಿನ ಮಕ್ಕಳಿಗೆ ಜೆಇ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎನ್. ಮಂಜುನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ. ವೀಣಾ, ಜಿಲ್ಲಾ ಸರ್ವೇಕ್ಷಾಣಾಧಿಕಾರಿ ಡಾ. ಮೋಹನ್‌ದಾಸ್, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಇತರರು ಇದ್ದರು.
ವಿದ್ಯಾರ್ಥಿಗಳಿಗೆ ಆಭಾ ಕಾರ್ಡ್ ಕಡ್ಡಾಯ
ತುಮಕೂರು ಜಿಲ್ಲೆಯಲ್ಲಿರುವ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಆಯುಷ್ಮಾನ್ (ಆಭಾ) ಕಾರ್ಡ್
ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಜಿಪಂ ಸಿಇಓ ಡಾ.ಕೆ. ವಿದ್ಯಾಕುಮಾರಿ ನಿರ್ದೇಶನ
ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆ ಹಾಗೂ ಕಾಲೇಜಿನ 0-19 ವರ್ಷದೊಳಗಿನ ಮಕ್ಕಳಿಗೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ
ಕಾರ್ಯಕ್ರಮದಡಿ ತಪ್ಪದೇ ವೈದ್ಯಾಧಿಕಾರಿಗಳು ಶಾಲಾ/ಕಾಲೇಜುಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಬೇಕು
ಎಲ್ಲಾ ಚಿಕಿತ್ಸೆ ಉಚಿತ :
ತಿಯೊಬ್ಬರೂ ಅಬಾ ಕಾರ್ಡನ್ನು ಕಡ್ಡಾಯವಾಗಿ ಮಾಡಿಸಬೇಕಾಗಿದ್ದು ಅಬಾ ಕಾರ್ಡಿನ ಐ.ಡಿ ನಂಬರ್‌ನಿಂದ ರೋಗಿಯ ಎಲ್ಲಾ ವೈದ್ಯಕೀಯ ದಾಖಲೆಗಳು ಲಭ್ಯವಾಗಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವೀರಪ್ರಸಾದ್ ತಿಳಿಸಿದರು.
ವೈದ್ಯ ದಂಪತಿಯ ಆಯುಷ್ಮಾನ್ ಭಾರತ್ ದಂಧೆ ಪತ್ತೆ: ಆರೋಗ್ಯವಂತರನ್ನು ಹೋಟೆಲ್‌ನಲ್ಲಿ ಇರಿಸಿ ನಕಲಿ ಚಿಕಿತ್ಸೆ
ಅವರು ಬುಧವಾರ ಸೋಷಿಯಲ್ ವೆಲ್‌ಫೇರ್ ಸೊಸೈಟಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ, ಎಸ್.ಡಬ್ಲ್ಯೂ.ಎಸ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಇಲಾಖೆಯ ಸೇವೆಯ ಮಾಹಿತಿ ಹಾಗೂ ತೋಟಗಾರಿಕೆ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮೀಣ ಸೇವಾ ಕೇಂದ್ರಗಳಲ್ಲಿ ಆಧಾರ್ ಕಾರ್ಡ್, ಮೊಬೈಲ್ ನಂಬರ್ ನೀಡಿದರೆ ಅಭಾ ಕಾರ್ಡು ಲಭ್ಯವಾಗಲಿದೆ. ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಾಗ ಅಭಾ ಕಾರ್ಡಿನಲ್ಲಿರುವ ಐಡಿ ನಂಬರಿಗೆ ದಾಖಲಾಗುತ್ತದೆ. ಮುಂದೆ ಯಾವುದೇ ಆಸ್ಪತ್ರೆಗೆ ಚಿಕಿತ್ಸೆಗೆ ಹೋದಾಗ ಹಿಂದೆ ಮಾಡಿರುವ ಎಲ್ಲಾ ಚಿಕಿತ್ಸೆಯ ಮಾಹಿತಿ ಅಬಾ ಕಾರ್ಡಿನಲ್ಲಿ ಸಿಗಲಿದೆ. ಹೆಲ್ತ್ ಸ್ಪೆಷಲ್ ರಿಜಿಸ್ಟರ್‌ನಲ್ಲೂ ದಾಖಲಾಗುತ್ತದೆ ಎಂದರು.
ಇತ್ತೀಚಿಗೆ ರೇಬೀಸ್ ಖಾಯಿಲೆ ಜಾಸ್ತಿಯಾಗುತ್ತಿದ್ದು ಹುಚ್ಚು ಹಿಡಿದ ನಾಯಿ ಹಸುವಿಗೆ ಕಚ್ಚದಂತೆ ಜಾಗ್ರತೆ ವಹಿಸಬೇಕು. ಹುಚ್ಚು ನಾಯಿ ಕಡಿದ ಹಸುವಿನ ಹಾಲನ್ನು ಬಿಸಿ ಮಾಡಿ ಕುಡಿಯಬೇಕು. ಕೋವಿಡ್ ಲಸಿಕೆ ಹಾಕಿದ್ದರಿಂದ ಕೋವಿಡ್ ಕಾಯಿಲೆ ಕಡಿಮೆಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಕೋವಿಡ್ ಬೂಸ್ಟ್ ಡೋಸ್ ಹಾಕಿಸಿಕೊಳ್ಳಬೇಕು. ಸೆಪ್ಟಂಬರ್ 30ರವರೆಗೂ ಕೋವಿಡ್ ಬೂಸ್ಟ್ ಉಚಿತವಾಗಿರುತ್ತದೆ ಎಂದರು.
ಸರ್ಕಾರಿ ಆಸ್ಪತ್ರೆಯ ದಂತ ವೈದ್ಯ ಡಾ.ಶ್ರೀನಿವಾಸ್ ಅವರು ದಂತ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾತನಾಡಿ, ಬಿಪಿಎಲ್ ಕಾರ್ಡು ಹೊಂದಿರುವ ಬಡವರಿಗೆ ಉಚಿತವಾಗಿ ದಂತ ಬಾಗ್ಯ ಯೋಜನೆಯಡಿ ಹಲ್ಲುಗಳನ್ನು ಕಟ್ಟಿಸಿಕೊಡಲಾಗುವುದು. ಎಲೆ ಅಡಿಕೆ ಜೊತೆ ತಂಬಾಕು ಹಾಕಬಾರದು. ಇದರಿಂದ ಹಲ್ಲುಗಳು ಹಾಳಾಗುವುದರ ಜತೆಗೆ ಕ್ಯಾನ್ಸರ್ ಸಹ ಬರಲಿದೆ ಎಂದರು.