Asianet Suvarna News Asianet Suvarna News

ಸುತ್ತೂರಿನಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಪುಣ್ಯವಂತರು: ಇನ್ಫೋಸಿಸ್ ನಾರಾಯಣ ಮೂರ್ತಿ

ಸುತ್ತೂರು ಶ್ರೀಕ್ಷೇತ್ರದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಪುಣ್ಯವಂತರು ಎಂದು ಇನ್ಫೋಸಿಸ್ ಪ್ರತಿಷ್ಠಾನದ ಸಂಸ್ಥಾಪಕ ಎನ್‌.ಆರ್‌.ನಾರಾಯಣಮೂರ್ತಿ ಅವರು ಹೇಳಿದರು.

Students studying in Sutturu are blessed Says Infosys Narayana Murthy gvd
Author
First Published Nov 23, 2022, 8:32 AM IST

ಸುತ್ತೂರು (ನ.23): ಸುತ್ತೂರು ಶ್ರೀಕ್ಷೇತ್ರದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಪುಣ್ಯವಂತರು ಎಂದು ಇನ್ಫೋಸಿಸ್ ಪ್ರತಿಷ್ಠಾನದ ಸಂಸ್ಥಾಪಕ ಎನ್‌.ಆರ್‌.ನಾರಾಯಣಮೂರ್ತಿ ಅವರು ಹೇಳಿದರು. ಶ್ರೀಕ್ಷೇತ್ರದ ಪ್ರಾರ್ಥನಾ ಸಭೆಯಲ್ಲಿ ಜೆಎಸ್‌ಎಸ್‌ ವಸತಿ ಶಾಲೆಯ ಸಹಸ್ರಾರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಸುತ್ತೂರು ಶಿಕ್ಷಣ ಸಂಸ್ಥೆಯು ಜಾತಿ, ಮತ, ಭೇದವಿಲ್ಲದೆ ಸರ್ವಜನಾಂಗದ ಶಾಂತಿಯ ತೋಟದಂತೆ ವಿವಿಧ ಜಿಲ್ಲೆ, ರಾಜ್ಯಗಳಿಂದ ಬಂದಿರುವಂತಹ ಬಡ ಮಕ್ಕಳಿಗೆ ವಸತಿ, ಶಿಕ್ಷಣ ಮತ್ತು ಸಂಸ್ಕಾರವನ್ನು ಕೊಟ್ಟು ಸಮಾಜಕ್ಕೆ ಉತ್ತಮ ಪ್ರಜೆಗಳನ್ನಾಗಿ ರೂಪಿಸುತ್ತಿದೆ. 

ದೇಶ ವಿದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಗುಣಾತ್ಮಕ ಶಿಕ್ಷಣವನ್ನು ನೀಡುವ ಮೂಲಕ ಶ್ರೀ ಸುತ್ತೂರು ಮಠವು ಸಮಾಜಕ್ಕೆ ಅನನ್ಯ ಕೊಡುಗೆಗಳನ್ನು ನೀಡುತ್ತಿದೆ. ಸತತ ಪರಿಶ್ರಮದಿಂದ ಶಿಕ್ಷಣವನ್ನು ಪಡೆದು ದೇಶಕ್ಕೆ ಏನಾದರೂ ಕೊಡುಗೆ ನೀಡುವಂತ ಪ್ರಜ್ಞಾವಂತ ಪ್ರಜೆಗಳಾಗಬೇಕು ಎಂದು ವಿದ್ಯಾರ್ಥಿಗಳಿಗೆ ಅವರು ತಿಳಿಸಿದರು. ಇನ್ಫೊಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಮಾತನಾಡಿ, ಅತ್ತಲಿತ್ತ ಹೋಗದಂತೆ ಹೆಳವನ ಮಾಡಯ್ಯ ತಂದೆ, ಸುತ್ತಿಸುಳಿದು ನೋಡದಂತೆ ಅಂದಕನ ಮಾಡಯ್ಯ ತಂದೆ ಎಂಬ ವಚನದಂತೆ ವಿದ್ಯಾರ್ಥಿಗಳು ಗುರಿ ಮತ್ತು ಉದ್ದೇಶಗಳನ್ನು ಈಡೇರಿಸಿಕೊಳ್ಳಬೇಕಾದರೆ, ಸತತ ಓದು ಹೇಗೆ ಮುಖ್ಯವೋ ಹಾಗೆಯೇ ಏಕಾಗ್ರತೆಯೂ ಕೂಡ ಬಹಳ ಮುಖ್ಯವಾಗಿರುತ್ತದೆ.

ಕನ್ನಡ ಕೇವಲ ಅಕ್ಷರವಲ್ಲ ಅದು ನಮ್ಮ ಸಂಸ್ಕೃತಿ: ಬರಗೂರು ರಾಮಚಂದ್ರಪ್ಪ

ಗುರು-ಹಿರಿಯರನ್ನು ಪ್ರೀತಿ ಗೌರವದಿಂದ ಕಾಣಬೇಕು, ಇಂದಿನ ಸಮಾಜಕ್ಕೆ ಅವರ ಸಲಹೆ ಮತ್ತು ಮಾರ್ಗದರ್ಶನ ಅತ್ಯವಶ್ಯಕವಾಗಿದೆ ಎಂದರು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿ, ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿದ್ದು, ಜನಸಾಮಾನ್ಯರಂತೆ ಜೀವನ ನಡೆಸುತ್ತಿದ್ದಾರೆ. 

ಸತತ 110 ದಿನದಿಂದ ಹರಿಯುತ್ತಿರುವ ಜಯಮಂಗಲಿ ನದಿ: ರೈತರಲ್ಲಿ ಸಂತಸ

ಇನ್ಫೋಸಿಸ್ ಸಂಸ್ಥೆಯನ್ನು ಸ್ಥಾಪಿಸುವ ಸಂದರ್ಭದಲ್ಲಿ ಚಿನ್ನದ ಒಡವೆಗಳನ್ನು ಮಾರಿ ಸಣ್ಣದಾಗಿ ಸಂಸ್ಥೆಯನ್ನು ಕಟ್ಟಿಇಂದು ಈ ಸಂಸ್ಥೆಯು ಬೃಹದಾಕಾರವಾಗಿ ಬೆಳೆದು, ಪ್ರಪಂಚದ ಪ್ರತಿಷ್ಟಿತ ಕಂಪೆನಿಗಳಲ್ಲಿ ಒಂದಾಗಿ ಮೂರು ಲಕ್ಷ ಜನರಿಗೆ ಉದ್ಯೋಗವನ್ನು ನೀಡಿ, ಅವರನ್ನು ಕುಟುಂಬದ ಸದಸ್ಯರಂತೆ ಕಾಣುತ್ತಿದ್ದಾರೆ. ಭಾರತವನ್ನಾಳಿದ ಬ್ರಿಟಿಷರನ್ನು ಇಂದು ಅವರ ಅಳಿಯರಾದ ರಿಷಿ ಸುನಕ್‌ ಅವರು ಬ್ರಿಟನ್‌ನ ಪ್ರಧಾನಿಯಾಗಿ ಆಯ್ಕೆಯಾಗಿರುವುದು ಹೆಮ್ಮೆ ಮತ್ತು ಸಂತಸದ ಸಂಗತಿಯಾಗಿದೆ ಎಂದರು. ಸಂಸ್ಥೆಗಳ ಮುಖ್ಯಸ್ಥರು ಹಾಗೂ ಇತರರು ಇದ್ದರು. ಸಂಯೋಜನಾಧಿಕಾರಿ ಜಿ.ಎಲ್‌. ತ್ರಿಪುರಾಂತಕ ಸ್ವಾಗತಿಸಿ, ನಿರೂಪಿಸಿದರು.

Latest Videos
Follow Us:
Download App:
  • android
  • ios