ರಾಯಚೂರು (ನ.21) : ಮಂತ್ರಾಲಯದಲ್ಲಿ ಸುಸಜ್ಜಿತ ಸ್ನಾನಘಟ್ಟನಿರ್ಮಿಸಲು ಇಸ್ಫೋಸಿಸ್‌ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಅವರು 13 ಕೋಟಿ ದೇಣಿಗೆ ನೀಡಿರುವುದಾಗಿ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

 ಶುಕ್ರವಾರ ಕ್ಷೇತ್ರದಲ್ಲಿ ನಡೆದ ಪುಷ್ಕರ ಮಹೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಶ್ರೀಗಳು ಈ ವಿಷಯ ತಿಳಿಸಿದರು

ಮೈಸೂರು ಝೂಗೆ 20 ಲಕ್ಷ ರು. ದೇಣಿಗೆ ಕೊಟ್ಟ ಸುಧಾಮೂರ್ತಿ ...

 ಶ್ರೀಮಠದ ತುಂಗಾನದಿತೀರದಲ್ಲಿ ಸುಸಜ್ಜಿತ, ಸುಂದರ, ಸಕಲ ಸವಲತ್ತುಗಳಿರುವ ಸ್ನಾನಘಟ್ಟನಿರ್ಮಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಶ್ರಿಮಠದ ಅಂತರಂಗ ಭಕ್ತರಾದ ಇಸ್ಫೋಸಿಸ್‌ನ ಸುಧಾಮೂರ್ತಿ ಅವರು .13 ಕೋಟಿ ದೇಣಿಗೆ ನೀಡಿದ್ದಾರೆ. ಈ ವರ್ಷದಲ್ಲಿ ಸ್ನಾನಘಟ್ಟದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.