ಮದ್ದೂರು (ನ.08):  ಸಂಸದರ ಆದರ್ಶ ಗ್ರಾಮವಾದ ಬೆಸಗರಹಳ್ಳಿಯಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿ ಯೋಜನೆಯಡಿ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌- ಧನ್‌ ಅಭಿಯಾನಕ್ಕೆ  ಚಾಲನೆ ನೀಡಲಾಯಿತು.

ತಾಲೂಕಿನ ಬೆಸಗರಹಳ್ಳಿ ಗ್ರಾಪಂ ಆವರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯಿಂದ ನಡೆದ 2 ದಿನಗಳ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸದೆ ಸುಮಲತಾ, ದೇಶದ ಅರ್ಧದಷ್ಟುಆದಾಯ ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತದೆ ಎಂದರು.

ಕಾಂಗ್ರೆಸ್ ಪರವಾಗಿ ನಿಂತ ಸುಮಲತಾ : ನನಗೆ ಬೆಂಬಲಿಸಿದ್ದಕ್ಕೆ ಸಪೋರ್ಟ್ ಎಂದ ಸಂಸದೆ ...

ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಸೇರಿದಂತೆ ಇತರೆ ಉದ್ಯೋಗಗಳಲ್ಲಿ ನಿರತರಾಗಿರುವ ಕಾರ್ಮಿಕರು ಸಂಘಟಿತ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ಕಾರ್ಮಿಕರಿಗೆ ಅವರ ಜೀವನ ಸಂಧ್ಯಾ ಕಾಲದಲ್ಲಿ ದುಡಿದು ಜೀವನ ನಡೆಸಲು ಆರ್ಥಿಕ ಮೂಲಗಳು ಇರುವುದಿಲ್ಲ. ಇಂತಹ ವ್ಯಕ್ತಿಗಳಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌- ಧನ್‌ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌-ಧನ್‌ ಯೋಜನೆಯ ಪಿಂಚಣಿ ಕಾರ್ಡ್‌ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಠೇವಣಿ ಬಾಂಡ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ, ತಾಲೂಕು ಅಧಿಕಾರಿ ಕಲ್ಪನಾ, ತಾಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ಮಂಜುನಾಥ್‌, ಜಿಪಂ ಮಾಜಿ ಅಧ್ಯಕ್ಷ ಬಿ.ವಿವೇಕಾನಂದ, ತಾಪಂ ಸದಸ್ಯ ವೆಂಕಟೇಶ್‌, ಪಿಡಿಒ ಪ್ರಕಾಶ್‌ ಇದ್ದರು.