ಮಡಿಕೇರಿ(ಜ.15): ಮಡಿಕೇರಿಯಲ್ಲಿ ರು.100 ಕೋಟಿ ವೆಚ್ಚದಲ್ಲಿ 450 ಹಾಸಿಗೆ ಸಾಮರ್ಥ್ಯದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ಸಂಸದ ಪ್ರತಾಪ ಸಿಂಹ ಸೂಚನೆ ನೀಡಿದ್ದಾರೆ.

ಮಡಿಕೇರಿ ವೈದ್ಯಕೀಯ ಕಾಲೇಜಿನ ಡೀನ್‌ ಡಾ. ಕಾರ್ಯಪ್ಪ ಪ್ರತಿಕ್ರಿಯಿಸಿ, ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು. ಶಾಸಕ ರಂಜನ್‌ ಮಾತನಾಡಿ ಆಸ್ಪತ್ರೆಗೆ ಎಲ್ಲಿ ಜಾಗ ಗುರುತು ಮಾಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಪ್ರತಿಕ್ರಿಯಿಸಿದ ಡೀನ್‌ ಡಾ.ಕಾರ್ಯಪ್ಪ ಮಡಿಕೇರಿಯ ಬೋಧಕ ಆಸ್ಪತ್ರೆಯ ಸಮೀಪವೇ ಇರುವ ಹಳೆ ಕಟ್ಟಡಗಳನ್ನು ತೆರವುಗೊಳಿಸಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಮಗುವಿಗೆ ಹೊಡೀಬೇಡ ಎಂದಿದ್ದಕ್ಕೆ ತಾಯಿ ಆತ್ಮಹತ್ಯೆ..!

ಸಂಸದ ಪ್ರತಾಪ ಸಿಂಹ ಮಾತನಾಡಿ, ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಚಾಲನೆ ನೀಡಿದ್ದಾರೆ. ಆದ್ದರಿಂದ ಇದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಬೇಕಾಗಿದೆ. ಆದ್ದರಿಂದ ಹಳೆ ಕಟ್ಟಡಗಳನ್ನು ಗುರುತಿಸಿ ಕೂಡಲೇ ತೆರವುಗೊಳಿಸಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವಂತೆ ಸೂಚನೆ ನೀಡಿದ್ದಾರೆ.

ಮಡಿಕೇರಿ: ಲೈಸೆನ್ಸ್‌ ಬೇಕಂದ್ರೆ 'ಇಂತಿಷ್ಟು' ಕೊಡಲೇ ಬೇಕು..! RTO ಕಚೇರಿಯಲ್ಲಿ ಲಂಚಬಾಕತನ