ಮೈಸೂರು, ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ: ಜಿಲ್ಲಾ ವಿಶ್ವಕರ್ಮ ಸಮಿತಿ
ಮೈಸೂರು- ಕೊಡಗು ಹಾಗೂ ಚಾಮರಾಜನಗರ ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಧರಿಸಿದ್ದೇವೆ ಎಂದು ಜಿಲ್ಲಾ ವಿಶ್ವಕರ್ಮ ಸಾಮಾಜಿಕ ನ್ಯಾಯ ಸಮನ್ವಯ ಸಮಿತಿಯ ಹುಯಿಲಾಳು ಕುಮಾರ್ ತಿಳಿಸಿದರು.
ಮೈಸೂರು : ಮೈಸೂರು- ಕೊಡಗು ಹಾಗೂ ಚಾಮರಾಜನಗರ ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಧರಿಸಿದ್ದೇವೆ ಎಂದು ಜಿಲ್ಲಾ ವಿಶ್ವಕರ್ಮ ಸಾಮಾಜಿಕ ನ್ಯಾಯ ಸಮನ್ವಯ ಸಮಿತಿಯ ಹುಯಿಲಾಳು ಕುಮಾರ್ ತಿಳಿಸಿದರು.
ಕಾಂಗ್ರೆಸ್ ಪಕ್ಷದಿಂದ ನಮಗೆ ನ್ಯಾಯ ದೊರೆಯುವುದಿಲ್ಲ. ಹೀಗಾಗಿ, ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗಾಗಿ ಎನ್.ಡಿ.ಎ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷದಿಂದ ಸಮಾಜಕ್ಕೆ ಉತ್ತಮ ಪ್ರಾತಿನಿಧ್ಯ ದೊರೆತಿಲ್ಲ. ಕೆ.ಪಿ. ನಂಜುಂಡಿ ಅವರನ್ನು ಅಂತಿಮವಾಗಿ ಬಿಜೆಪಿಯಿಂದ ಎಂಎಲ್ಸಿ ಮಾಡಿತು. ಪ್ರಧಾನಿ ಮೋದಿ ಅವರಿಗೆ ಸಮುದಾಯದ ಮೇಲೆ ಅಪಾರ ಗೌರವವಿದ್ದು ಪಿಎಂ- ವಿಶ್ವಕರ್ಮ ಯೋಜನೆ ನೀಡಿದ್ದಾರೆ ಎಂದರು.
ಮುಂದಿನ 100 ವರ್ಷದ ದೃಷ್ಟಿಯಿಂದ ಮೋದಿ ಬೆಂಬಲಿಸಿ - ಒಡೆಯರ್
ಮೈಸೂರು (ಮಾ.17): ದೇಶದ ಅಭಿವೃದ್ಧಿಗಾಗಿ, ಮುಂದಿನ ನೂರು ವರ್ಷದ ದೂರದೃಷ್ಟಿಯ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಬೇಕು. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕ್ರತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಮಾಜಿ ಸಚಿವ ಸಾ.ರಾ. ಮಹೇಶ್ ಅವರ ಕಚೇರಿಗೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರನ್ನು ಪ್ರವಾಸಿ ಕೇಂದ್ರ ಮತ್ತು ಧಾರ್ಮಿಕ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಕೆಲಸ ಮಾಡಬೇಕು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಸುಧಾರಣೆಯಾಗಿದೆ.
ಮೈಸೂರು ಸಂಸ್ಥಾನದ ಆಡಳಿತ ಇದ್ದಾಗ ಹಲವು ಯೋಜನೆ ಜಾರಿಗೊಳಿಸಲಾಗಿದೆ. ಅಂತೆಯೇ ಮೋದಿ ಅವರು ನೂರು ವರ್ಷಗಳ ದೂರದೃಷ್ಟಿಯ ಯೋಜನೆ ರೂಪಿಸಿದ್ದಾರೆ. ಅದಕ್ಕಾಗಿ ನಾವೆಲ್ಲರೂ ಕೈ ಜೋಡಿಸಬೇಕು ಎಂದು ತಿಳಿಸಿದರು. ಸ್ವಚ್ಛ ಭಾರತದ ಜತೆಗೆ ಶ್ರೇಷ್ಠ ಭಾರತದ ನಿರ್ಮಾಣವಾಗಬೇಕು. ಸಾಮಾಜಿಕ, ಆರ್ಥಿಕ, ಧಾರ್ಮಿಕ ಮತ್ತು ಆಧ್ಯಾತ್ಮಿಕವಾಗಿ ಬದಲಾವಣೆ ಆಗಬೇಕು. ಮೈಸೂರಿನ ಅಭಿವೃದ್ಧಿಯ ಬಗ್ಗೆ ಹೆಚ್ಚು ಗಮನಹರಿಸಲಾಗುವುದು. ಬಿಜೆಪಿ ಹೈಕಮಾಂಡ್ ಜನ ಸೇವೆ ಮಾಡಲು ಅವಕಾಶ ನೀಡಿದೆ. ಜೆಡಿಎಸ್ ನಾಯಕರು ತಮ್ಮೊಂದಿಗೆ ಕೈ ಜೋಡಿಸಿ ಕೆಲಸ ಮಾಡಬೇಕು ಎಂದು ಅವರು ಕೋರಿದರು. ಚುನಾವಣೆ ಪ್ರಚಾರದ ವೇಳೆ ಎಲ್ಲರನ್ನೂ ಭೇಟಿಯಾಗುತ್ತೇನೆ. ಈಗಾಗಲೇ ಎಲ್ಲಾ ನಾಯಕರನ್ನು ಭೇಟಿ ಆಗುತ್ತಿದ್ದೇನೆ. ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುವಾಗ ಯಾವುದೇ ರೀತಿಯ ಮನೋಭಾವ ಇರಬಾರದು ಎಂದರು.
ಶೇ.50ರಷ್ಟು ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿರುವುದು ಕಾಂಗ್ರೆಸ್ ಸರ್ಕಾರ: ಸಚಿವ ಸಂತೋಷ್ ಲಾಡ್
ಮಾಜಿ ಸಚಿವ ಸಾ.ರಾ. ಮಹೇಶ್ ವಾತನಾಡಿ, ಈ ಸಂದರ್ಭದಲ್ಲಿ ನಾವು ನಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಮೈತ್ರಿ ಅಭ್ಯರ್ಥಿ ಆಗಿರುವ ಕಾರಣ ಒಗ್ಗಟ್ಟನ್ನು ಕಾಪಾಡಿಕೊಂಡು ಮೈಸೂರು ಮತ್ತು ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಜನಬೆಂಬಲ ದೊರಕುವಂತೆ ಮಾಡಬೇಕು. 2014 ಮತ್ತು 2019ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದರು. ಕಳೆದ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗರು ಬೆನ್ನಿಗೆ ಚೂರಿ ಹಾಕಿದ್ದರಿಂದ ಬಿಜೆಪಿಗೆ ಮತ ನೀಡಿದರು. ಮಂಡ್ಯದಲ್ಲಿ ಮಾಡಿದ ಕೆಲಸ ಮೈಸೂರು ಕ್ಷೇತ್ರದಲ್ಲಿ ನಡೆಯಲಿದೆ ಎಂಬ ಎಚ್ಚರಿಕೆ ನೀಡಲಾಗಿತ್ತು. ಹೀಗಿದ್ದರೂ, ಪರಿಗಣಿಸದ ಕಾರಣ ಮತದಾನದ ದಿನದಂದು ಜೆಡಿಎಸ್‌ಕಾರ್ಯಕರ್ತರು ಬಿಜೆಪಿ ಬೆಂಬಲಿಸಿ ಮತಚಲಾವಣೆ ಮಾಡಿದ್ದಾಗಿ ಹೇಳಿದರು.
ನರೇಂದ್ರ ಮೋದಿ, ಎಚ್.ಡಿ. ದೇವೇಗೌಡರು, ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ ಅವರು ನೀಡಿದ ಕೊಡುಗೆಗೆ ಕೊಡುಗೆ ನೀಡಬೇಕೆಂಬ ಕಾರಣಕ್ಕಾಗಿ ಯದುವೀರ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಯದುವೀರ್ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಹಾಕಲ್ಲವೆಂದು ಭಾವಿಸಿದ್ದೆವು. ಆದರೆ ಅಭ್ಯರ್ಥಿ ಹಾಕುತ್ತಿದ್ದಾರೆ. ನಾವು ಯದುವೀರ್ ಅವರನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಒಂದು ಲಕ್ಷ ಕೋಟಿ ರೂ. ಸಾಲ ಮಾಡಿ ರಾಜ್ಯದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ 1 ಲಕ್ಷ ರೂ. ಸಾಲದ ಹೊರೆ ಬರುವಂತೆ ಮಾಡಿದ್ದಾರೆ. ಆದರೆ, ತಮ್ಮ ಮನೆಯ ಒಡವೆಯನ್ನು ಮಾರಾಟ ಮಾಡಿ ಡ್ಯಾಂ ಕಟ್ಟಿಸಿ ರಾಜಮನೆತನದವರು ಸಾಲ ಮಾಡಿಕೊಂಡರು. ಈ ವ್ಯತ್ಯಾಸವನ್ನು ಅರಿಯಬೇಕು ಎಂದು ಅವರು ಸಲಹೆ ನೀಡಿದರು.
ವರಿಷ್ಠರು ಸೂಚನೆ ನೀಡಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಜಗದೀಶ್ ಶೆಟ್ಟರ್
ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಪ್ರತಾಪ್ ಸಿಂಹ ಕೂಡ ಕೆಲಸ ಮಾಡಿದ್ದಾರೆ. ಬಿಜೆಪಿ ಮತ್ತು ಜಾ.ದಳ ಕಾರ್ಯಕರ್ತರ ಜತೆಗೆ ದಳಪತಿಗಳ ಆಶೀರ್ವಾದ ಇದೆ ಎಂದು ಅವರು ಹೇಳಿದರು. ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ವಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಯದುವೀರ್ ಅವರನ್ನು ಗೆಲ್ಲಿಸಬೇಕಿದೆ. ರಾಜಮನೆತನದವರ ಕೊಡುಗೆ ಅಪಾರ. ಹೊಸ ತಲೆಮಾರಿನವರು ರಾಜಕಾರಣಕ್ಕೆ ಬಂದಿದ್ದಾರೆ. ನಾವು ರಾಜಮನೆತನದ ಅಭ್ಯರ್ಥಿ ಎನ್ನುವುದನ್ನು ನೋಡುವ ಜತೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ ಮೋದಿ ಪ್ರಧಾನಿ ಮಾಡಬೇಕಾಗಿದೆ ಎಂದು ಹೇಳಿದರು.