ಓಕೆ..ದಕ್ಷ ಆಡಳಿತಕ್ಕಾಗಿ ಕೆಆರ್‌ಎಸ್ ಪಕ್ಷವನ್ನು ಬೆಂಬಲಿಸಿ
ರಾಜ್ಯದಲ್ಲಿ ಭ್ರಷ್ಟಾಚಾರ ಹೆಮ್ಮರವಾಗಿ ಹರಡಿಕೊಂಡಿದ್ದು ಇದನ್ನು ಕಿತ್ತೊಗೆದು ದಕ್ಷ ಮತ್ತು ಪಾರದರ್ಶಕ ಜವಾಬ್ದಾರಿಯುತ ಆಡಳಿತಕ್ಕಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಬೆಂಬಲಿಸುವಂತೆ ತಾಲೂಕಿನ ಜನತೆಯಲ್ಲಿ ತಿಪಟೂರು ವಿಧಾನಸಭಾ ಕ್ಷೇತ್ರದ ಕೆಆರ್‌ಎಸ್ ಪಕ್ಷದ ಅಭ್ಯರ್ಥಿ ಗಂಗಾಧರ್ ಕರೀಕೆರೆ ಮನವಿ ಮಾಡಿಕೊಂಡರು.
ತಿಪಟೂರು :ರಾಜ್ಯದಲ್ಲಿ ಭ್ರಷ್ಟಾಚಾರ ಹೆಮ್ಮರವಾಗಿ ಹರಡಿಕೊಂಡಿದ್ದು ಇದನ್ನು ಕಿತ್ತೊಗೆದು ದಕ್ಷ ಮತ್ತು ಪಾರದರ್ಶಕ ಜವಾಬ್ದಾರಿಯುತ ಆಡಳಿತಕ್ಕಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಬೆಂಬಲಿಸುವಂತೆ ತಾಲೂಕಿನ ಜನತೆಯಲ್ಲಿ ತಿಪಟೂರು ವಿಧಾನಸಭಾ ಕ್ಷೇತ್ರದ ಕೆಆರ್‌ಎಸ್ ಪಕ್ಷದ ಅಭ್ಯರ್ಥಿ ಗಂಗಾಧರ್ ಕರೀಕೆರೆ ಮನವಿ ಮಾಡಿಕೊಂಡರು.
ನಗರದ ಗೊರಗೊಂಡನಹಳ್ಳಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಸಿಬಿ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಪಕ್ಷಗಳು ಮಾಡುತ್ತಿರುವ ಪರಮ ಭ್ರಷ್ಟ, ಅನೀತಿ, ಅದಕ್ಷ ರಾಜಕಾರಣದಿಂದಾಗಿ ಜನರು ನೆಮ್ಮದಿಯಿಂದ ಜೀವನ ನಡೆಸಲಾಗುತ್ತಿಲ್ಲ. ಲಂಚ ನೀಡಿದರೆ ಮಾತ್ರ ಕೆಲಸ ಮಾಡಿಕೊಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಇಂತಹ ಅವ್ಯವಸ್ಥೆ ತೊಲಗಿಸಿ ದಕ್ಷ ಪ್ರಾಮಾಣಿಕ ವ್ಯವಸ್ಥೆ ನಿರ್ಮಾಣವಾಗಬೇಕೆಂದರೆ ಭ್ರಷ್ಟಾಚಾರ ತೊಲಗಬೇಕು. ಆದ್ದರಿಂದ ಕೆಆರ್‌ಎಸ್ ಪಕ್ಷ ರಾಜ್ಯದ ಸರ್ವಾಂಗೀಣ ಅಭಿವೃದ್ದಿಗೆ, ರೈತರು ಹಾಗೂ ಜನಸಾಮಾನ್ಯತರ ಆಶೋತ್ತರಗಳಿಗೆ ಅನುಕೂಲವಾಗುವಂತಹ ಹಲವಾರು ಯೋಜನೆಗಳನ್ನು ರೂಪಿಸಿಕೊಂಡಿದೆ ಎಂದರು.
ಈ ಬಾರಿ ಕೆಆರ್‌ಎಸ್ ಪಕ್ಷವು ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲಿದ್ದು ಈಗಾಗಲೆ 119 ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಣೆ ಮಾಡಿದೆ. ನನ್ನನ್ನು ತಿಪಟೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದು, ಮುಂದಿನ ದಿನಗಳಲ್ಲಿ ಬಾಕಿ ಇರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಿದೆ. ಈಗಾಗಲೆ ನಮ್ಮ ಪಕ್ಷದಿಂದ ಹಲವು ಜನಪರ ಕಾರ್ಯಕ್ರಮಗಳನ್ನು ಆಯೋಜಿಸಿ ಅವರ ಸಮಸ್ಯೆಗಳನ್ನು ತಿಳಿದುಕೊಳ್ಳುತ್ತಿದ್ದು ಎಲ್ಲೆಲ್ಲಿ ಅನ್ಯಾಯ, ದೌರ್ಜನ್ಯಗಳು ನಡೆಯುತ್ತಿವೆಯೇ ಅವುಗಳನ್ನು ಖಂಡಿಸುವ ಮೂಲಕ ಜನರಿಗೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡುತ್ತಿದೆ. ರೈತರ, ಜನಸಾಮಾನ್ಯರ ಕೆಲಸಗಳನ್ನು ಸಂಬಂದಪಟ್ಟಅಧಿಕಾರಿಗೊಂದಿಗೆ ಚರ್ಚಿಸಿ ತಕ್ಷಣದಲ್ಲೇ ಪರಿಹರಿಸಿಕೊಟ್ಟಿರುವ ಸಾಕಷ್ಟುಉದಾಹರಣೆಗಳಿವೆ. ಇನ್ನೂ ಹೆಚ್ಚಿನ ಸೇವೆ ಮಾಡಲು ಪಕ್ಷ ಅಧಿಕಾರಕ್ಕೆ ಬರಬೇಕಿದ್ದು ರಾಜ್ಯದ ಜನತೆ ನಮ್ಮ ಪಕ್ಷವನ್ನು ಬೆಂಬಲಿಸಬೇಕಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಶಿವಕುಮಾರ್ ಮತ್ತಿಹಳ್ಳಿ, ಉಪಾಧ್ಯಕ್ಷ ಈಶಣ್ಣ, ಪ್ರಚಾರ ಸಮಿತಿ ಮುಖಂಡ ಶಿವಶಂಕರ್ ಮತ್ತಿತರರಿದ್ದರು.
ಬಳ್ಳಾರಿ ಕ್ಚೇತ್ರದಿಂದ ರಾಮುಲು
ಬಳ್ಳಾರಿ (ಮಾ.16): ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದಲೇ ಚುನಾವಣಾ ಅಖಾಡಕ್ಕೆ ಇಳಿಯುವುದಾಗಿ ಸಚಿವ ಬಿ. ಶ್ರೀರಾಮುಲು ಘೋಷಿಸಿದ್ದಾರೆ. ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಗ್ರಾಮೀಣ ಕ್ಷೇತ್ರ ನನಗೆ ರಾಜಕೀಯ ಪುನರ್ಜನ್ಮ ನೀಡಿದೆ. ಬಹುತೇಕರ ಆಪೇಕ್ಷೆಯ ಮೇರೆಗೆ ನಾನು ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸುವ ನಿರ್ಧಾರ ಕೈಗೊಂಡಿರುವೆ. ಅನೇಕ ವರ್ಷಗಳ ಕಾಲ ಗ್ರಾಮೀಣ ಕ್ಷೇತ್ರದಲ್ಲಿ ಸೇವೆ ಮಾಡಿದ್ದೇನೆ. ಇಂದಿಗೂ ಕ್ಷೇತ್ರದ ಜನರ ಜೊತೆ ನಿರಂತರ ಸಂಪರ್ಕ ಇದ್ದು, ಮತ್ತೊಮ್ಮೆ ಅಲ್ಲಿಂದಲೇ ಸ್ಪರ್ಧಿಸುವ ನಿಲುವು ತೆಗೆದುಕೊಂಡಿರುವೆ. ಈ ಕುರಿತು ಹೈಕಮಾಂಡ್ ಗಮನಕ್ಕೂ ತಂದಿರುವೆ ಎಂದರು.
ಸಂಡೂರು ಅಥವಾ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದುಕೊಂಡಿದ್ದೆ. ಗ್ರಾಮೀಣದಿಂದ ಸ್ಪರ್ಧಿಸಿದರೆ ಗೆಲ್ಲುವ ಅವಕಾಶಗಳು ಹೆಚ್ಚಾಗಿವೆ ಎಂದು ಗೊತ್ತಾಗಿದ್ದರಿಂದ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸುವ ನಿರ್ಧಾರ ಕೈಗೊಂಡಿದ್ದೇನೆ. ಈ ಬಾರಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವೆ. ಸಿದ್ದರಾಮಯ್ಯನವರ ವಿರುದ್ಧ ಸ್ಪರ್ಧಿಸುವ ಕುರಿತು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.