ನವದೆಹಲಿ (ಆ.28):  ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಸದ್ಯ ಜಾಮೀನು ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿಯ ಪುಣ್ಯತಿಥಿಯಲ್ಲಿ ಪಾಲ್ಗೊಳ್ಳಲು ಎರಡು ದಿನ ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್‌ ಅವಕಾಶ ನೀಡಿದೆ. 

ಆತ್ಮೀಯ ಗೆಳೆಯ, ಶ್ರೀರಾಮುಲು ಅವರ ತಾಯಿ ಇತ್ತೀಚೆಗೆ ಮೃತಪಟ್ಟಿದ್ದು, ಅವರ ಪುಣ್ಯತಿಥಿಯಲ್ಲಿ ಪಾಲ್ಗೊಳ್ಳಲು ಬಳ್ಳಾರಿಗೆ ತೆರಳಲು ಅವಕಾಶ ಕೋರಿ ಜನಾರ್ಧನ ರೆಡ್ಡಿ ಅವರು ಸುಪ್ರೀಂ ಕೋರ್ಟ್‌ಗೆ ಅಜಿ ಸಲ್ಲಿಸಿದ್ದರು. 

ಕೊರೋನಾ ಗೆದ್ದ ಶ್ರೀರಾಮುಲು: ಅಸ್ಪತ್ರೆ ಸಿಬ್ಬಂದಿಗೆ ಥ್ಯಾಂಕ್ಸ್ ಹೇಳಿದ್ದು ಜನಾರ್ದನ ರೆಡ್ಡಿ.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆ.30 ಮತ್ತು ಆ.31ರ ವರೆಗೆ ಬಳ್ಳಾರಿಗೆ ತೆರಳಲು ಅವಕಾಶ ನೀಡಿದೆ. ಈ ವೇಳೆ ಪೊಲೀಸ್‌ ರಕ್ಷಣೆ ನೀಡುವಂತೆ ನ್ಯಾಯಾಲಯವು ಸೂಚಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಜನಾರ್ಧನ ರೆಡ್ಡಿ ಅವರಿಗೆ ಜಾಮೀನು ನೀಡುವಾಗ ಬಳ್ಳಾರಿಗೆ ತೆರಳದಂತೆ ಷರತ್ತು ವಿಧಿಸಿತ್ತು.