ಬೆಂಗಳೂರು(ಡಿ.09): ಮನೆಯಲ್ಲೇ ಬಿದ್ದು ಸೊಂಟದ ಮೂಳೆಗೆ ಪೆಟ್ಟು ಮಾಡಿಕೊಂಡಿದ್ದ ಸಾಲು ಮರದ ತಿಮ್ಮಕ್ಕ ಅವರಿಗೆ ಬುಧವಾರ ಬೆಳಗ್ಗೆ ಜಯನಗರ ಅಪೋಲೋ ಅಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಿಗದಿಯಾಗಿದೆ. 

ಭಾನುವಾರ ಹಾಸನ ಜಿಲ್ಲೆಯ ಬೇಳೂರಿನ ತಮ್ಮ ನಿವಾಸದಲ್ಲಿ ತಿಮ್ಮಕ್ಕ ಬಿದ್ದಿದ್ದರು. ಅವರನ್ನು ಹಾಸನದ ಮಣಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸೋಮವಾರ ಆ್ಯಂಬುಲೆನ್ಸ್‌ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ. 

ಸಾಲು ಮರದ ತಿಮ್ಮಕ್ಕ ಆರೋಗ್ಯದಲ್ಲಿ ಚೇತರಿಕೆ: ವೈದ್ಯರಿಗೆ ಥ್ಯಾಂಕ್ಸ್ ಹೇಳಿದ ಶತಾಯುಷಿ

ತಿಮ್ಮಕ್ಕ ಅವರ ಸೊಂಟದ ಮೂಳೆಗೆ ಏಟಾಗಿದ್ದು, ಇಂದು(ಬುಧವಾರ) ಶಸ್ತ್ರ ಚಿಕಿತ್ಸೆ ನಡೆಯಲಿದೆ. ಸದ್ಯ ಅವರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ರಸ್ತೆ ಬದಿಯಲ್ಲಿ ಗಿಡ ನೆಟ್ಟ ಹಿನ್ನೆಲೆಯಲ್ಲಿ ಜನಪ್ರಿಯರಾದ ತಿಮ್ಮಕ್ಕ ನೂರಾರು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.