ಮಂಡ್ಯ: ಆದಿಚುಂಚನಗಿರಿಯಲ್ಲಿ ಸಂತ ಭಕ್ತ ಸಂಗಮ ಸಮಾರಂಭ
ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ 7ನೇ ವರ್ಷದ ಸಂಸ್ಮರಣಾ ಮಹೋತ್ಸವ ಮತ್ತು 75ನೇ ಜಯಂತ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಸಂತ ಭಕ್ತ ಸಂಗಮ ಸಮಾರಂಭ ನಾಗಮಂಗಲದ ಆದಿಚುಂಚನಗಿರಿ ಮಠದಲ್ಲಿ ನಡೆದಿದೆ.
ಮಂಡ್ಯ(ಜ.18): ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ 7ನೇ ವರ್ಷದ ಸಂಸ್ಮರಣಾ ಮಹೋತ್ಸವ ಮತ್ತು 75ನೇ ಜಯಂತ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಸಂತ ಭಕ್ತ ಸಂಗಮ ಸಮಾರಂಭ ನಾಗಮಂಗಲದ ಆದಿಚುಂಚನಗಿರಿ ಮಠದಲ್ಲಿ ನಡೆದಿದೆ.
ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಸುವರ್ಣ ನ್ಯೂಸ್-ಕನ್ನಡಪ್ರಭದ ಪ್ರಧಾನ ಸಂಪಾದಕರಾದ ರವಿ ಹೆಗ್ಗಡೆಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದಾರೆ.
ಚಿಕ್ಕರಸಿನಕೆರೆ ಬಸಪ್ಪನಿಗೆ ಹುಟ್ಟು ಹಬ್ಬ ಸಂಭ್ರಮ!
ಈ ಕಾರ್ಯಕ್ರಮದಲ್ಲಿ ಬೇಲಿಮಠದ ಶಿವರುದ್ರಮಹಾಸ್ವಾಮೀಜಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು.ಶಾಸಕ ಸುರೇಶ್ ಗೌಡ, ಆದಿಚುಂಚನಗಿರಿ ವಿವಿ ಕುಲಪತಿ ಚಂದ್ರಶೇಖರಶೆಟ್ಟಿ ಸೇರಿದಂತೆ ಅನೇಕ ಸಾಧು ಸಂತರು,ಸಹಸ್ರಾರು ಮಂದಿ ಭಕ್ತರು ಉಪಸ್ಥಿತರಿದ್ದರು.