ಹೊಸ ವರ್ಷಾಚರಣೆ ವೇಳೆಯಲ್ಲಿ (ಡಿ.31 ರ ರಾತ್ರಿ) ಮದ್ಯ ಸೇವಿಸುವವರನ್ನು ಪೊಲೀಸ್ ವಾಹನದಲ್ಲಿ ಅವರ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
ಬೆಂಗಳೂರು : ಹೊಸ ವರ್ಷಾಚರಣೆ ವೇಳೆಯಲ್ಲಿ (ಡಿ.31 ರ ರಾತ್ರಿ) ಮದ್ಯ ಸೇವಿಸುವವರನ್ನು ಪೊಲೀಸ್ ವಾಹನದಲ್ಲಿ ಅವರ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಂಡಿರುವ ಭದ್ರತೆ
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಂಡಿರುವ ಭದ್ರತೆಯ ಕುರಿತು ಗೃಹ ಸಚಿವರು, ಭಾನುವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಸುರಕ್ಷಿತವಾಗಿ ಮನೆಗಳಿಗೆ ಹೋಗಲು 8 ಕಡೆ ಸಾರಿಗೆ ವ್ಯವಸ್ಥೆ
ಕೆಲವು ಕಡೆ ಟ್ಯಾಕ್ಸಿಗಳು ಸಿಗುವುದಿಲ್ಲ. ಅಂತವರು ಸುರಕ್ಷಿತವಾಗಿ ಮನೆಗಳಿಗೆ ಹೋಗಲು 8 ಕಡೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಅತಿಯಾಗಿ ಮದ್ಯ ಸೇವಿಸಿರುವವರನ್ನು ಮನೆಗೆ ತಲುಪಿಸಲು ಖಾಸಗಿ ವಾಹನದ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಅವರನ್ನು ಪೊಲೀಸ್ ವಾಹನದಲ್ಲಿಯೇ ಅವರನ್ನು ಮನೆಗೆ ಕರೆದೊಯ್ದು ಬಿಡಲಾಗುವುದು ಎಂದು ಹೇಳಿದ್ದರು. ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಗೃಹ ಸಚಿರವ ಹೇಳಿಕೆಗೆ ನೆಟ್ಟಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.


