9 ಮಂದಿ ಯೂ ಟರ್ನ್ : ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ಸೂಚನೆ

  •  ಟಿ.ನರಸೀಪುರ ಪುರಸಭೆ ಅಧ್ಯಕ್ಷ ಎನ್‌ ಸೋಮು ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ 
  • 8 ತಿಂಗಳ ಹಿಂದೆ ಅಧ್ಯಕ್ಷ ಸ್ಥಾನದ ಗದ್ದುಗೆ ಏರಿದ್ದರು.
  • ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ರಾಜಿನಾಮೆ
T narasipura  municipal council president to quit his post snr

ಟಿ.ನರಸೀಪುರ (ಆ.16): ಟಿ.ನರಸೀಪುರ ಪುರಸಭೆ ಅಧ್ಯಕ್ಷ ಎನ್‌ ಸೋಮು ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಲಿದ್ದಾರೆ. 8 ತಿಂಗಳ ಹಿಂದೆ ಅಧ್ಯಕ್ಷ ಸ್ಥಾನದ ಗದ್ದುಗೆ ಏರಿದ್ದರು.

ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ. 

ಅಧ್ಯಕ್ಷನಾಗಿ ಇದ್ದಷ್ಟು ದಿನ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಅಧಿಕಾರ ನಡೆಸಿದ್ದೇನೆ. ಸಾರ್ವಜನಿಕರ ಕೆಲಸ ಕಾರ್ಯಗಳು ಸುಲಲಿತವಾಗಿ ನಡೆಯುವ ಜೊತೆಗೆ ಯಾವುದೇ ಭ್ರಷ್ಟಾಚಾರಕ್ಕೆ ಆಸ್ಪದ ನೀಡದೇ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಪರಿಣಾಮ ಕೆಲ ಸದಸ್ಯರ ಕೆಂಗಣ್ಣಿಗೆ ಗುರಿಯಾಗಿ ಅವರು ನಡೆಸಿದ ಹುನ್ನಾರಕ್ಕೆ ಅಧ್ಯಕ್ಷ ಸ್ಥಾನದಿಂದ ಕೆಳಕ್ಕೆ ಇಳಿಯುವ ಸ್ಥಿತಿ ಉಂಟಾಗಿದೆ ಎಂದರು.

ಸಿದ್ದರಾಮಯ್ಯ ಭೇಟಿಗೆ ಸ್ಪಷ್ಟನೆ ಕೊಟ್ಟ ಬಿಜೆಪಿ ಶಾಸಕ

ಅಧ್ಯಕ್ಷ ಸೋಮು ಹಾಗು ಉಪಾಧ್ಯಕ್ಷೆ ಪ್ರೇಮ ಅವರು ಆಡಳಿತದಲ್ಲಿ ಸದಸ್ಯರು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಹಾಗು ಅವರ ಆಡಳಿತ ತೃಪ್ತಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ 23 ಸದಸ್ಯರ ಪೈಕಿ 18 ಮಂದಿ ಸಹಿ ಮಾಡಿ ಅವಿಶ್ವಾಸ ಗೊತ್ತುವಳಿ ಕರೆಯುವಂತೆ ನೋಟಿಸ್ ನೀಡಿದ್ದರು.

ಆದರೆ ಕೋವಿಡ್ ಹಿನ್ನೆಲೆ ಸಭೆ ಕರೆಯಲಾಗದೆಂದು ಅಧ್ಯಕ್ಷ ಸೋಮು ಅಸಂತೃಪ್ತ ಸದಸ್ಯರಿಗೆ ಮತ್ತೆ ನೋಟಿಸ್ ನೀಡಿದ್ದರು. ಅಂದಿನಿಂದ ಇಂದಿನವರೆಗೂ ಅಧ್ಯಕ್ಷ ಉಪಾಧ್ಯಕ್ಷರ ಅವಿಶ್ವಾಸ ಗೊತ್ತುವಳಿ ಮಂಡಿಸುವ ಸಂಬಂಧ ಪ್ರಯತ್ನಗಳು ನಡೆದಿದ್ದವಾದರೂ ತಾಂತ್ರಿಕ ತೊಂದರೆ ಹಿನ್ನೆಲೆ ಸಾಧ್ಯವಾಗಿರಲಿಲ್ಲ.  ಕೊನೆಗೆ ಸಿದ್ದರಾಮಯ್ಯ ಅವರೇ ಅಧ್ಯಕ್ಷ ಸೋಮುಗೆ ರಾಜೀನಾಮೆ ನಿಡುವಂತೆ ಸೂಚಿಸುವ ಹಿನ್ನೆಲೆ ತ್ಯಜಿಸಬೇಕಾದ ಪರಿಸ್ಥಿತಿ ಎದುರಾಗಿದೆ. 

Latest Videos
Follow Us:
Download App:
  • android
  • ios