ವಿಜಯ[ಡಿ.31]: ತಾಲೂಕು ಪಂಚಾಯತಿ ಉಪಾಧ್ಯಕ್ಷ ಹಾಗೂ ಅವರ ಬೆಂಬಲಿಗರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮನೆಯವರ ಮೇಲೆ ಹಲ್ಲೆ ಮಾಡಿ ಪುಂಡಾಟಿಕೆ ಮೆರೆಯಲಾಗಿದೆ. 

ವಿಜಯ ಪುರದ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಘಟನೆ ನಡೆದಿದ್ದು, ಮುದ್ದೇ ಬಿಹಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ್ ಮತ್ತು ಸಹೋದರ ರವಿಗೌಡ ಪಾಟೀಲ್
 ಗುಂಪು ಕಟ್ಟಿಕೊಂಡು ಹೋಗಿ ಬಸರಕೋಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದಾ ಮನೆ ಮುಂದೆ ಗಲಾಟೆ ಮಾಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದಾ ಹಾಗೂ ಅವರ ಕುಟುಂಬದವರ ಮೇಲೆಯೂ ಹಲ್ಲೆ ಮಾಡಿದ್ದಾರೆನ್ನುವ ಆರೋಪ ಕೇಳಿ ಬಂದಿದೆ. ಮನೆಯಲ್ಲಿದ್ದ ಮಕ್ಕಳ‌ ಮೇಲೂ ಹಲ್ಲೆ‌ ನಡೆಸಿದ್ದಾರೆ ಎನ್ನಲಾಗಿದೆ. 

ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕ್ಷುಲ್ಲಕ ಕಾರಣಕ್ಕೆ ವೈಷಮ್ಯ ಬೆಳೆಸಿಕೊಂಡು ಹಲ್ಲೆ ನಡೆಸಿದ್ದಾರೆ. ಸುನಂದಾ ಮನೆಗೆ ನುಗ್ಗಿ ಕಟ್ಟಿಗೆಯಿಂದ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.  ಆದರೆ ಈ ಸಂಬಂಧ ಯಾವುದೇ ದೂರು ದಾಖಲಿಸಲಾಗಿಲ್ಲ.