ಮಂಗಳೂರು[ಡಿ.02]: ನಗರದ ಕದ್ರಿ ಕಂಬಳ ರಸ್ತೆಯಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಪಣಂಬೂರು ಕೇಂದ್ರೀಯ ವಿದ್ಯಾಲಯದ ಶಿಕ್ಷಕಿಯಾಗಿರುವ ಬಿಜೈ ನಿವಾಸಿ ಶೈಲಜಾ ರಾವ್‌(55) ಎಂದು ಗುರುತಿಸಲಾಗಿದೆ.

ಇವರು ರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಲ್ಲಿ ಬಂದ ಗೂಡ್ಸ್‌ ಟೆಂಪೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅತಿಯಾದ ವೇಗದಲ್ಲಿದ್ದ ಟೆಂಪೋ ಇನ್ನೊಂದು ರಿಕ್ಷಾಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಮತ್ತೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದಿತ್ತು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಟೆಂಪೋ ಡಿಕ್ಕಿ ಹೊಡೆದ ಬಳಿಕ ರಿಕ್ಷಾವನ್ನು ತಳ್ಳಿಕೊಂಡು ಹೋಗಿದೆ. ಈ ಭೀಕರ ಅಪಘಾತಕ್ಕೆ ಸಿಲುಕಿದ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಶೈಲಜಾ ರಾವ್‌ ಅವರು ಗಂಭೀರ ಗಾಯಗೊಂಡು ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ರಿಕ್ಷಾ ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಗಳೂರು ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

"