ಕೊರೋನಾಗೆ ಶಿಕ್ಷಕ ಸಾವು| ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೂಕಿಹಾಳ ಗ್ರಾಮದಲ್ಲಿ ನಡೆದ ಘಟನೆ|  ಕಳೆದ ಒಂದು ತಿಂಗಳಿಂದ ಕೋವಿಡ್‌ನಿಂದಾಗಿ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ| 

ವಿಜಯಪುರ(ಅ.29): ಕೊರೋನಾ ಮಹಾಮಾರಿಗೆ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೂಕಿಹಾಳ ಗ್ರಾಮದಲ್ಲಿ ಬುಧವಾರ ನಡೆದಿದೆ. 

ಶಿಕ್ಷಕರು ಕಳೆದ ಒಂದು ತಿಂಗಳಿಂದ ಕೋವಿಡ್‌ನಿಂದಾಗಿ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ.

ಕೊರೋನಾ ಪಾಸಿಟಿವ್‌ ಕೇಸ್‌ ರಾಜ್ಯದಲ್ಲೇ ಉತ್ತರ ಕನ್ನಡದಲ್ಲಿ ಅತಿ ಕಡಿಮೆ

ಮಹಾಮಾರಿ ಕೊರೋನಾ ವೈರಸ್‌ಗೆ ಬಲಿಯಾದ ಶಿಕ್ಷಕರು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೂಕಿಹಾಳ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದು ಬಂದಿದೆ.