ಬೆಳಗಾವಿ(ಮೇ.23): ಬೆಳಗಾವಿ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರನ್ನು ಮಾಹಾಮಾರಿ ಕೊರೋನಾ ವೈರಸ್‌ ಬಿಟ್ಟು ಬಿಡದೇ ಕಾಡುತ್ತಿದೆ. ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಮತ್ತೋರ್ವ ಶಿಕ್ಷಕಿಯನ್ನ ಕೋವಿಡ್‌ ಇಂದು ಬಲಿ ಪಡೆದಿದೆ. ಹೌದು, ಶಿಕ್ಷಕಿ ಶ್ರೀದೇವಿ ಹುಕ್ಕೇರಿ(37) ಇಂದು(ಭಾನುವಾರ) ಕೊರೋನಾಗೆ ಬಲಿಯಾಗಿದ್ದಾರೆ.

ಜಿಲ್ಲೆಯ ಹುದಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀದೇವಿ ಹುಕ್ಕೇರಿ ಅವರು ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಳಗಾವಿ ಉಪಚುನಾವಣೆಯಲ್ಲಿ ಶ್ರೀದೇವಿ ಹುಕ್ಕೇರಿ ಅವರು ಕಾರ್ಯನಿರ್ವಹಿಸಿದ್ದರು.  ಕಳೆದ ಕೆಲದಿನಗಳಿಂದ ಕೋವಿಡ್‌ ಸೋಂಕಿನಿಂದ ಬಳಲುತ್ತಿದ್ದ ಶ್ರೀದೇವಿ ಹುಕ್ಕೇರಿ ಅವರನ್ನ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೀದೇವಿ ಹುಕ್ಕೇರಿ ಇಂದು ಮೃತಪಟ್ಟಿದ್ದಾರೆ. 

"

ಇಂದು ಬೆಳಿಗ್ಗೆ ಕೂಡ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗ್ರಾಮದ ಶಿಕ್ಷಕ ರಾಜಶೇಖರ್ ತಳವಾರ(56) ಕೂಡ ಕೋವಿಡ್‌ಗೆ ಬಲಿಯಾಗಿದ್ದರು. ಇವರೂ ಕೂಡ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕರ್ತವ್ಯ ನಿಭಾಯಿಸಿದ್ದರು. 

ಬೆಳಗಾವಿ ಉಪಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ್ದ ಶಿಕ್ಷಕ ಕೊರೋನಾಗೆ ಬಲಿ

ರಾಜ್ಯದ ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿ ಉಪಚುನಾವಣೆಯಲ್ಲಿ ಕರ್ತವ್ಯನಿರ್ವಹಿಸಿದ್ದ ರಾಜ್ಯದ 36 ಶಿಕ್ಷಕರು ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯೊಂದರಲ್ಲಿಯೇ ಇದುವರೆಗೆ 18 ಜನ ಶಿಕ್ಷಕರು ಕೊರೋನಾದಿಂದ ಸಾವನ್ನಪ್ಪಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona