ತುಮಕೂರು(21): ತಿಪಟೂರಿನಲ್ಲಿ 2019-20ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಸಾಮಾನ್ಯ ಪ್ರಕ್ರಿಯೆ ಪ್ರಾರಂಭಗೊಂಡಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಬಿ. ಮಂಗಳಗೌರಮ್ಮ ತಿಳಿಸಿದ್ದಾರೆ.

ವರ್ಗಾವಣೆ ಬಯಸುವ ಶಿಕ್ಷಕರು ಆನ್‌ಲೈನ್‌ ತಂತ್ರಾಂಶ್ರದಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಕಚೇರಿಯಲ್ಲಿ ಸ್ವೀಕೃತ ಅರ್ಜಿಗಳನ್ನು ವರ್ಗಾವಣೆ ನಿಯಮ ಹಾಗೂ ಮಾರ್ಗಸೂಚಿಗಳ ಅನ್ವಯ ಹಾಗೂ ಶಿಕ್ಷಕರು ಅರ್ಜಿಯೊಂದಿಗೆ ಸಲ್ಲಿಸಿರುವ ದಾಖಲೆಗಳ ಆಧಾರದ ಮೇಲೆ ಪರಿಶೀಲಿಸಿ ಕರಡು ಅಂಗೀಕೃತ ಮತ್ತು ಕರಡು ತಿರಸ್ಕೃತ ಪಟ್ಟಿಗಳನ್ನು ಸಿದ್ಧಪಡಿಸಲಾಗಿದೆ.

ಕಚೇರಿಯ ಸೂಚನಾ ಫಲಕದಲ್ಲಿ ಪಟ್ಟಿ ಪ್ರಕಟಿಸಲಾಗಿದೆ. ಸದರಿ ಕರಡು ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಜು.23ರೊಳಗೆ ಸಂಬಂಧಪಟ್ಟಶಿಕ್ಷಕರು ಖುದ್ದು ಹಾಜರಾಗಿ ಸಲ್ಲಿಸಬಹುದಾಗಿದೆ. ಅರ್ಜಿದಾರರಿಂದ ಆಕ್ಷೇಪಣೆಗಳನ್ನು ಪಡೆದು ಜು. 24ರಂದು ವರ್ಗಾವಣೆಗೆ ಅರ್ಹರಿರುವ ಅಂತಿಮ ಪಟ್ಟಿಯನ್ನು ಕಚೇರಿಯಲ್ಲಿ ಪ್ರಕಟಿಸಲಾಗುವುದು. ನಂತರ ಯಾವುದೇ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಬಿಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.