ಮೈಸೂರು[ನ.24]: ಹೈದರಾಬಾದ್ ಇನ್ಫೋಸಿಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಂಜಿನಿಯರ್‌ ಒಬ್ಬ ಸ್ನೇಹಿತನನ್ನು ನೋಡಲು ಬಂದಿದ್ದ ವೇಳೆ  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಹೈದರಾಬಾದ್ ಇನ್ಫೋಸಿಸ್‌ನಲ್ಲಿ ಇಂಜಿನಿಯರ್‌ ಆಗಿದ್ದ ಸಂದೀಪ್ (22) ಗೆಳೆಯನನ್ನು ಭೇಟಿಯಾಗಲು ಮೈಸೂರಿನ ವಿಜಯನಗರದಲ್ಲಿರುವ ಅಪಾರ್ಟ್‌ಮೆಂಟ್‌‌ಗೆ ಬಂದಿದ್ದ. ಭೇಟಿ ಮಾಡಿ ಮಾತನಾಡಿದ ಬಳಿಕ ಸ್ನೇಹಿತ ಹೊರಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದಾನೆ. ಆದರೆ ಸ್ನೇಹಿತ ಹೊರಗೆ ಹೋಗುತ್ತಿದ್ದಂತೆ ಸಂದೀಪ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸದ್ಯ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.