Asianet Suvarna News Asianet Suvarna News

ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದಕ್ಕೆ ಮಾಲೀಕನಿಗೆ ₹20 ಸಾವಿರ ದಂಡ ವಿಧಿಸಿದ ಕೋರ್ಟ್!

ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದಕ್ಕೆ ಮಾಲೀಕನಿಗೆ ದಂಡ ಹಾಕಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಪೊಲೀಸರು ತಪಾಸಣೆ ಮಾಡುವ ವೇಳೆ ಬೈಕ್ ಸವಾರಿ ಮಾಡುತ್ತಿದ್ದ ಯುವಕ ಸಿಕ್ಕಿಬಿದ್ದಿದ್ದ. 

Teerthahalli jmfc court fined the owner 20 thousand rupis for giving a bike to a minor at shivamogga rav
Author
First Published Jun 22, 2023, 9:20 AM IST | Last Updated Jun 22, 2023, 9:22 AM IST

ಶಿವಮೊಗ್ಗ (ಜೂ.22) : ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದಕ್ಕೆ ಮಾಲೀಕನಿಗೆ ದಂಡ ಹಾಕಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಪೊಲೀಸರು ತಪಾಸಣೆ ಮಾಡುವ ವೇಳೆ ಬೈಕ್ ಸವಾರಿ ಮಾಡುತ್ತಿದ್ದ ಯುವಕ ಸಿಕ್ಕಿಬಿದ್ದಿದ್ದ. 

ಯುವಕನಿಗೆ  17 ವರ್ಷವಾಗಿದೆ ಬೈಕ್ ಚಾಲನೆ ವೇಳೆ ಹೆಲ್ಮೆಟ್ ಲೈಸೆನ್ಸ್ ಸಹ ಇರಲಿಲ್ಲ. ಹೀಗಾಗಿ ಸಂಚಾರಿ ನಿಯಮ ಸ್ಪಷ್ಟ ಉಲ್ಲಂಘನೆಯಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಕುರಿತಂತೆ ಕೊನೆಗೆ ಸಂಚಾರ ನಿಯಮ ಉಲ್ಲಂಘನೆ, ಅಪ್ರಾಪ್ತ ಯುವಕನಿಗೆ ಬೈಕ್ ನೀಡಿದ ತಪ್ಪಿಗೆ ಮಾಲೀಕ ಕಳ್ಳಿಗದ್ದೆ ಗ್ರಾಮದ ಪ್ರಮೋದ್ (30) ಎಂಬಾತನ ಮೇಲೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. 

 

ಪ್ರತ್ಯೇಕ ಅಪಘಾತ: ಇಬ್ಬರು ಅಪ್ರಾಪ್ತರು ಸೇರಿ ಮೂವರು ಸಾವು

ವಿಚಾರಣೆ ನಡೆಸಿದ ಬಳಿಕ ತೀರ್ಥಹಳ್ಳಿಯ ಜೆಎಂಎಫ್‌ಸಿ ನ್ಯಾಯಾಲಯ ಬೈಕ್ ಮಾಲೀಕ ಪ್ರಮೋದ್‌ಗೆ 20 ಸಾವಿರ ರೂ. ದಂಡ ವಿಧಿಸಿದೆ

ಅಪ್ರಾಪ್ತ ವಯಸ್ಕರ ಬೈಕ್ ಚಾಲನೆಗೆ ಯಾವಾಗ ಕಡಿವಾಣ:

ಜಿಲ್ಲೆಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗರು, ಚಾಲನಾ ಪರವಾನಗಿ ಇಲ್ಲದೆ ದ್ವಿಚಕ್ರ ವಾಹನಗಳನ್ನು ಓಡಿಸುವುದು ಹೆಚ್ಚಾಗಿದೆ, ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಬೇಕಾದ ಪೊಲೀಸ್‌ರು ಏನೂ ಕ್ರಮ ಕೈಗೊಳ್ಳುತ್ತಿಲ್ಲವೆಂದು ಸಾರ್ವಜನಿಕರು ದೂರುತ್ತಿದ್ದಾರೆ.

ಅಪ್ರಾಪ್ತ ವಯಸ್ಕರು ಪ್ಯಾನ್ ಕಾರ್ಡ್ ಪಡೆಯಬಹುದಾ? ಅರ್ಜಿ ಸಲ್ಲಿಕೆ ಹೇಗೆ?

18 ವರ್ಷದೊಳಗಿನ ಬಾಲಕ, ಬಾಲಕಿಯರು ವಾಹನ ಚಾಲನೆ ಮಾಡುವುದು ಅಪರಾಧವಾಗಿದೆ, ಮಕ್ಕಳಿಗೆ ವಾಹನ ನೀಡುವ ಮೂಲಕ ಪೋಷಕರು, ತಮ್ಮದೇ ಮಕ್ಕಳ ಜೀವದ ಜತೆ ಚೆಲ್ಲಾಟವಾಡುತ್ತಿದ್ದಾರೆ, ಮಕ್ಕಳಿಗೆ ಚಲಾಯಿಸಲು ವಾಹನ ನೀಡಿದರೆ ಪೋಷಕರು ಅಥವಾ ವಾಹನ ಮಾಲೀಕರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯಾಗುತ್ತದೆ ಎಂಬುದು ತಿಳಿಸಿದ್ದರೂ ಇಲ್ಲಿನ ಪೋಷಕರು ತಲೆಕಡಿಸಿಕೊಂಡಿಲ್ಲ, ಪೊಲೀಸರಾಗಲಿ ಹಾಗೂ ಆಡಳಿತ ಮಂಡಳಿಯವರಾಗಲಿ ಪೋಷಕರಿಗೆ ಈ ಬಗ್ಗೆ ಸೂಚನೆ ನೀಡುತ್ತಲ್ಲ ಎಂಬುದು ಸಾರ್ವಜನಿಕರ ದೂರಾಗಿದೆ.

Latest Videos
Follow Us:
Download App:
  • android
  • ios