ಬಿಬಿಎಂಪಿ ಸಿಬ್ಬಂದಿಯ ವರ್ಗಕ್ಕೂ ಮುನ್ನ ನನಗೆ ತಿಳಿಸಿ: ಡಿಕೆಶಿ
ಇಲಾಖೆಯ ವ್ಯಾಪ್ತಿಯಲ್ಲಿನ ತಮ್ಮ ಗಮನಕ್ಕೆ ತರದೇ ಅಧಿಕಾರಿಗಳ ವರ್ಗಾವಣೆ ಮಾಡದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಿದ್ದಾರೆ.
ಬೆಂಗಳೂರು (ಜು.13): ಇಲಾಖೆಯ ವ್ಯಾಪ್ತಿಯಲ್ಲಿನ ತಮ್ಮ ಗಮನಕ್ಕೆ ತರದೇ ಅಧಿಕಾರಿಗಳ ವರ್ಗಾವಣೆ ಮಾಡದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ಕೆಲವು ವರ್ಗಾವಣೆ ಟಿಪ್ಪಣೆಗಳು ಬರುತ್ತಿದ್ದು, ಇಲಾಖೆಗಳಿಗೆ ಸಂಬಂಧಪಟ್ಟಎಲ್ಲಾ ಅಧಿಕಾರಿ, ಸಿಬ್ಬಂದಿ ತಮ್ಮ ಗಮನಕ್ಕೆ ತರದೇ ವರ್ಗಾವಣೆ, ನಿಯೋಜನೆ, ಸ್ಥಳ ನಿಯೋಕ್ತಿಗೊಳಿಸಿ ಯಾವುದೇ ಆದೇಶ ಹೊರಡಿಸಬಾರದು. ಜತೆಗೆ, ಆದೇಶ ಹೊರಡಿಸುವ ಪೂರ್ವದಲ್ಲಿ ನನ್ನ ಗಮನಕ್ಕೆ ತರಬೇಕೆಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನಿರ್ದೇಶಿಸಿದ್ದಾರೆ.
ಒಟ್ಟು 9 ಅಧಿಕಾರಿಗಳ ವರ್ಗಾವಣೆ: ಒಟ್ಟು ಐದು ಮಂದಿ ಹಿರಿಯ ಆರೋಗ್ಯ ಪರಿವೀಕ್ಷಕರು ಹಾಗೂ ಮೂವರು ಕಂದಾಯ ಪರಿವೀಕ್ಷಕರನ್ನು ಆರ್‌ಆರ್ ನಗರ ವಲಯ ಸೇರಿದಂತೆ ವಿವಿಧ ಸ್ಥಳಗಳಿಗೆ ವರ್ಗಾವಣೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಗಳವಾರ ಅನುಮೋದನೆ ನೀಡಿದ್ದಾರೆ.
ವರ್ಗಾವಣೆ ದಂಧೆ: ಸ್ಪೀಕರ್‌ಗೆ ‘ದಾಖಲೆ’ ಸಲ್ಲಿಸಿದ ಎಚ್‌ಡಿಕೆ
ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಯ ಭರವಸೆ: ಬಿಬಿಎಂಪಿ ಮತ್ತು ಸರ್ಕಾರದ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳ ಬಿಲ್‌ಗಳನ್ನು ಪಾಲಿಕೆ ಮುಖ್ಯ ಆಯುಕ್ತರೊಂದಿಗೆ ಚರ್ಚಿಸಿ ಬಿಡುಗಡೆಗೆ ಕ್ರಮ ವಹಿಸುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಬುಧವಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ, ನಗರದಲ್ಲಿ ನಡೆಸಲಾಗಿರುವ ಕಾಮಗಾರಿಗಳ ಬಿಲ್ ತಡೆಹಿಡಿಯಲಾಗಿದ್ದು, ತ್ವರಿತವಾಗಿ ಬಾಕಿ ಬಿಲ್ ಬಿಡುಗಡೆ ಮಾಡಿಸಬೇಕು.
ಬಿಬಿಎಂಪಿ ಅನುದಾನದಲ್ಲಿ ಕೈಗೊಂಡಿರುವ ಹಾಗೂ ಸರ್ಕಾರದ ಅಮೃತ ನಗರೋತ್ಥಾನ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಗಳ .675 ಕೋಟಿ ಬಿಲ್ ಮೊತ್ತ ಬಿಡುಗಡೆ ಮಾಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಬೇಕು ಎಂದು ಕೋರಿದರು. ಪ್ರಸ್ತುತ ಬಿಬಿಎಂಪಿ ಅನುದಾನದಲ್ಲಿ ಏಪ್ರಿಲ್ 2021ರಿಂದ ಜೂನ್ 2023ರವರೆಗಿನ ಕಾಮಗಾರಿಗಳಿಗೆ ಸುಮಾರು .2,500 ಕೋಟಿ ಬಿಲ್ ಬಾಕಿ ಇದೆ. ಸಾಲ ಮಾಡಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ.
ಡಿಕೆಶಿ ದಿಢೀರ್ ಸಿಟಿ ರೌಂಡ್ಸ್: ಇಂದಿರಾ ಕ್ಯಾಂಟೀನ್ನಲ್ಲಿ ಉಪಹಾರ, ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ
ಸಾಲ ಬಾಧೆ ತಾಳಲಾರದೆ ಕೆಲವು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಹಂತಕ್ಕೆ ಹೋಗಿದ್ದಾರೆ. ಬಿಬಿಎಂಪಿ ಅಧಿಕಾರಿ ವರ್ಗದ ಮಾಹಿತಿಯಂತೆ ಪ್ರಸಕ್ತ ವರ್ಷ ಆಸ್ತಿ ತೆರಿಗೆಯಿಂದ .1,500 ಕೋಟಿ ಸಂಗ್ರಹವಾಗಿದೆ. ಇದರಿಂದ ಕೂಡಲೇ 12 ತಿಂಗಳ ಜನರಲ್ ಎಲ್‌ಒಸಿ ಬಿಡುಗಡೆ ಮಾಡುವಂತೆ ಮುಖ್ಯ ಆಯುಕ್ತರಿಗೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದರು. ಸಂಘದ ಪ್ರಧಾನ ಪೋಷಕ ಕೆಂಪಣ್ಣ, ಅಧ್ಯಕ್ಷ ಅಂಬಿಕಾಪತಿ, ಕಾರ್ಯಾಧ್ಯಕ್ಷ ಜಿ.ಎಂ.ರವೀಂದ್ರ ಸೇರಿದಂತೆ ಇನ್ನಿತರ ಪದಾಧಿಕಾರಿಗಳಿದ್ದರು.