ಬೆಳಗಾವಿ [ಆ.13]: ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಸೇರಿದಂತೆ ರಾಜ್ಯದ ವಿವಿಧ ದೇವಸ್ಥಾನಗಳಿಂದ ಬೆಳಗಾವಿ ಜಿಲ್ಲೆಯ ಪ್ರವಾಹಪೀಡಿತ ಸಂತ್ರಸ್ತರಿಗೆ 22 ಸಾವಿರ ಸೀರೆಗಳನ್ನು ಕಳುಹಿಸಲಾಗಿದೆ. 

ರೇಣುಕಾ ಯಲ್ಲಮ್ಮ ದೇವಸ್ಥಾನದಿಂದ 5 ಸಾವಿರ ಮತ್ತು ಕಲ​ಬು​ರ​ಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನ ಕಳುಹಿಸಿದ ಒಂದು ಸಾವಿರ ಸೀರೆಗಳನ್ನು ಜಿಲ್ಲಾಡಳಿತಕ್ಕೆ ಸೋಮವಾರ ನೀಡಲಾಯಿತು. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಂಗಳೂರು, ಮೈಸೂರು, ರಾಮನಗರ, ಹಾಸನ, ಚಿತ್ರದುರ್ಗ, ಕೋಲಾರ ಮತ್ತು ಮಂಡ್ಯ ಜಿಲ್ಲೆಯ ದೇವಸ್ಥಾನಗಳಿಂದ 8978 ಸೀರೆಗಳು ಬಂದಿರುತ್ತವೆ. ಉಡುಪಿ, ಮಂಗಳೂರಿನಿಂದ 3500, ಬಳ್ಳಾರಿ, ಕೊಪ್ಪಳ ಜಿಲ್ಲೆಯಿಂದ 3500 ಸೀರೆಗಳು ಬೆಳಗಾವಿ ಜಿಲ್ಲೆಯಿಂದ ಬಂದಿವೆ.