ಮಂಗಳೂರು(ಮೇ.07): ಸಾಮಾಜಿಕ ಅಂತರ ಕಾಪಾಡಿಕೊಂಡು ದೇವಸ್ಥಾನ ತೆರೆಯುವ ಬಗ್ಗೆ ಸದ್ಯದಲ್ಲೇ ನಿರ್ಧಾರ ತೆಗೆದುಕೊಳ್ಳುವುದಾಗಿ ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಬುಧವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಲಾಕ್‌ಡೌನ್‌ ಅವಧಿಯಲ್ಲಿ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ನಿತ್ಯಪೂಜೆಗಳು ನಡೆಯುತ್ತಿವೆ. ಅರ್ಚಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿದೆ. ಅರ್ಚಕರಿಗೆ 33 ಸಾವಿರಕ್ಕೂ ಹೆಚ್ಚು ಆಹಾರ ಕಿಟ್‌ ನೀಡಲಾಗಿದೆ.

ವಿದೇಶದಿಂದ ಬರುವವರಿಗೆ 365 ಕಡೆ ಕ್ವಾರಂಟೈನ್, 6500 ಕೊಠಡಿ ಬುಕ್!

ರಾಮನಗರ ಸೇರಿದಂತೆ ಎರಡು ಜಿಲ್ಲೆಗಳಲ್ಲಿ ಸ್ವಲ್ಪ ತೊಂದರೆಯಾಗಿದೆ. ಅದನ್ನು ನಿವಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಸ್ತಿಕ್‌ ಅರ್ಚಕರಿಗೆ ಮುಂಗಡವಾಗಿ ಹಣ ಕೊಡಲು ಚರ್ಚಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯಲ್ಲಿ ಪೂಜೆ ಮತ್ತು ಅರ್ಚಕರಿಗೆ ಯಾವುದೇ ತೊಂದರೆಯಿಲ್ಲ ಎಂದು ಅವರು ಹೇಳಿದರು.