ಟೆಂಪೋ, ಎರಡು ಬೈಕ್‌ಗಳ ನಡುವೆ ಡಿಕ್ಕಿ: ದಂಪತಿ ಸಾವು, ಮೂರು ಮಕ್ಕಳ ಸ್ಥಿತಿ ಗಂಭೀರ
ಚಿಕ್ಕಬಳ್ಳಾಪುರದಲ್ಲಿ ಟೆಂಪೋ ಹಾಗೂ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ದಂಪತಿ ಸಾವನ್ನಪ್ಪಿದ್ದು, ಮೂರು ಮಕ್ಕಳ ಸ್ಥಿತಿ ಗಂಭೀರವಾಗಿದೆ.
ಚಿಕ್ಕಬಳ್ಳಾಪುರ (ಜು.09): ಟೆಂಪೋ ಹಾಗೂ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ಇಬ್ಬರು ಬೈಕ್ ಸವರಾರರು ಸಾವನ್ನಪ್ಪಿದ್ದಾರೆ. ಇನ್ನು ಬೈಕ್‌ನಲ್ಲಿ ಹೋಗುತ್ತಿದ್ದ ಮೂವರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಮಕ್ಕಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚಿಂತಾಮಣಿ- ಕೋಲಾರ ರಸ್ತೆಯಲ್ಲಿನ ಕಾಚಹಳ್ಳಿ ಗೇಟ್ ಬಳಿ ಟೆಂಪೊ ಹಾಗೂ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು, ಮೂವರು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಇನ್ನು ಬೈಕ್‌ಗೆ ಗುದ್ದಿದ ನಂತರ ಟೆಂಪೋ ಗೂಡ್ಸ್ ಲಾರಿ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೆ ಹೋಗಿ ಡಿಕ್ಕಿ ಹೊಡೆದಿದೆ. ಇದರಿಂದ ಅಪಘಾತದ ಬಳಿಕ ಟೆಂಪೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಸ್ಥಳೀಯರು ಮೊದಲು ಗಾಯಾಳುಗಳನ್ನು ಸ್ಥಳೀಯ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನುಇ ಬೆಂಕಿ ಹೊತ್ತಿಕೊಂಡಿದ್ದ ಟೆಂಪೋಗೆ ನೀರು ಎರಚಿ ಬೆಂಕಿಯನ್ನು ನಂದಿಸಿದ್ದಾರೆ.
ಹೆಂಡ್ತಿ, ಮಕ್ಕಳ ಸಾವಿನ ಸ್ಮಾರಕವಾಗಿ ಬಡಜನರಿಗೆ ಮನೆ ನಿರ್ಮಿಸಿಕೊಟ್ಟ ಕುಟುಂಬ ಪ್ರೇಮಿ
ಚಿಂತಾಮಣಿ ಪೊಲೀಸರಿಂದ ಸ್ಥಳ ಪರಿಶೀಲನೆ: ಇನ್ನು ಸ್ಥಳಕ್ಕೆ ಆಗಮಿಸಿದ ಚಿಂತಾಮಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ದೇಹಗಳನ್ನು ಪರಿಶೀಲನೆ ಮಾಡಿ ಅವುಗಳನ್ನು ರಸ್ತೆಯಿಂದ ಪಕ್ಕಕ್ಕೆ ಜರುಗಿಸಿದ್ದಾರೆ. ಇನ್ನು ರಸ್ತೆಯಲ್ಲಿ ನಜ್ಜುಗುಜ್ಜಾಗಿದ್ದ ಬೈಕ್‌ಗಳನ್ನು ಕೂಡ ರಸ್ತೆ ಪಕ್ಕಕ್ಕೆ ಎಳೆದುಕೊಂಡು ಇತರೆ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಮತ್ತೊಂದೆಡೆ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಹಾಗೂ ಟೆಂಪೋಗೆ ಬೆಂಕಿ ಹೊತ್ತಿಕೊಂಡು ಆರ್ಥಿಕ ನಷ್ಟ ಉಂಟಾಗುವುದನ್ನು ತಪ್ಪಿಸಿದ್ದಕ್ಕೆ ಸಾರ್ವಜನಿಕರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಟೊಮೆಟೋ ತುಂಬಿದ ವಾಹನಕ್ಕೆ ಡಿಕ್ಕಿ: ಬೈಕ್ ಹಾಗೂ ಸ್ಕೂಟಿಗೆ ಟೊಮೆಟೊ ತುಂಬಿದ ಟೆಂಪೊ ಡಿಕ್ಕಿ (Accident) ಹೊಡೆದು ದಂಪತಿ ಸಾವನ್ನಪ್ಪಿದ್ದಾರೆ. ಮೃತರನ್ನು ದಂಪತಿ ಶ್ಯಾಮಲಾ (35) ಮತ್ತು ಶ್ರೀರಾಮ್ (40) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ದಂಪತಿಯ ಮೂವರು ಮಕ್ಕಳು ಗಾಯಗೊಂಡಿದ್ದು, ಈ ಪೈಕಿ ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ. ಸದ್ಯ ಮಕ್ಕಳನ್ನು ಚಿಂತಾಪಣಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನ್ನಭಾಗ್ಯ ಯೋಜನೆಗೆ ಮತ್ತೆರಡು ಷರತ್ತುಗಳು ಅನ್ವಯ: ನೀವು ಹಣ ಪಡೆಯಲು ಅರ್ಹರೇ..
ಕೋಲಾರದಿಂದ ಚಿಂತಾಮಣಿಗೆ ಹೊರಟಿದ್ದ ದಂಪತಿ: ಕೋಲಾರ ಕಡೆಯಿಂದ ಚಿಂತಾಮಣಿ ಕಡೆಗೆ ದಂಪತಿ ಪ್ರತ್ಯೇಕ ವಾಹನದಲ್ಲಿ ಬರುತ್ತಿದ್ದರು. ಒಂದು ಮಗುವಿನ ಜೊತೆ ಶ್ಯಾಮಲ ಸ್ಕೂಟಿಯಲ್ಲಿ ಹಾಗೂ ಇಬ್ಬರು ಮಕ್ಕಳೊಂದಿಗೆ ಶ್ರೀರಾಮ್ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಮುಂಭಾಗದಿಂದ ಬಂದ ಟೊಮೆಟೊ ತುಂಬಿದ ಟೆಂಪೊ ಸ್ಕೂಟಿ ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಶ್ಯಾಮಲ ಮತ್ತು ಶ್ರೀರಾಮ್ ಟೆಂಪೊ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ಮಕ್ಕಳಿಗೆ ಗಾಯಗಳಾಗಿದ್ದು, ಈ ಪೈಕಿ ಒಂದು ಮಗುವಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಮಕ್ಕಳನ್ನು ಕೋಲಾರದ ಎಸ್ಎನ್ಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.