ಮದುವೆ ದಿಬ್ಬಣದ ಟೆಂಪೊ ಪಲ್ಟಿ: 20 ಮಂದಿಗೆ ಗಾಯ, ತಪ್ಪಿದ ಭಾರೀ ದುರಂತ

*  ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿ ಅಘನಾಶಿನಿ ಮಾಸ್ತಿಕಟ್ಟೆಯ ಘಟ್ಟದ ಬಳಿ ನಡೆದ ಘಟನೆ
*  ಗಾಯಾಳುಗಳನ್ನ ಸರ್ಕಾರಿ ಆಸ್ಪತ್ರೆಗೆ ದಾಖಲು 
*  ಅಗತ್ಯ ಚಿಕಿತ್ಸೆ ಒದಗಿಸುವಂತೆ ಆಸ್ಪತ್ರೆಯ ವೈದ್ಯರಿಗೆ ಸೂಚನೆ ನೀಡಿದ ಶಾಸಕ ದಿನಕರ ಶೆಟ್ಟಿ 
 

Tempo Overturn at Kumta in Uttara Kannada grg

ಕುಮಟಾ(ಮೇ.26): ವಿವಾಹ ಸಮಾರಂಭ ಮುಗಿಸಿ ವಾಪಸಾಗುತ್ತಿದ್ದಾಗ ಟೆಂಪೊವೊಂದು ಪಲ್ಟಿಯಾಗಿ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಅಘನಾಶಿನಿ ಮಾಸ್ತಿಕಟ್ಟೆಯ ಘಟ್ಟದ ಬಳಿ ಬುಧವಾರ ನಡೆದಿದೆ.

"

ಅಘನಾಶಿನಿಯ ಮೇಲಿನಕೇರಿ ನಿವಾಸಿಗಳಾದ ನಿರ್ಮಲ ಗೌಡ, ತಿಮ್ಮಪ್ಪ ಗೌಡ, ಕಮಲ ಗೌಡ, ಪಾರ್ವತಿ ಗೌಡ, ಗಣಪಿ ಗೌಡ, ಕನ್ನೆ ಗೌಡ, ತಿಮ್ಮಕ್ಕ ಗೌಡ ಎಂಬುವವರು ಗಂಭೀರ ಗಾಯಗೊಂಡವರು. ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಗಂಭೀರ ಗಾಯಗೊಂಡವರ ಪೈಕಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಪಟ್ಟಣದ ನೆಲ್ಲಿಕೇರಿಯ ಮಹಾಸತಿ ಸಭಾಭವನದಲ್ಲಿ ಮದುವೆ ಮುಗಿಸಿ, ವಧುವಿನ ಕಡೆಯವರ ಟೆಂಪೋ ಮನೆಗೆ ತೆರಳುತ್ತಿತ್ತು. ಈ ವೇಳೆ ಅಘನಾಶಿನಿಯ ಮಾಸ್ತಿಕಟ್ಟೆಯ ಘಟ್ಟದ ಬಳಿ ತೆರಳುತ್ತಿದ್ದಾಗ ಪಲ್ಟಿಯಾಗಿ, ರಸ್ತೆ ಪಕ್ಕದ ಕಂದಕಕ್ಕೆ ಉರುಳಿದೆ. ಟೆಂಪೋದಲ್ಲಿ ಮಿತಿ ಮೀರಿ ಪ್ರಯಾಣಿಕರನ್ನು ಹತ್ತಿಸಿಕೊಂಡಿದ್ದರು ಎನ್ನಲಾಗಿದೆ.

Karwar: ರೈತರಿಗೆ 'ಸೈನಿಕ' ಹುಳಗಳ ಕಾಟ: ಸಂಕಷ್ಟದಲ್ಲಿ ಅನ್ನದಾತ..!

ಘಟ್ಟಏರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಪಲ್ಟಿಯಾಗಿದೆ. ಟೆಂಪೊದಲ್ಲಿದ್ದ 20ಕ್ಕೂ ಅಧಿಕ ಜನರಿಗೆ ಗಾಯಗಳಾಗಿದ್ದು, ಅದರಲ್ಲಿ ಏಳೆಂಟು ಮಂದಿಗೆ ಗಂಭೀರ ಗಾಯಗಳಾಗಿವೆ.
ಪಲ್ಟಿಯಾಗಿ ಕಂದಕಕ್ಕೆ ಬಿದ್ದ ಟೆಂಪೋವನ್ನು ಕ್ರೇನ್‌ ಮೂಲಕ ಮೇಲಕ್ಕೆತ್ತಲಾಗಿದೆ. ಅಪಘಾತ ನಡೆದ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರಿಂದ ಪ್ರಯಾಣಿಕರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲು ಅನುಕೂಲವಾಯಿತು.

ಘಟನೆ ಕುರಿತು ತಿಳಿಯುತ್ತಿದ್ದಂತೆ ಕುಮಟಾ ಶಾಸಕ ದಿನಕರ ಶೆಟ್ಟಿ ಕುಮಟಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಅಗತ್ಯ ಚಿಕಿತ್ಸೆಯನ್ನು ಒದಗಿಸುವಂತೆ ಆಸ್ಪತ್ರೆಯ ವೈದ್ಯರಿಗೆ ಸೂಚನೆ ನೀಡಿದ್ದಾರೆ.
 

Latest Videos
Follow Us:
Download App:
  • android
  • ios