ಬಿಎಸ್‌ವೈ ಮತ್ತೆ ಸಿಎಂ: ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

ಬಿ. ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಚಿಕ್ಕಮಗಳೂರಿನ ತರೀಕೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಬಿಎಸ್‌ವೈ ಪರ ಘೋಷಣೆ ಕೂಗಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

Tharikere BJP Workers celebrates BS Yeddyurappas Victory

ಚಿಕ್ಕಮಗಳೂರು(ಜು.27): ಬಿಜೆಪಿ ಕಾರ್ಯಕರ್ತರು ವತಿಯಿಂದ ಪಟ್ಟಣದಲ್ಲಿ ಪುರಸಭೆ ಮುಂಭಾಗದಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಕ್ಕಾಗಿ, ಪಟಾಕಿ ಸಿಡಿಸಿ ಜಯಘೋಷ ಮಾಡಿ ಸಂಭ್ರಮಿಸಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಜ್‌ಕುಮಾರ್‌ ಮಾತನಾಡಿ, ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಸಂತೋಷ ತಂದಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಆಗಿರುವುದು ರಾಜದ ಸಂಪೂರ್ಣ ಅಭಿವೃದ್ಧಿಗೆ ಪೂರಕವಾಗಿದೆ ಎಂದು ತಿಳಿಸಿದರು.

ಶಿವಮೊಗ್ಗ: ಬಿಎಸ್‌ವೈ ತವರೂರಲ್ಲಿ ಸಂಭ್ರಮವೋ.. ಸಂಭ್ರಮ..!

ಮುಖಂಡರಾದ ಟಿ.ಜಿ. ಸದಾನಂದ್‌ ಮಾತನಾಡಿ, ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಸಂತೋಷ ತಂದಿದೆ. ಪ್ರಮಾಣ ವಚನ ಸ್ವೀಕರಿಸುತ್ತಿದ್ದ ಹಾಗೆ ಉತ್ತಮ ಮಳೆಯಾಗುವ ಲಕ್ಷಣಗಳು ಕಂಡುಬರುತ್ತಿರುವುದು ಶುಭ ಸಂಕೇತ ಎಂದು ಹೇಳಿದರು.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ನಗರಾಧ್ಯಕ್ಷರಾದ ಶಿವಮೂರ್ತಿ ಮಾತನಾಡಿ, ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಸಂತೋಷ ತಂದಿದೆ. ಹೆಚ್ಚು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಪಕ್ಷದ ಕಾರ್ಯಕರ್ತರಾದ ಕಾಂತರಾಜ್‌, ವಿಜಯಕುಮಾರ್‌, ಬುಡೇನ್‌ ಸಾಬ್‌, ಕುಮಾರ್‌, ಗೋವಿಂದಪ್ಪ ಮತ್ತಿತರರು ಭಾಗವಹಿಸಿದ್ದರು.

Latest Videos
Follow Us:
Download App:
  • android
  • ios