Asianet Suvarna News Asianet Suvarna News

ತೆಂಗು ಬೆಳೆಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ಧಾವಿಸಲಿ : ಬಿಜೆಪಿ ಮುಖಂಡ ಕೆ.ಎಸ್. ಸದಾಶಿವಯ್ಯ

ತುಮಕೂರು ಸೇರಿದಂತೆ ಅಕ್ಕಪಕ್ಕ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ತೆಂಗು ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಕೊಬ್ಬರಿ ಬೆಲೆ ಕುಸಿತದಿಂದಾಗಿ ರೈತರು ಕಂಗಾಲಾಗಿದ್ದು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಜಿಲ್ಲೆಯ ತೆಂಗು ಬೆಳೆಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ಧಾವಿಸಬೇಕೆಂದು ಜಿಲ್ಲಾ ಕೃಷಿ ಸಮಾಜದ ಪ್ರತಿನಿಧಿ ಹಾಗೂ ಬಿಜೆಪಿ ಮುಖಂಡ ಕೆ.ಎಸ್. ಸದಾಶಿವಯ್ಯ ಆಗ್ರಹ ಪೂರ್ವಕ ಮನವಿ ಮಾಡಿದ್ದಾರೆ.

The central government should  support coconut farmers: BJP leader K.S. Sadashivaiah snr
Author
First Published Dec 26, 2023, 9:33 AM IST

ತಿಪಟೂರು: ತುಮಕೂರು ಸೇರಿದಂತೆ ಅಕ್ಕಪಕ್ಕ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ತೆಂಗು ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಕೊಬ್ಬರಿ ಬೆಲೆ ಕುಸಿತದಿಂದಾಗಿ ರೈತರು ಕಂಗಾಲಾಗಿದ್ದು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಜಿಲ್ಲೆಯ ತೆಂಗು ಬೆಳೆಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ಧಾವಿಸಬೇಕೆಂದು ಜಿಲ್ಲಾ ಕೃಷಿ ಸಮಾಜದ ಪ್ರತಿನಿಧಿ ಹಾಗೂ ಬಿಜೆಪಿ ಮುಖಂಡ ಕೆ.ಎಸ್. ಸದಾಶಿವಯ್ಯ ಆಗ್ರಹ ಪೂರ್ವಕ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶಿಸಿ ಕನಿಷ್ಠ ಬೆಂಬಲ ಬೆಲೆಯಡಿ ಪ್ರತಿ ಕ್ವಿಂಟಾಲ್ ಕೊಬ್ಬರಿಯನ್ನು ೧೫ಸಾವಿರ ರು. ದರದಲ್ಲಿ ನಫೆಡ್ ಮೂಲಕ ಖರೀದಿಸಬೇಕೆಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಭೀಕರ ಬರಗಾಲದಿಂದ ಕಷ್ಟ ನಷ್ಟ ಅನುಭವಿಸಿರುವ ತೆಂಗು ಬೆಳೆಗಾರರಿಗೆ ಪ್ರತಿ ಎಕರೆಗೆ ೫೦ಸಾವಿರ ರು. ವಿಶೇಷ ಬರ ಪರಿಹಾರ ನೀಡಬೇಕು.

ತೆಂಗು ಬೆಳೆಗಾರರಿಗೆ ತೆಂಗು ಅಭಿವೃದ್ಧಿ ಮಂಡಳಿ ಮೂಲಕ ಕೀಟ ಮತ್ತು ರೋಗ ನಿಯಂತ್ರಿಸಲು ಪ್ರತಿ ಎಕರೆಗೆ ೨೫ಸಾವಿರ ರು. ಪ್ಯಾಕೇಜ್ ನೀಡಬೇಕು. ಕೇಂದ್ರ ಸರ್ಕಾರ ರೈತ ಸಮುದಾಯದ ಕುಂದುಕೊರತೆಗಳನ್ನು ಶೀಘ್ರ ಪರಿಹರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಸದಾಶಿವಯ್ಯ ಒತ್ತಾಯಿಸಿದ್ದಾರೆ.

ತೆಂಗು ಕೊಬ್ಬರಿಗೆ ಹೆಚ್ಚುವರಿ ದರ ನಿಗದಿಪಡಿಸಿ

ಕೆ.ಆರ್.ಪೇಟೆ (ಡಿ.21): ರಾಜ್ಯಾದ್ಯಂತ ಕೊಬ್ಬರಿ ಬೆಳೆಗಾರರು ಬೆಲೆ ಕುಸಿತದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಕೇಂದ್ರ ಸರ್ಕಾರ ರೈತರ ನೆರವಿಗೆ ಧಾವಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನೇತೃತ್ವದಲ್ಲಿ ಜೆಡಿಎಸ್ ಶಾಸಕರು ಕೇಂದ್ರ ಕೃಷಿ, ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿತು. ಸಂಸದ ಪ್ರಜ್ವಲ್ ರೇವಣ್ಣ, ಜೆಡಿಎಸ್ ಶಾಸಕರಾದ ಎಚ್.ಡಿ.ರೇವಣ್ಣ, ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಹಾಗೂ ಹಾಸನ ಶಾಸಕ ಸ್ವರೂಪ್ ಪ್ರಕಾಶ್, ಕೆ.ಆರ್.ಪೇಟೆ ಶಾಸಕ ಎಚ್.ಟಿ.ಮಂಜು ನಿಯೋಗದೊಂದಿಗೆ ದೆಹಲಿಗೆ ತೆರಳಿ ಮಾಜಿ ಪ್ರಧಾನಿ ದೇವೇಗೌಡರ ಮೂಲಕ ಕೃಷಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಈ ಕುರಿತು ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ ಕೆ.ಆರ್.ಪೇಟೆ ಶಾಸಕ ಎಚ್.ಟಿ.ಮಂಜು, ಕೆ.ಆರ್.ಪೇಟೆ ತಾಲೂಕು ಸೇರಿದಂತೆ ಮಂಡ್ಯ ಮತ್ತು ಹಾಸನ ಜಿಲ್ಲೆಗಳ ರೈತರು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಮಂಡ್ಯ ಜಿಲ್ಲೆ ಮತ್ತು ಹಾಸನ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ತೆಂಗು ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಕೊಬ್ಬರಿ ಬೆಲೆ ಕುಸಿತದಿಂದ ತೆಂಗು ಬೆಳೆಗಾರ ರೈತರು ಸಂಕಷ್ಠಕ್ಕೆ ಸಿಲುಕಿದ್ದಾರೆ ಎಂದರು.

ಸಿದ್ದು ಸರ್ಕಾರದ ಯೋಜನೆಯಿಂದ ಈ ವರ್ಷ 50 ಲಕ್ಷ ಮಂದಿ ಭಕ್ತರಿಂದ ಮಹದೇಶ್ವರನ ದರ್ಶನ!

ನಮ್ಮ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ಕೇಂದ್ರದಿಂದ ಅಗತ್ಯ ನೆರವು ಪಡೆಯುವ ಉದ್ದೇಶದಿಂದ ಜೆಡಿಎಸ್ ಶಾಸಕರ ನಿಯೋಗದೊಂದಿಗೆ ನಾನು ದೆಹಲಿಗೆ ಆಗಮಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ದೆಹಲಿ ನಿವಾಸದಲ್ಲಿ ಗೌಡರೊಂದಿಗೆ ಸಮಸ್ಯೆಗಳನ್ನು ಚರ್ಚಿಸಿ ಅನಂತರ ದೇವೇಗೌಡರ ನೇತೃತ್ವದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.

ನಮ್ಮೆಲ್ಲರ ಪರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾತನಾಡಿ, ಕಳೆದ ಕೆಲ ವರ್ಷ ಕೋವಿಡ್ ನಿಂದಾಗಿ, ನಂತರ ಕೊಬ್ಬರಿ ಬೆಳೆಗೆ ಬೆಲೆ ಇಲ್ಲದಂತಾಗಿ ರೈತರು ಕಂಗಾಲಾಗಿದ್ದಾರೆ. ತೀರಾ ಸಂಕಷ್ಟ ಎದುರಿಸುತ್ತಿರುವ ರೈತ ಸಮುದಾಯವನ್ನು ಉಳಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಆದ್ದರಿಂದ ನಾಫೆಡ್‌ನಿಂದ ಕೊಬ್ಬರಿ ಖರೀದಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಮನವಿ ಮಾಡಿದರು ಎಂದರು.

Follow Us:
Download App:
  • android
  • ios