Hijab Row: ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗುವುದು ಖಚಿತ: ಈಶ್ವರಪ್ಪ!
*ದಮ್ ಇದ್ದರೆ ಮಸೀದಿಗೆ ಮಹಿಳೆಗೆ ಪ್ರವೇಶ ಕೊಡಿಸಿ: ಈಶ್ವರಪ್ಪ
*ರಾಜ್ಯಾದ್ಯಂತ ವ್ಯಾಪಿಸಿದ ಹಿಜಾಬ್ Vs ಕೇಸರಿ ಗದ್ದಲ
*ಬಹುತೇಕ ಜಿಲ್ಲೆಗಳಲ್ಲಿ ಹಿಜಾಬ್ ಪರ, ವಿರೋಧ ಪ್ರತಿಭಟನೆ
ಮೈಸೂರು : (ಫೆ.8): ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗುವುದು ಖಚಿತ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ (K S Eshwarappa) ಹೇಳಿದ್ದಾರೆ. ಉಡುಪಿಯ ಕಾಲೇಜೊಂದರಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯ ವ್ಯಾಪಿ ತನ್ನ ಆಳ ಅಗಲವನ್ನು ವಿಸ್ತರಿಸಿಕೊಂಡಿದ್ದು, ರಾಜ್ಯದ ಮೂಲೆ ಮೂಲೆಗಳಲ್ಲಿಯೂ ಪರ ವಿರೋಧ ಪ್ರತಿಭಟನೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ ನಂತರ ವಿವಾದದ ಕಿಚ್ಚು ಮತ್ತಷ್ಟು ಹೆಚ್ಚಿದೆ.
ಮೈಸೂರಿನಲ್ಲಿ ಮಾತಾನಡಿದ ಸಚಿವ ಕೆ ಎಸ್ ಈಶ್ವರಪ್ಪ ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ ಎಂದು ಹೇಳಿದ್ದಾರೆ. " ಈ ಹಿಂದೆ ಗೋ ಹತ್ಯೆ ನಿಷೇಧವನ್ನು ಉಡುಪಿಯಲ್ಲೇ ಮಾಡಿದ್ದರು. ಆಗ ಸಿದ್ದರಾಮಯ್ಯ ಸಿಎಂ ಅಧಿಕಾರ ಕಳೆದುಕೊಂಡರು. ಚಾಮುಂಡೇಶ್ವರಿಯಲ್ಲೂ ಸೋತರು. ಹಿಜಾಬ್ ವಿವಾದದ ಹಿಂದೆ ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷ ಇದೆ. ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಮುಖಂಡರಿಂದ ಈ ಕೆಲಸ ಮಾಡುತ್ತಿದ್ದಾರೆ" ಎಂದು ಹೇಳಿದ್ದಾರೆ.
ಇದನ್ನೂ ಓದಿ: Hijab Row: ರಾಜ್ಯಾದ್ಯಂತ ವ್ಯಾಪಿಸಿದ ಹಿಜಾಬ್ ಗದ್ದಲ: ಬಹುತೇಕ ಜಿಲ್ಲೆಗಳಲ್ಲಿ ಪರ, ವಿರೋಧ ಪ್ರತಿಭಟನೆ!
ವಿದ್ಯಾರ್ಥಿನಿಯರಿಗೆ ತಿಳುವಳಿಕೆ ನೀಡಬಹುದಿತ್ತು: "ಕಾಂಗ್ರೆಸ್ ಮುಖಂಡರು ಮನಸ್ಸು ಮಾಡಿದ್ದರೆ ಸಮಸ್ಯೆ ಬಗರಹರಿಸಬಹುದಿತ್ತ. ಆದರೆ ಕಾಂಗ್ರೆಸ್‌ಗೆ ಮುಸ್ಲಿಂ ಮತಗಳೇ ಮುಖ್ಯವಾದವು. ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಹಿಂದೆ ವೀರಶೈವ ಲಿಂಗಾಯತ ಧರ್ಮ. ನಂತರ ಮತಾಂತರ ಹಾಗೂ ಗೋಹತ್ಯೆ ವಿಷಯ. ಈಗ ಹಿಜಾಬ್ ಅವರ ರಾಜಕೀಯ ವಿಚಾರವಾಗಿದೆ. ಹಿಂದೂ ಮುಸ್ಲಿಂ ಒಡೆದಿದ್ದು ಕಾಂಗ್ರೆಸ್, ಅಪವಾದ ಮಾತ್ರ ಬಿಜೆಪಿ ಮೇಲೆ" ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂವಿಧಾನ ಕಾನೂನು ಗೊತ್ತಿಲ್ಲವಾ?: ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಕೂಡ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. " ಸಿದ್ದರಾಮಯ್ಯ ತಾನು ಎರಡನೇ ಅಂಬೇಡ್ಕರ್ ಅಂತಾ ಹೇಳಿಕೊಳ್ಳುತ್ತಾರೆ. ಅವರಿಗೆ ಸಂವಿಧಾನ ಕಾನೂನು ಗೊತ್ತಿಲ್ಲವಾ ? ಸಿಎಂ ಆಗಿದ್ದವರಿಗೆ ನ್ಯಾಯಾಲಯದ ಆದೇಶ ಕಾನೂನು ಗೊತ್ತಿಲ್ಲವಾ ? ಕೇರಳದ ಹೈ ಕೋರ್ಟ್ ಏನು ಹೇಳಿದೆ ಎಂಬುದನ್ನು ಸಿದ್ದರಾಮಯ್ಯ ಓದಿ ಕೊಳ್ಳಲಿ. ಸರ್ಕಾರದ ಆದೇಶ ಮಾಡಿದೆ ಈ ಬಗ್ಗೆ ಕಾಂಗ್ರೆಸ್ ನಿಲುವ ಸ್ಪಷ್ಟನೆ ಮಾಡಿ. ಕಾನೂನು ಪಾಲನೆ ಮಾಡಬೇಕೋ ಬೇಡವೋ ಸಿದ್ದರಾಮಯ್ಯ ಸ್ಪಷ್ಟಪಡಿಸಲಿ" ಎಂದು ಈಶ್ವರಪ್ಪ ಹೇಳಿದ್ದಾರೆ.
ಇದನ್ನೂ ಓದಿ: Hijab Row: ಪೊಲೀಸರಿಗೆ ಸೂಚನೆ ನೀಡಿದ್ದೇವೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ: ಗೃಹ ಸಚಿವ
ದಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ: ಕಲಬುರಗಿ ಶಾಸಕಿ ಖನೀಜಾ ಫಾತಿಮಾ ಹೇಳಿಕೆ ವಿಚಾರ ಬಗ್ಗೆ ಮಾತನಾಡಿದ ಈಶ್ಚರಪ್ಪ "ದಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ" ಎಂದು ಸವಾಲು ಹಾಕಿದ್ದಾರೆ. "ಹಿಜಾಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ, ನೀವು ಮೊದಲು ಮಸೀದಿಗೆ ಹೋಗಿ, ಎಷ್ಟು ಜನ ಮಹಿಳೆಯರು ಮಸೀದಿಗೆ ಹೋಗಲು ಅವಕಾಶ ಇದೆ ? ನಾವು ಶಾಲೆಗೆ ಮಾತ್ರ ಹಿಜಾಬ್ ನಿಷೇಧಿಸಿದ್ದೇವೆ. ಹೊರಗಡೆಗೆ ನಿಷೇಧ ಮಾಡಿಲ್ಲ. ಎಲ್ಲಾ ಕಡೆ ಹಾಕಿಕೊಂಡು ಹೋಗಬಹುದು" ಎಂದು ಈಶ್ಚರಪ್ಪ ಹೇಳಿದ್ದಾರೆ.
ವಿಕೃತಿಯಿಂದ ಕೂಡಿದ ಹೇಳಿಕೆ: ಇನ್ನು ಹಿಜಾಬ್ ವಿಚಾರದಲ್ಲಿ ಎಂ.ಎಲ್.ಸಿ ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಯಿಸಿದ ಈಶ್ವರಪ್ಪ "ಇಬ್ರಾಹಿಂ ಹೇಳಿಕೆ ವಿಕೃತಿಯಿಂದ ಕೂಡಿದ ಹೇಳಿಕೆ" ಎಂದು ಹೇಳಿದ್ದಾರೆ. ಇದು ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ ಎಂದು ಹೇಳಿರವಯ ಈಶ್ರಪ್ಪ "ಅವರ ಮುಖ ನೋಡಲು ಹಿಜಾಬ್ ತೆಗೆಯಬೇಕಾ ? ಇಬ್ರಾಹಿಂ ಅವರ ಈ ಹೇಳಿಕೆ ಯಾರು ಒಪ್ಪುವಂತದಲ್ಲ
ಸಮವಸ್ತ್ರದ ಹಿನ್ನೆಲೆಯಿಂದ ಈ ಆದೇಶ ಮಾಡಲಾಗಿದೆ" ಎಂದು ಹೇಳಿದ್ದಾರೆ.