Kalaburagi: ಶಿಕ್ಷಣ ಕ್ಷೇತ್ರಕ್ಕೆ ಮಠಗಳ ಕೊಡುಗೆ ಅಪಾರ: ಈಶ್ವರ ಖಂಡ್ರೆ
ಶಿಕ್ಷಣ ಕ್ಷೇತ್ರಕ್ಕೆ ವೀರಶೈವ ಲಿಂಗಾಯತ ಮಠಗಳ ಕೊಡುಗೆ ಅಪಾರ ಎಂದು ಮಾಜಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಕಲಬುರಗಿ (ಡಿ.05): ಶಿಕ್ಷಣ ಕ್ಷೇತ್ರಕ್ಕೆ ವೀರಶೈವ ಲಿಂಗಾಯತ ಮಠಗಳ ಕೊಡುಗೆ ಅಪಾರ ಎಂದು ಮಾಜಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಗರ ಮತ್ತು ಗ್ರಾಮಾಂತರ ಯುವ ಘಟಕದ ವತಿಯಿಂದ ನಗರದ ಸಾರ್ವಜನಿಕ ಉದ್ಯಾನ ಸಮೀಪದ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜಮುಖಿ ಚಿಂತನೆಗಳ ಮೂಲಕ ಇಡೀ ಜಗತ್ತಿನಲ್ಲಿ ಅದ್ಭುತ ಕೆಲಸಗಳನ್ನು ಮಾಡುತ್ತಿರುವ ವೀರಶೈವ-ಲಿಂಗಾಯತ ಸಮಾಜವನ್ನು ಕೇಂದ್ರ ಸರಕಾರ ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತಲೂ ಅಧಿಕ ಅಂಕಗಳನ್ನು ಪಡೆದ 231 ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
Belagavi: ಪೊಲೀಸರು ವರ್ತನೆ ಬದಲಿಸಿಕೊಳ್ಳಬೇಕು: ಸತೀಶ ಜಾರಕಿಹೊಳಿ
ಶರಣಬಸವೇಶ್ವರ ಸಂಸ್ಥಾನದ ಡಾ.ದಾಕ್ಷಾಯಿಣಿ ಅವ್ವಾಜಿ, ಚಿರಂಜೀವಿ ದೊಡ್ಡಪ್ಪ ಅಪ್ಪಾ, ಮುಗಳನಾಗಾಂವಿಯ ಕಟ್ಟಿಮನಿ ಹಿರೇಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು, ಶಹಾಬಜಾರ್ ಚವದಾಪುರಿ ಮಠದ ರಾಜಶೇಖರ ಶಿವಾಚಾರ್ಯರು, ಮಾದನಹಿಪ್ಪರಗಾ ವಿರಕ್ತ ಮಠದ ಅಭಿನವ ಶಿವಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. . ಮಹಾಸಭಾ ಜಿಲ್ಲಾಧ್ಯಕ್ಷ ಶರಣಕುಮಾರ್ ಮೋದಿ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾಸಭಾ ಜಿಲ್ಲಾ ಘಟಕದ ಉಪಾಧ್ಯಕ್ಷ ಸಿದ್ದುಗೌಡ ಅಫಜಲಪುರ ಸ್ವಾಗತಿಸಿದರು. ಕೌರವೇಶ ಪಾಟೀಲ್ ನಿರೂಪಿಸಿದರು.
ಶಹಾಪುರ ಶಾಸಕರು ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವಿದ್ಯಾರ್ಥಿನಿಯರ ವಸತಿ ನಿಲಯದ ಉಸ್ತುವಾರಿ ಅಧ್ಯಕ್ಷ ಶರಣಬಸಪ್ಪ ದರ್ಶನಾಪುರ, ಕೆಕೆಆರ್ಡಿಬಿ ಅಧ್ಯಕ್ಷ ಹಾಗೂ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಬಿ.ಜಿ. ಪಾಟೀಲ್, ಮಾಜಿ ಎಂಎಲ್‌ಸಿ ಅಲ್ಲಮಪ್ರಭು ಪಾಟೀಲ್, ಅಫಜಲಪುರ ಶಾಸಕ ಎಂ.ವೈ.ಪಾಟೀಲ್, ಎಚ್ಕೆಇ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷೆ ಗುರಮ್ಮ ಸಿದ್ಧಾರೆಡ್ಡಿ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ್, ಬಸವ ಸಮಿತಿ ಅಧ್ಯಕ್ಷೆ ಡಾ.ವಿಲಾಸವತಿ ಖೂಬಾ, ಕೆಕೆಸಿಸಿಐ ಮಾಜಿ ಅಧ್ಯಕ್ಷ ಅಮರನಾಥ ಪಾಟೀಲ್, ಹಿರಿಯ ಸಾಹಿತಿ ಅಪ್ಪಾರಾವ್ ಅಕ್ಕೋಣಿ, ಶ್ರೀಶೈಲ ಘೂಳಿ ವೇದಿಕೆಯಲ್ಲಿದ್ದರು.
ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ವಿದ್ಯಾಸಾಗರ ಶಾಬಾದಿ, ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಬಾಬುರಾವ್ ತುಂಬಾ, ಚಂದ್ರಶೇಖರ ಪರಸರೆಡ್ಡಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ್ ಸಜ್ಜನ್, ಮಹಾಸಭಾ ಕಲಬುರಗಿ, ಯಾದಗಿರಿ, ಬೀದರ್ ಉಸ್ತುವಾರಿ ಶಿವನಾಥ ಪಾಟೀಲ್ ಪಾಲ್ಗೊಂಡಿದ್ದರು.
ರಾಜ್ಯದಲ್ಲಿ ಮುಸ್ಲಿಂ ಮಹಿಳಾ ಕಾಲೇಜುಗಳನ್ನು ತೆರೆಯಲು ಅವಕಾಶ ಇಲ್ಲ: ಕೆ.ಎಸ್.ಈಶ್ವರಪ್ಪ
ಸೋಮಶೇಖರ ಹಿರೇಮಠ, ಶರಣು ಟೆಂಗಳಿ, ಗೌರಿ ಚಿಚಕೋಟಿ, ಶೀಲಾ ಮುತ್ತಿನ, ಜ್ಯೋತಿ ಮರಗೋಳ, ಭೀಮಾಶಂಕರ ಮಿಟ್ಟೇಕಾರ, ಎಂ.ಎಸ್.ಪಾಟೀಲ್ ನರಿಬೋಳ, ವೀರೇಶ್ ನೀಲಾ, ಚನ್ನಪ್ಪ ದಿಗ್ಗಾವಿ ಹಾಗೂ ಮಹಾಸಭಾ ಯುವ ಘಟಕದ ಅಧ್ಯಕ್ಷ ಶಂಭುಲಿಂಗ ಬಳಬಟ್ಟಿ, ಅಭಾ ವೀರಶೈವ ಲಿಂಗಾಯತ ಮಹಾಸಭಾದ ಜೇವರ್ಗಿ, ಸೇಡಂ, ಚಿತ್ತಾಪುರ, ಚಿಂಚೋಳಿ, ಆಳಂದ, ಕಾಳಗಿ ಮತ್ತು ಅಫಜಲಪುರ ತಾಲೂಕು ಘಟಕಗಳು ಹಾಗೂ ಮಹಾಸಭಾ ಯುವ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಪೆßೕಷಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.