ದೇಶದ ಭವಿಷ್ಯ ಯುವ ಸಮೂಹದ ಕೈಯಲ್ಲಿದೆ. ಹಾಗಾಗಿ, ಯುವಕರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಿ ಪ್ರತಿ ಚುನಾವಣೆಯಲ್ಲಿ ತಪ್ಪದೆ ಮತ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್ ಹೇಳಿದರು. 

ಬೆಂಗಳೂರು (ಡಿ.10): ದೇಶದ ಭವಿಷ್ಯ ಯುವ ಸಮೂಹದ ಕೈಯಲ್ಲಿದೆ. ಹಾಗಾಗಿ, ಯುವಕರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಿ ಪ್ರತಿ ಚುನಾವಣೆಯಲ್ಲಿ ತಪ್ಪದೆ ಮತ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್ ಹೇಳಿದರು. ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಯುವ ಮತದಾರರ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಜಾಪ್ರಭುತ್ವವನ್ನು ಉಳಿಸಲು ನೀವೆಲ್ಲರೂ ನಿಮ್ಮ ಶಕ್ತಿಯನ್ನು ಉಪಯೋಗಿಸಬೇಕು. ಬದಲಾವಣೆ ತರುವ ಶಕ್ತಿ ಯುವ ಸಮೂಹಕ್ಕೆ ಮಾತ್ರವಿದೆ. ಅದನ್ನು ಸದ್ಬಳಕೆ‌ ಮಾಡಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.

18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಅರ್ಜಿ ಸಲ್ಲಿಸಬಹುದು. ಜತೆಗೆ ವೋಟರ್ ಹೆಲ್ಪ್‌ ಲೈನ್‌ ಆ್ಯಪ್‌ ಮೂಲಕ ಸ್ವಯಂಪ್ರೇರಿತವಾಗಿ ನೋಂದಣಿಯಾಗಬಹುದೆಂದು ತಿಳಿಸಿದರು. ಜಿಲ್ಲಾ ಸ್ವೀಪ್‌ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಕಾಂತರಾಜು, ಸ್ವೀಪ್ ನೋಡಲ್ ಅಧಿಕಾರಿ ಪೂರ್ಣಿಮಾ, ಕಾಲೇಜು‌ ಪ್ರಾಂಶುಪಾಲ ಡಾ। ವೈ.ವೆಂಕಟೇಶಪ್ಪ ಉಪಸ್ಥಿತರಿದ್ದರು.

ಕಾಂಗ್ರೆಸ್‌ ಪಕ್ಷಕ್ಕೆ ಟಯರ್‌ ಪಂಚರ್‌ ಆಗಿದೆ: ಬಿ.ವೈ.ವಿಜಯೇಂದ್ರ ವ್ಯಂಗ್ಯ

ನಿಮ್ಮ ರಸ್ತೆ ಹೇಗಿರಬೇಕು?: ರಸ್ತೆ, ಪಾದಚಾರಿ ಮಾರ್ಗಗಳನ್ನು ನಾಗರಿಕರ ಸುರಕ್ಷತೆ ಮತ್ತು ಅನುಕೂಲದ ದೃಷ್ಟಿಯಲ್ಲಿಟ್ಟುಕೊಂಡು ವಿನ್ಯಾಸ ಮಾಡಬೇಕಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ. ಸುರಕ್ಷಿತ ರಸ್ತೆ ನಿರ್ಮಿಸುವ ಉದ್ದೇಶದಿಂದ ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದ ಡಾ। ರಾಜಕುಮಾರ್‌ ಗಾಜಿನ ಮನೆಯಲ್ಲಿ ಶುಕ್ರವಾರ ಬ್ಲೂಮ್‌ಬರ್ಗ್ ಫಿಲಾಂತ್ರಪೀಸ್ ಇನಿಶಿಯೇಟಿವ್ ಮತ್ತು ಡಬ್ಲ್ಯೂಆರ್‌ಐ ಸಹಯೋಗದಲ್ಲಿ ಆಯೋಜಿಸಿದ್ದ ‘ನಮ್ಮ ರಸ್ತೆ’ ಪ್ರದರ್ಶನ ಮತ್ತು ಕಾರ್ಯಗಾರಕ್ಕೆ ಚಾಲನೆ ನೀಡಿದರು. ಶುಕ್ರವಾರ ಮತ್ತು ಶನಿವಾರ ಎರಡು ದಿನ ಈ ಪ್ರದರ್ಶನ ಮತ್ತು ಕಾರ್ಯಾಗಾರ ನಡೆಯಲಿದೆ.

ನಾಗರಿಕರು, ಸಂಘ ಸಂಸ್ಥೆಗಳು, ವಿನ್ಯಾಸಕರು, ವಿವಿಧ ಶೈಕ್ಷಣಿಕ ಸಂಸ್ಥೆಗಳ ಸಕ್ರಿಯ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ನಗರದ ರಸ್ತೆಗಳ ಸುರಕ್ಷತೆ ಕುರಿತು ಚರ್ಚೆ ನಡೆಸಲಾಗುವುದು. ಸಾರ್ವಜನಿಕರಿಂದ ಸಲಹೆ ಪಡೆಯಲಾಗುವುದು. ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಉತ್ತೇಜಿಸಲು ಈ ಕಾರ್ಯಗಾರ ಆಯೋಜಿಸಲಾಗಿದೆ.

ಈ ವೇಳೆ ಮಾತನಾಡಿದ ತುಷಾರ್‌ ಗಿರಿನಾಥ್‌, ನಮ್ಮ ರಸ್ತೆ ಪ್ರದರ್ಶನ ಹಾಗೂ ಕಾರ್ಯಗಾರವು ಒಳ್ಳೆಯ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಕಾರ್ಯಗಾರದಲ್ಲಿ ಬಂದ ಉತ್ತಮ ಸಲಹೆಗಳನ್ನು ಪರಿಗಣಿಸಲಾಗುವುದು. ಸಾರ್ವಜನಿಕರು ಉಪಯೋಗಿಸುವಂತಹ ರಸ್ತೆ, ಪಾದಚಾರಿ ಮಾರ್ಗಗಳನ್ನು ನಾಗರಿಕರ ಸುರಕ್ಷತೆ ಮತ್ತು ಅನುಕೂಲದ ದೃಷ್ಟಿಯಲ್ಲಿಟ್ಟುಕೊಂಡು ವಿನ್ಯಾಸ ಮಾಡಬೇಕಿದೆ ಎಂದರು.

ಉದ್ದಿಮೆಗಳ ಮಾರಾಟ ಮಾಡಿದ್ದು ಬಿಟ್ರೆ ಬಿಜೆಪಿ ಏನೂ ಮಾಡಿಲ್ಲ: ಎಚ್.ವಿ.ಕುಮಾರಸ್ವಾಮಿ

ಈ ವೇಳೆ ಗ್ಲೋಬಲ್ ಅರ್ಬನ್ ಮೊಬಿಲಿಟಿಯ ಉಪ ನಿರ್ದೇಶಕ ಕ್ಲೌಡಿಯಾ ಆಡ್ರಿಯಾಜೋಲಾ-ಸ್ಟೀಲ್, ಜಾಗತಿಕ ರಸ್ತೆ ಸುರಕ್ಷತೆಗಾಗಿ ಬ್ಲೂಮ್‌ಬರ್ಗ್ ಫಿಲಾಂತ್ರಪೀಸ್ ಇನಿಶಿಯೇಟಿವ್‌ನ ವೈಟಲ್ ಸ್ಟ್ರಾಟಜೀಸ್ (ರಸ್ತೆ ಸುರಕ್ಷತೆ)ನಲ್ಲಿ ಹಿರಿಯ ವ್ಯವಸ್ಥಾಪಕರಾದ ಲೀವಾಂಟಾ ಮಿಲ್ಲರ್, ಎಂಜಿನಿಯರಿಂಗ್ ವಿಭಾಗದ ಪ್ರಧಾನ ಅಭಿಯಂತರ ಪ್ರಹ್ಲಾದ್ ಉಪಸ್ಥಿತರಿದ್ದರು.