ಆರೋಗ್ಯಪೂರ್ಣ ಸಮಾಜದಲ್ಲಿ ಮಹಿಳೆ ಪಾತ್ರ ದೊಡ್ಡದು
ಮೈಸೂರು ಡಿಸ್ಟ್ರಿಕ್ಟ್ ಕೆಮಿಸ್ಟ್$್ಸ ಆ್ಯಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ಹಾಗೂ ಸುವರ್ಣ ಕರ್ನಾಟಕ ಕೆಮಿಸ್ಟ್ ್ಸ ಆ್ಯಂಡ್ ಡಿಸ್ಟ್ರಿಬ್ಯೂಟರ್ಸ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಮೈಸೂರು : ಮೈಸೂರು ಡಿಸ್ಟ್ರಿಕ್ಟ್ ಕೆಮಿಸ್ಟ್$್ಸ ಆ್ಯಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ಹಾಗೂ ಸುವರ್ಣ ಕರ್ನಾಟಕ ಕೆಮಿಸ್ಟ್ ್ಸ ಆ್ಯಂಡ್ ಡಿಸ್ಟ್ರಿಬ್ಯೂಟರ್ಸ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಿ, ಮಹಿಳೆಯರ ಸಮಾನತೆಯೊಂದಿಗೆ ಸಮಾಜ ಸಾಗಬೇಕು ಎಂಬ ದೃಷ್ಟಿಯಿಂದಲೇ ಈ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಾರಂಭವಾಗಿದೆ. ಬಹಳಷ್ಟುಕಾಲದಿಂದಲೂ ಪುರುಷ ಪ್ರಧಾನವಾಗಿಯೇ ಈ ಸಮಾಜ ಬೆಳೆದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರನ್ನು ಪುರುಷರಿಗಿಂತ ಹೆಚ್ಚು ಮಹಿಳೆಯರೇ ಚುಚ್ಚು ಮಾತುಗಳನ್ನು ಆಡುವುದು, ನಡವಳಿಕೆಗಳಲ್ಲಿ ಅನುಮಾನಿಸುವುದು, ಇಲ್ಲಸಲ್ಲದ ಆರೋಪವನ್ನು ಮಾಡುವುದು ಹೆಚ್ಚಾಗಿವೆ ಎಂದರು.
ಯಾವಾಗ ಮಹಿಳೆಯರು ಮಹಿಳೆಯರನ್ನು ಪ್ರೋತ್ಸಾಹಿಸಿ ಪ್ರತೀ ಒಳ್ಳೆಯ ಕೆಲಸಗಳಿಗೆ ಪ್ರಶಂಶಿಸಿ ಬೆನ್ನು ತಟ್ಟುತ್ತಾರೋ ಆಗ ಪ್ರತಿಯೊಬ್ಬ ಮಹಿಳೆಯೂ ಯಶಸ್ಸಿನ ಹಾದಿಯಲ್ಲಿ ಸಾಗಬಹುದು ಎಂದು ತಿಳಿಸಿದರು.
ಬಸವಣ್ಣನ ಕಾಲದಿಂದಲೇ ಹೆಣ್ಣಿಗೆ ಸಮಾನತೆಯ ಸ್ಥಾನಮಾನವನ್ನು ನೀಡಿ ಅನುಭವ ಮಂಟಪದಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸುವ ಮೂಲಕ ಮಹಿಳಾ ಸಮಾನತೆಯನ್ನು ಸಾರಿದ್ದರು. ಡಾ.ಬಿ.ಆರ್. ಅಂಬೇಡ್ಕರ್ ಅವರು ಮಹಿಳೆಯರ ಸಮಾನತೆಗಾಗಿ ನೂರಾರು ವಿಷಯಗಳನ್ನು ಸಂವಿಧಾನದಲ್ಲಿ ಅಡಕ ಮಾಡುವ ಮೂಲಕ ಹೆಣ್ಣಿನ ಬೆಳವಣಿಗೆಗೆ, ಸಶಕ್ತಿಗೆ ಒತ್ತು ನೀಡಿದ್ದಾಗಿ ಹೇಳಿದರು.
ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಡಾ. ಭಾವನಾ ಮಾತನಾಡಿ, ಮಹಿಳಾ ದಿನಾಚರಣೆ ಕೇವಲ ಶಿಷ್ಠಾಚಾರದ ಕಾರ್ಯಕ್ರಮಗಳಾಗುತ್ತಿವೆ. ಆದರೆ ಯಾವಾಗ ಮಹಿಳೆಯರಿಗೆ ಲಿಂಗ ಸಮಾನತೆ ಸಿಗುತ್ತದೆಯೋ ಅಂದಿಗೆ ಈ ಆಚರಣೆಗೆ ಅರ್ಥ ಬರುತ್ತದೆ. ಹೆಣ್ಣಿಗೆ ಪ್ರತಿ ಹಂತದಲ್ಲೂ ಹಲವು ಅಡೆತಡೆಗಳು ಬರುತ್ತವೆ. ಹುಟ್ಟಿನಿಂದ ಪ್ರಾರಂಭವಾಗಿ ಶಿಕ್ಷಣ, ಉದ್ಯೋಗ, ವಿವಾಹದ ಹಂತಗಳಲ್ಲೂ ಪೋಷಕರಿಂದ ರಕ್ಷಣೆಯ ನೆಪದಲ್ಲಿ ಅಡೆತಡೆಗಳು ಬರುತ್ತವೆ ಎಂದರು.
ಡಾ.ಎಸ್. ನಾಗರಾಜ್, ನಾಜಿಯಾ, ಸುಮಾ ಮಂಜುನಾಥ್, ಹರೀಶ್, ರಮೇಶ್ ನಿಡ್ವಾಣಿ, ಅಸೋಸಿಯೇಷನ್ ಅಧ್ಯಕ್ಷ ಕೆ.ವಿ. ಪ್ರಕಾಶ್, ಕಾರ್ಯದರ್ಶಿ ಎಸ್. ಮಂಜುನಾಥ್, ಸುನಿಲ್ ಇದ್ದರು.
ಮಹಿಳಾ ಸಬಲೀಕರಣಕ್ಕೆ ಬಿಜೆಪಿ ಸರ್ಕಾರ ಬದ್ಧ
ತುಮಕೂರು (ಮಾ.18): ಡಬಲ್ ಎಂಜಿನ್ ಸರ್ಕಾರ ಮಹಿಳಾ ಸಬಲೀಕರಣ ಮತ್ತು ಮಹಿಳೆಯರ ಶಿಕ್ಷಣಕ್ಕೆ ಒತ್ತು ನೀಡಿ, ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ತಾಲೂಕಿನ ನಾಗವಲ್ಲಿ ಸಮೀಪದ ಬಾಣಾವಾರ ಗೇಟ್‌ನಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಭೇಟಿ ಬಚಾವೋ, ಭೇಟಿ ಪಡಾವೋ ಸೇರಿದಂತೆ ಹಲವಾರು ಯೋಜನೆಗಳ ಮೂಲಕ ನಾರಿಶಕ್ತಿಯ ಅಭ್ಯುದಯಕ್ಕೆ ಕಂಕಣ ಬದ್ಧರಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದುಡಿಯುತ್ತಿದೆ ಎಂದರು.
ರಾಜ್ಯದಲ್ಲಿ ಹೆಣ್ಣು ಮಕ್ಕಳು ಕಡಿಮೆ ಆಗುತ್ತಿದ್ದಾರೆ ಎನ್ನುವುದನ್ನು ಗಮನಿಸಿ 2008ರಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಭಾಗ್ಯಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದರು. ಹೆಣ್ಣು ಮಕ್ಕಳ ಬಗ್ಗೆ ಚಿಂತಿಸುವ ಸರ್ಕಾರ ಎಂದರೆ ಅದು ಬಿಜೆಪಿ ಮಾತ್ರ. ಮೋದಿ ಸರ್ಕಾರ ಉದ್ಯೋಗಸ್ಥ ಮಹಿಳೆಯರಿಗೆ 26 ವಾರಗಳ ಹೆರಿಗೆ ರಜೆ ಮಾಡಿದ್ದಾರೆ, ಆರೋಗ್ಯಕ್ಕಾಗಿ ಆಯುಷ್ಮಾನ್ ಕಾರ್ಡ್ ಅನ್ನು ಜಾರಿಗೆ ತಂದಿದೆ. ಇಲ್ಲಿರುವ ಶಾಸಕರಿಗೆ ಜನರ ಆರೋಗ್ಯದ ಕಾಳಜಿ ಇದೆಯೋ ಇಲ್ಲವೋ ಗೊತ್ತಿಲ್ಲ, ಸುರೇಶ್ ಗೌಡರು ಶಾಸಕರಾಗಿದ್ದರೆ ಮನೆಮನೆಗೆ ಯೋಜನೆ ತಲುಪಿಸುತ್ತಿದ್ದರು. ದೇಶದ ಎಲ್ಲ ಮನೆಗಳಿಗೆ ನಲ್ಲಿ ನೀರು ಕೊಡಲು ಮೋದಿ ಅವರು ಗ್ರಾಮಾಂತರ ಕ್ಷೇತ್ರಕ್ಕೆ 150 ಕೋಟಿ ಅನುದಾನ ನೀಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟ ಗ್ಯಾರಂಟಿ: ಸಿ.ಟಿ.ರವಿ
ಕಳೆದ ಐದು ವರ್ಷಗಳಲ್ಲಿ ಅಭಿವೃದ್ಧಿ ಎಂಬುದು ಶೂನ್ಯ. ಶಾಸಕರು ಇದ್ದಾರೋ ಇಲ್ಲವೋ ಎಂಬುದೇ ಜನರಿಗೆ ತಿಳಿಯದಾಗಿದೆ. ಕ್ಷೇತ್ರ ಮತ್ತೊಮ್ಮೆ ಅಭಿವೃದ್ಧಿ ಕಾಣಬೇಕಾದರೆ ಸುರೇಶ್‌ಗೌಡ ಶಾಸಕರಾಗುವಂತೆ ನೀವೆಲ್ಲರೂ ಆಶೀರ್ವಾದ ಮಾಡಬೇಕೆಂದು ಶೋಭಾ ಕರಂದ್ಲಾಜೆ ಮನವಿ ಮಾಡಿದರು. ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ, ಹೊನ್ನಾವರ-ಬೆಂಗಳೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವೆ ಶೋಭಾ ಕರಂದ್ಲಾಜೆ ಕಾರಣ. ಈ ಯೋಜನೆಗೆ ಬಿಎಸ್‌ವೈ ಅವರು ಬೆಂಬಲ ನೀಡಿದ್ದರಿಂದ ಇಂದು ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ದೇಶಕ್ಕೆ ಇಂದು ಮೋದಿ ಹಾಗೂ ಬಿಜೆಪಿ ಅನಿವಾರ್ಯವಾಗಿದೆ. ಹೊರದೇಶಕ್ಕೆ ಹೋಗಿ ದೇಶದ ಪ್ರಜಾಪ್ರಭುತ್ವ ಟೀಕಿಸುವ ವ್ಯಕ್ತಿಯಿಂದ ದೇಶವನ್ನು ಸುಭದ್ರಗೊಳಿಸಲು ಸಾಧ್ಯವಿಲ್ಲ ಎಂದರು.