covid Vaccination: ಲಸಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿದವರು ಮಾಡಿದ್ದೇ ಬೇರೆ : ಎಚ್ಚರ!

  • ಕೊರೋನಾ ಲಸಿಕೆ ಹಾಕುವ ವೈದ್ಯ ಸಿಬ್ಬಂದಿ ಸೋಗಿನಲ್ಲಿ ಮನೆ ಪ್ರವೇಶ
  • ಮನೆಯ ಸದಸ್ಯರಿಗೆ ಪಿಸ್ತೂಲ್‌ ತೋರಿಸಿ ದರೋಡೆ ಮಾಡಿಕೊಂಡು ಪರಾರಿ
Theft  in House after  entering  name Of covid Vaccination in bengaluru snr

 ಬೆಂಗಳೂರು (ನ.30): ಕೊರೋನಾ ಲಸಿಕೆ (Covid vaccine) ಹಾಕುವ ವೈದ್ಯ ಸಿಬ್ಬಂದಿ ಸೋಗಿನಲ್ಲಿ ಮನೆ ಪ್ರವೇಶಿಸಿ, ಬಳಿಕ ಮನೆಯ ಸದಸ್ಯರಿಗೆ ಪಿಸ್ತೂಲ್‌ (Gun) ತೋರಿಸಿ 50 ಗ್ರಾಂ ತೂಕದ ಚಿನ್ನದ ಸರ (Gold chain) ದೋಚಿ ಪರಾರಿಯಾಗಿರುವ ಸಿನಿಮೀಯ ಘಟನೆ ಯಶವಂತಪುರ ಪೊಲೀಸ್‌ ಠಾಣೆ (Yashavanthapura Police station) ವ್ಯಾಪ್ತಿಯಲ್ಲಿ ಹಾಡಹಗಲೇ ನಡೆದಿದೆ.  ಯಶವಂತಪುರದ ಎಸ್‌ಬಿಎಂ ಕಾಲೋನಿ (SBM Colony) ನಿವಾಸಿ ಸಂಪತ್‌ ಸಿಂಗ್‌ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಸಂಪತ್‌ ಸಿಂಗ್‌ ತಾಯಿ ಮತ್ತು ಪತ್ನಿ ಇಬ್ಬರು ಮಾತ್ರ ಮನೆಯಲ್ಲಿದ್ದರು. ಈ ವೇಳೆ ಕಾರು (Car) ಹಾಗೂ ದ್ವಿಚಕ್ರ ವಾಹನದಲ್ಲಿ ಬಂದಿರುವ ನಾಲ್ವರು ದುಷ್ಕರ್ಮಿಗಳು, ತಾವು ಕೊರೋನಾ ಲಸಿಕೆ ನೀಡಲು ಬಂದಿದ್ದೇವೆ ಎಂದು ಮನೆ ಪ್ರವೇಶಿಸಿದ್ದಾರೆ. ಬಳಿಕ ಏಕಾಏಕಿ ಪಿಸ್ತೂಲ್‌ ತೆಗೆದು ಇಬ್ಬರು ಮಹಿಳೆಯರನ್ನು ಹೆದರಿಸಿ, ಬೀರುವಿನಲ್ಲಿರಿಸಿದ್ದ 50 ಗ್ರಾಂ ತೂಕದ ಚಿನ್ನದ ಸರ ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

ಘಟನೆ ಸಂಬಂಧ ಸಂಪತ್‌ ಸಿಂಗ್‌ ಅವರು ದೂರು ನೀಡಿದ ದೂರಿನ (Complaont) ಮೇರೆಗೆ ದುಷ್ಕರ್ಮಿಗಳ ಪತ್ತೆಗೆ ಮುಂದಾಗಿರುವ ಪೊಲೀಸರು, ಘಟನಾ ಸ್ಥಳದ ಸಮೀಪದ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ ಪರಿಶೀಲಿಸಿದ್ದಾರೆ. ಆರೋಪಿಗಳ ಸುಳಿವು ಸಿಕ್ಕಿದ್ದು ಶೀಘ್ರದಲ್ಲೇ ಬಂಧಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಆಟೋ ಚಾಲಕನ ಸೋಗಿನಲ್ಲಿ ದರೋಡೆ :  ರಾತ್ರಿ ವೇಳೆ ಆಟೋ ಹತ್ತಿದ್ದ ಪ್ರಯಾಣಿಕನಿಗೆ ಚಾಕು ತೋರಿಸಿ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಪ್ರಕರಣ ಸಂಬಂಧ ಕುಖ್ಯಾತ ಕಳ್ಳನನ್ನು(Thief) ಉಪ್ಪಾರಪೇಟೆ ಠಾಣೆ ಪೊಲೀಸರು(Police) ಬಂಧಿಸಿದ್ದಾರೆ.

ರಾಜಾನುಕುಂಟೆ ಸಮೀಪದ ಹೊನ್ನೇನಹಳ್ಳಿ ಮನೋಜ್‌ ಕುಮಾರ್‌ ಅಲಿಯಾಸ್‌ ಬಿಸ್ನಿ(19) ಬಂಧಿತ(Arrest). ವಿಚಾರಣೆ ವೇಳೆ ಆರೋಪಿ(Accused) ನೀಡಿದ ಮಾಹಿತಿ ಮೇರೆಗೆ 7 ಲಕ್ಷ ರು. ಮೌಲ್ಯದ 10 ಗ್ರಾಂ ತೂಕದ ಚಿನ್ನದ ಸರ, 2 ಕ್ಯಾಮೆರಾ, ಲೆನ್ಸ್‌ಗಳು, ಕೃತ್ಯಕ್ಕೆ ಬಳಸಿದ್ದ ಆಟೋ(Auto) ರಿಕ್ಷಾ ಹಾಗೂ ಚಾಕು ಜಪ್ತಿ ಮಾಡಲಾಗಿದೆ. ಸದರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯ ಮೂವರು ಸಹಚರರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Fraud: ಸರ್ಕಾರಿ ಕೆಲಸದ ಆಮಿಷವೊಡ್ಡಿ ಕೋಟಿ ಕೋಟಿ ವಂಚನೆ..!

ಆರೋಪಿ ಮನೋಜ್‌ ವಿಚಾರಣೆ ವೇಳೆ ಉಪ್ಪಾರಪೇಟೆ ಠಾಣಾ ವ್ಯಾಪ್ತಿಯಲ್ಲಿ ಸುಲಿಗೆ ಹಾಗೂ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣ ಪತ್ತೆಯಾಗಿದೆ. ಆರೋಪಿಗಳು ನಗರದಲ್ಲಿ ಇದೇ ರೀತಿ ಹಲವು ಕೃತ್ಯ ಎಸೆಗಿರುವ ಸಾಧ್ಯತೆಯಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ಅಗತ್ಯವಿರುವುದರಿಂದ ಆರೋಪಿ ಮನೋಜ್‌ನನ್ನು ನ್ಯಾಯಾಲಯಕ್ಕೆ(Court) ಹಾಜರುಪಡಿಸಿ ವಶಕ್ಕೆ ಪಡೆಯುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಆಟೋ ಓಡಿಸುವಾಗ ಬೀಗ ಹಾಕಿದ ಮನೆಗಳ ಗುರುತಿಸಿ ಕಳವು: ಬಂಧನ

ಬೆಂಗಳೂರು(Bengaluru): ಹಗಲಿನಲ್ಲಿ ಆಟೋ ಓಡಿಸಿಕೊಂಡು ಬೀಗ ಹಾಕಿದ ಮನೆ ಹಾಗೂ ಅಂಗಡಿಗಳನ್ನು ಗುರುತಿಸಿ ಬಳಿಕ ಬೀಗ ಮುರಿದು ಕಳವು ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕುರುಬರಹಳ್ಳಿ ನಿವಾಸಿ ವರದರಾಜು(53) ಬಂಧಿತ. ಈತ ನೀಡಿದ ಮಾಹಿತಿ ಮೇರೆಗೆ 25 ಲಕ್ಷ ರು. ಮೌಲ್ಯದ 455 ಗ್ರಾಂ ಚಿನ್ನಾಭರಣ(Gold) ಹಾಗೂ 12 ಸಾವಿರ ರು. ನಗದು ವಶಡಿಸಿಕೊಳ್ಳಲಾಗಿದೆ. ಕೆಲ ದಿನಗಳ ಹಿಂದೆ ರಾಜಾಜಿನಗರ ಸರಹದ್ದಿನಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಕಳವು ಮಾಡಲಾಗಿತ್ತು. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಆರೋಪಿ ವರದರಾಜು, ಹಲವು ವರ್ಷಗಳಿಂದ ಕಳ್ಳತನ(Theft) ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಹಗಲಿನಲ್ಲಿ ನಗರದಲ್ಲಿ ಆಟೋ ಓಡಿಸಿಕೊಂಡು ಬೀಗ ಹಾಕಿದ ಮನೆ ಹಾಗೂ ಅಂಗಡಿಗಳನ್ನು ಗುರುತಿಸಿಕೊಂಡು ಬಳಿಕ ಮುಂಜಾನೆ 4 ಗಂಟೆ ಸುಮಾರಿಗೆ ಬೀಗ ಮುರಿದು ಮನೆಯಲ್ಲಿ ಸಿಗುವ ಹಣ ಹಾಗೂ ಆಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ. ಈ ಹಿಂದೆ ನಂದಿನಿ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮನೆಗಳವು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ. ಜಾಮೀನಿನ(Bail) ಮೇಲೆ ಹೊರಬಂದು ಮತ್ತೆ ಕೈ ಚಳಕ ತೋರಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಆರೋಪಿಯ ಬಂಧನದಿಂದ ರಾಜಾಜಿನಗರ ಠಾಣೆ ವ್ಯಾಪ್ತಿಯ ನಾಲ್ಕು ಮನೆಗಳವು ಪ್ರಕರಣಗಳು(Cases) ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios