ಸದ್ಯಕ್ಕೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಪ್ರಶ್ನೆ ಇಲ್ಲ: ಸಚಿವ ಕೆ.ಜೆ.ಜಾರ್ಜ್
ಮುಂಬರುವ ಬೇಸಿಗೆಯ ಗರಿಷ್ಠ ಬೇಡಿಕೆ ಅವಧಿಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ದೊಡ್ಡಬಳ್ಳಾಪುರ (ಜ.10): ಮುಂಬರುವ ಬೇಸಿಗೆಯ ಗರಿಷ್ಠ ಬೇಡಿಕೆ ಅವಧಿಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಬೇಸಿಗೆಯಲ್ಲಿ ಅಗತ್ಯ ವಿದ್ಯುತ್ ಪೂರೈಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕೆ ತಕ್ಕಂತೆ ವಿತರಣೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.
ಕಳೆದ ಬೇಸಿಗೆಯಲ್ಲಿ 17 ಸಾವಿರ ಮೆಗಾವ್ಯಾಟ್ ಗರಿಷ್ಠ ಬೇಡಿಕೆ ಬಂದಿತ್ತು. ಅದರಂತೆ ಮುಂಬರುವ ಬೇಸಿಗೆಯಲ್ಲಿ ಎಷ್ಟು ವಿದ್ಯುತ್ ಬೇಕಾಗಬಹುದು ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿಕೊಂಡು ಕೆಪಿಟಿಸಿಎಲ್, ಪಿಸಿಕೆಎಲ್ ಮತ್ತು ಎಸ್‌ಎಲ್‌ಡಿಸಿ ವತಿಯಿಂದ ನಡೆಸಿದ ಸಮೀಕ್ಷೆ ಪ್ರಕಾರ ಗರಿಷ್ಠ ಬೇಡಿಕೆ ಅವಧಿಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಅವಶ್ಯಕತೆ ಬರಬಹುದು ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು. ಅಗತ್ಯ ವಿದ್ಯುತ್ ಪೂರೈಸಲು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಜತೆಗೆ ದೀರ್ಘಾವಧಿ ವಿದ್ಯುತ್ ಖರೀದಿ ಒಪ್ಪಂದದ ಮೂಲಕ ಹೆಚ್ಚುವರಿ ಅಗತ್ಯವಿರುವ ವಿದ್ಯುತ್ ಅನ್ನು ಕಡಿಮೆ ದರಕ್ಕೆ ಖರೀದಿಸಲು ಅನ್ಯ ರಾಜ್ಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದರು. ಮುಂಬರುವ ಬೇಸಿಗೆಯಲ್ಲಿ 19 ಸಾವಿರ ಮೆ.ವ್ಯಾ ವಿದ್ಯುತ್ ಬೇಡಿಕೆ ನಿರೀಕ್ಷೆ. ಇಂಧನ ಇಲಾಖೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನಪ್ರತಿನಿಧಿಗಳು, ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದರು.
ಹೆಚ್ಚುವರಿ ಎರಡು ಗಂಟೆ ವಿದ್ಯುತ್ ಪೂರೈಕೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಕೆ.ಜೆ.ಜಾರ್ಜ್
ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಖರ್ಗೆಗೂ ಸಂಬಂಧವೇನು: ಸಚಿವ ಪ್ರಿಯಾಂಕ್ ಖರ್ಗೆಗೂ ಸಚಿನ್ ಆತ್ಮಹತ್ಯೆಗೂ ಏನು ಸಂಬಂಧ? ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ನೀಡುವ ಅಗತ್ಯ ಇಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಹೇಳಿದರು. ಹೊಸದುರ್ಗ ತಾಲೂಕಿನ ನೀರಗುಂದ ಗ್ರಾಮದಲ್ಲಿ ಸೋಲಾರ್ ಪಾರ್ಕ್ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಕೆ.ರವಿ, ಗಣಪತಿ ಆತ್ಮಹತ್ಯೆ ಪ್ರಕರಣ ಬಗ್ಗೆ ಬಿಜೆಪಿ ಹಗಲು ರಾತ್ರಿ ಧರಣಿ ಮಾಡಿತ್ತು, ವಿಧಾನಸೌಧದಲ್ಲಿ ಧರಣಿ ಕುಳಿತರು, ಮಲಗಿದರು. ಗಣಪತಿ ಆತ್ಮಹತ್ಯೆ ಪ್ರಕರಣ ವಿಚಾರದಲ್ಲಿ ನಾನು ಅಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಿದೆ. ಸಿಐಡಿ ಬಿ ರಿಪೋರ್ಟ್ ನೀಡಿತು, ಸಿಬಿಐ, ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ಏನಾಯ್ತು ಮತ್ತೆ ಯಾರಾದರೂ ಆ ಪ್ರಕರಣಗಳ ಬಗ್ಗೆ ಮಾತಾಡಿದರಾ? ಬಿಜೆಪಿ ಆರೋಪಕ್ಕೆ ಯಾವುದೇ ಬೆಲೆ ಇಲ್ಲ ಎಂದರು.