Koppal News: ರೈತರಿಗೆ 10 ತಾಸು ವಿದ್ಯುತ್ ನೀಡಲು ಚಿಂತನೆ -ಸುನಿಲ್ ಕುಮಾರ್
ರೈತರಿಗೆ ಏಳು ತಾಸು ಬದಲಾಗಿ 10 ತಾಸು ವಿದ್ಯುತ್ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು.
ಕನಕಗಿರಿ (ಫೆ.6) : ರೈತರಿಗೆ ಏಳು ತಾಸು ಬದಲಾಗಿ 10 ತಾಸು ವಿದ್ಯುತ್ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು.
ತಾಲೂಕಿನ ಸುಳೇಕಲ್ ಗ್ರಾಮದ ಬಳಿಯ .150 ಕೋಟಿ ವೆಚ್ಚದ 220/110/11ಕೆವಿ ವಿದ್ಯುತ್ ಉಪಕೇಂದ್ರಕ್ಕೆ ಭಾನುವಾರ ಚಾಲನೆ ನೀಡಿ ಮಾತನಾಡಿ, ಎರಡು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 250ಕ್ಕೂ ಹೆಚ್ಚು ಹೊಸ ವಿದ್ಯುತ್ ಉಪಕೇಂದ್ರಗಳ ಅನಾವರಣ ಮಾಡಲಾಗಿದೆ. ಇಂಧನ ಇಲಾಖೆ ಇತಿಹಾಸದಲ್ಲಿ ಇದು ಹೊಸ ಮೈಲುಗಲ್ಲು. ಇಂಧನ ಇಲಾಖೆಯನ್ನು ಜನಸ್ನೇಹಿ ಮಾಡಲು ಸರ್ಕಾರ ಬದ್ಧವಿದೆ. ಗ್ರಾಮೀಣ ಭಾಗದ ಪರಿಶಿಷ್ಟಜಾತಿ, ಪರಿಶಿಷ್ಟಪಂಗಡ ಜನಾಂಗಕ್ಕೆ ಅಮೃತ ಜ್ಯೋತಿ ಯೋಜನೆಯಡಿ 75 ಯುನಿಟ್ ಉಚಿತ ವಿದ್ಯುತ್ ಪೂರೈಸಲು ಘೋಷಿಸಲಾಗಿದೆ. ರಾಜ್ಯದ ವಿದ್ಯುತ್ ರಹಿತ ಪ್ರದೇಶದಲ್ಲಿ 6 ಸಾವಿರ ಕಿ.ಮೀ. ವಿದ್ಯುತ್ ಸಂಪರ್ಕ ಕಲ್ಪಿಸಿದ್ದೇವೆ. ಬೆಳಕು ಯೋಜನೆಯಡಿ ವಿದ್ಯುತ್‌ರಹಿತ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಿ, ಸಾರ್ವಜನಿಕರಿಗೆ ನೆರವಾಗಿದ್ದೇವೆ ಎಂದರು.
ಉಡುಪಿಯಲ್ಲಿ ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನ: ಸಚಿವ ವಿ ಸುನೀಲ್ ಕುಮಾರ್
ಪರಿಸರ ಸ್ನೇಹಿ ಸೌರಶಕ್ತಿ ಮತ್ತು ಪವನ ಶಕ್ತಿ ಉತ್ಪಾದನಾ ಘಟಕಗಳನ್ನು ಹೆಚ್ಚಿಸಲು ಮುಂದಾಗಿದ್ದೇವೆ. ಇಂಧನ ಇಲಾಖೆಯಲ್ಲಿ ಹೊಸ ರೀತಿಯ ಬದಲಾವಣೆಯಾಗಿದೆ. ಎಲ್ಲರಿಗೂ ಅವಶ್ಯವಿರುವ ಇಲಾಖೆಯನ್ನು ಜನಸ್ನೇಹಿಯನ್ನಾಗಿಸುವ ಕಾರ್ಯಕ್ರಮಗಳನ್ನು ಸರ್ಕಾರ ನೀಡಿದೆ. ರೈತರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ನೀಡುವುದು ನಮ್ಮ ಸರ್ಕಾರದ ಆಶಯ. ಸುಟ್ಟುಹೋದ ಟಿಸಿಗಳನ್ನು ಬದಲಾವಣೆ ಮಾಡಿಸಿಕೊಳ್ಳಲು ರೈತರು ಒಂದು ವಾರದಿಂದ 15 ದಿನ ಕಾಲ ಕಾಯುವುದಲ್ಲದೆ, ತುಂಬಾ ತೊಂದರೆ ಅನುಭವಿಸಬೇಕಾಗಿತ್ತು. ಈ ನಿಟ್ಟಿನಲ್ಲಿ 24 ಗಂಟೆಯೊಳಗೆ ಪರಿಹಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ರೈತರ ಬೇಡಿಕೆಗಳನ್ನು ಸಾಕಾರಗೊಳಿಸಿದ್ದೇವೆ ಎಂದರು.
ಸರ್ಕಾರಕ್ಕೆ 1.55 ಕೋಟಿ ರು. ಲಾಭಾಂಶ ಹಸ್ತಾಂತರಿಸಿದ ಎಂಇಐಎಲ್
ಉಡುಪಿ : ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನಿಯಮಿತ ಕಂಪನಿ ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯದ ಕಂಪನಿಯಾಗಿದ್ದು, ಕಳೆದ 10 ವರ್ಷಗಳಿಂದ ನಿರಂತರವಾಗಿ ಲಾಭದಲ್ಲಿ ನಡೆಯುತ್ತಿದೆ. 2021-22 ನೇ ಸಾಲಿನಲ್ಲಿ ಒಟ್ಟು 6.74 ಕೋಟಿ ಲಾಭಗಳಿಸಿದ್ದು, ಲಾಭದ ಶೇ. 30 ರಷ್ಟು, ಸುಮಾರು 2.02 ಕೋಟಿ ರು.ಗಳನ್ನು ಲಾಭಾಂಶವಾಗಿ ಸದಸ್ಯರಿಗೆ ವಿತರಿಸಲಾಗಿದೆ. ಅದರಂತೆ 1.55 ಕೋಟಿ ರು. ಲಾಭಾಂಶವನ್ನು ಕರ್ನಾಟಕ ಸರ್ಕಾರದ ಬೊಕ್ಕಸಕ್ಕೆ ಇತ್ತೀಚೆಗೆ ಪಾವತಿಸಲಾಗಿದೆ.
Mutalik: ಕಾರ್ಕಳ 'ಹಿಂದೂ' ಸಮರ: ಮುತಾಲಿಕ್‌ಗಾಗಿ ಕ್ಷೇತ್ರ ಬಿಡ್ತಾರಾ ಸುನೀಲ್ ಕುಮಾರ್?
ಈ ಲಾಭಾಂಶವನ್ನು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರಿಗೆ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನಿಯಮಿತ ಕಂಪನಿಯ ಪರವಾಗಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನಿಲ್ ಕುಮಾರ್ ಮತ್ತು ಕಂಪನಿಯ ಅಧ್ಯಕ್ಷ ಉದಯ ಕುಮಾರ ಶೆಟ್ಟಿ ಹಸ್ತಾಂತರಿಸಿದರು. ಕಂಪನಿಯ ವ್ಯವಸ್ಥಾಪಕ ನಿರ್ದೇಶಕಿ ಶೀಲಾ ಜಿ. ಮತ್ತು ಪ್ರಧಾನ ವ್ಯವಸ್ಥಾಪಕ ಟಿ.ಆರ್.ಪ್ರಕಾಶ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.