ರಾಜ್ಯ ಸಂಶೋಧನಾ ಫೌಂಡೇಷನ್ ಸ್ಥಾಪಿಸಲು ಚಿಂತನೆ: ಸಚಿವ ಬೋಸರಾಜು
ರಾಜ್ಯದಲ್ಲಿ ಸ್ಟಾರ್ಟ್ ಅಪ್‌ಗಳು ಮತ್ತು ಉದ್ದಿಮೆಗಳು ನೂತನ ಉತ್ಪನ್ನಗಳ ಸಂಶೋಧನೆಗೆ ಮತ್ತು ಉತ್ಪಾದನೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಂಶೋಧನಾ ಫೌಂಡೇಶನ್‌ನ್ನು ಸ್ಥಾಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ತಿಳಿಸಿದರು.
ಚಿಕ್ಕಬಳ್ಳಾಪುರ (ಆ.13): ರಾಜ್ಯದಲ್ಲಿ ಸ್ಟಾರ್ಟ್ ಅಪ್‌ಗಳು ಮತ್ತು ಉದ್ದಿಮೆಗಳು ನೂತನ ಉತ್ಪನ್ನಗಳ ಸಂಶೋಧನೆಗೆ ಮತ್ತು ಉತ್ಪಾದನೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಂಶೋಧನಾ ಫೌಂಡೇಶನ್‌ನ್ನು ಸ್ಥಾಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು ತಿಳಿಸಿದರು.
ತಾಲೂಕಿನ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಆಯೋಜಿಸಿದ್ದ ಇಂಡಿಯನ್ ಸ್ಟಾರ್ಟ್‌ಅಪ್ ಫೆಸ್ಟಿವಲ್- 2023 ರ ಸಮಾರೋಪದಲ್ಲಿ ಅವರು ಮಾತನಾಡಿ, ವೈಜ್ಞಾನಿಕ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳು ಆರ್ಥಿಕ ಚಟುವಟಿಕೆಗಳಿಗೆ ಬಹಳ ಅಗತ್ಯ ಮತ್ತು ಸ್ಟಾರ್ಟ್ ಅಪ್ ಎಕೋ ಸಿಸ್ಟಮ್‌ಗೆ ಮೂಲ. ನಮ್ಮ ಸರಕಾರ ಸ್ಟಾರ್ಟ್ ಅಪ್‌ಗಳ ಸ್ಥಾಪನೆಗೆ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಿದೆ ಎಂದರು.
ಪ್ರವಾಸೋದ್ಯಮದಲ್ಲಿ ಹೊಸ ಬದಲಾವಣೆ ತರಲು ಚಿಂತನೆ: ಸಚಿವ ಎಚ್.ಕೆ.ಪಾಟೀಲ್
ರೋಬಸ್ಟ್ ಎಕಾನಮಿ ಉತ್ತೇಜಿಸುವ ಗುರಿ: ಶಿಕ್ಷಣದಲ್ಲಿ ವೈಜ್ಞಾನಿಕ ಅಂಶಗಳನ್ನು ಅಳವಡಿಸುವ, ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಉದ್ದಿಮೆಗಳಿಗೆ ಪೂರಕವಾದ ವಾತಾವರಣ, ಪರಿಸರ ಸುಸ್ಥಿರತೆಯನ್ನು ಕಾಪಾಡುವಂತಹ ರೋಬಸ್ಟ್ ಎಕಾಮಿಯನ್ನ ಉತ್ತೇಜಿಸುವ ಗುರಿಗಳನ್ನು ನಾವು ಹೊಂದಿದ್ದೇವೆ. ಬೆಂಗಳೂರು ನಗರ ಸ್ಟಾರ್ಟ್‌ಅಪ್‌ಗಳ ರಾಜಧಾನಿ ಎಂದೇ ಹೆಸರುವಾಸಿ. ರಾಜ್ಯದಲ್ಲಿರುವ ಹೂಡಿಕೆ ಪೂರಕ ವಾತಾವರಣದ ಕಾರಣದಿಂದಾಗಿ ಹೆಚ್ಚಿನ ಉದ್ದಿಮೆಗಳು ಹಾಗೂ ಸ್ಟಾರ್ಟ್ ಅಪ್ ಗಳು ಸ್ಥಾಪನೆ ಆಗುತ್ತಿವೆ. ಕೈಗಾರಿಕೆಗಳ ಬೆಳವಣಿಗೆಗೆ ಸಂಶೋಧನೆ ಬಹಳ ಅವಶ್ಯಕ. ಉತ್ತಮ ಉತ್ಪನ್ನಗಳನ್ನ ಹಾಗೂ ಸೇವೆಗಳನ್ನ ನೀಡುವ ನಿಟ್ಟಿನಲ್ಲಿ ಸಂಸ್ಥೆಗಳಿಗೆ ಸಂಶೋಧನೆ ಕೈಗೊಳ್ಳಲು ಅನುವು ಮಾಡಿಕೊಡುವ ಉದ್ದೇಶವನ್ನು ಕರ್ನಾಟಕ ರಿಸಚ್‌ರ್ ಫೌಂಡೇಶನ್ ಹೊಂದಿದೆ ಎಂದು ಹೇಳಿದರು.
ಮಾರುಕಟ್ಟೆಯಲ್ಲಿ ಟೊಮೆಟೋ ದರ ಭಾರೀ ಕುಸಿತ: ಬೆಳೆಗಾರರಲ್ಲಿ ತೀವ್ರ ನಿರಾಸೆ
ಸಂಶೋಧನೆಗೆ ಉತ್ತೇಜನ: ರಾಜ್ಯದಲ್ಲಿ ಕೆಎಸ್‌ಆರ್‌ಎಫ್ ಮೂಲಕ ಹಂತಹಂತವಾಗಿ ಸಂಶೋಧನೆ ಮತ್ತು ಅಭಿವೃದ್ದಿಗೆ ಉತ್ತೇಜನ ನೀಡುವ ನಿಟ್ಟಿನಲಿ ರಾಜ್ಯದ ಜಿಡಿಪಿಯ ಶೇಕಡಾ 3 ರಷ್ಟಹಣವನ್ನು ಸಂಶೋಧನಾ ಚಟುವಟಿಕೆಗಳಿಗೆ ವಿನಿಯೋಗಿಸುವ ಗುರಿಯನ್ನು ಹೊಂದಿದ್ದೇವೆ. ರಾಜ್ಯದ ಜ್ಞಾನಾರ್ಜನೆಯ ಕೇಂದ್ರಗಳಲ್ಲಿ ಸಂಶೋಧನೆ ಮತ್ತು ಹೊಸ ತಂತ್ರಜ್ಞಾನಗಳಿಗೆ ಇಂಬು ನೀಡುವ ಮೂಲಕ ಹೊಸ ಸ್ಟಾರ್ಟ್ ಅಪ್‌ಗಳಿಗೆ ಪೋಷಣೆ ನೀಡುವುದು ಈ ಮೂಲಕ ಜ್ಞಾನವನ್ನ ಉದ್ದಿಮೆಗಳು, ವಿಶ್ವವಿದ್ಯಾಲಯಗಳೂ ಮತ್ತು ಸಂಶೋಧನಾ ಕೇಂದ್ರಗಳ ಮಧ್ಯೆ ಹರಿಯುವಂತೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸತ್ಯ ಸಾಯಿ ವಿಶ್ವ ವಿದ್ಯಾಲಯದ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸುಧನ ಸಾಯಿ, ಇಂಡಿಯನ್ ಸ್ಟಾರ್ಟ್ ಅಪ್ ಫೆಸ್ಟಿವಲ್ ಮುಖ್ಯಸ್ಥರಾದ ಜೆ ಎ ಚೌಧರಿ ಇದ್ದರು.