ದಸರಾ ದೀಪಾಲಂಕಾರಕ್ಕೆ ಹೊಸ ಮೆರುಗು ನೀಡಲು ಚಿಂತನೆ: ಶಾಸಕ ರಮೇಶ್ ಬಂಡಿಸಿದ್ದೇಗೌಡ

ಈ ಬಾರಿ ದಸರಾ ದೀಪಾಲಂಕಾರವನ್ನು ಆಕರ್ಷಣೀಯ ಹಾಗೂ ವಿನೂತನ ರೀತಿಯಲ್ಲಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಾದ ಶಾಸಕ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು. 
 

Thinking to give new shine to Dasara Lighting Says MLA Ramesha Bandisiddegowda gvd

ಮೈಸೂರು (ಆ.22): ಈ ಬಾರಿ ದಸರಾ ದೀಪಾಲಂಕಾರವನ್ನು ಆಕರ್ಷಣೀಯ ಹಾಗೂ ವಿನೂತನ ರೀತಿಯಲ್ಲಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಾದ ಶಾಸಕ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು. ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಕಚೇರಿಯಲ್ಲಿ ದಸರಾ ದೀಪಾಲಂಕಾರ ಸಮಿತಿಯು ವಿವಿಧ ಸಂಘ ಸಂಸ್ಥೆಗಳು, ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು ಹಾಗೂ ಇತರೆ ಪ್ರಾಯೋಜಕರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ಬಾರಿಗಿಂತ ಈ ಬಾರಿಯ ದಸರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಬೇಕು ಎಂದು ಮುಖ್ಯಮಂತ್ರಿಗಳು ಈಗಾಗಲೇ ಉನ್ನತ ಮಟ್ಟದ ಸಭೆಯಲ್ಲಿ ಸೂಚಿಸಿದ್ದಾರೆ. ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ದಸರಾ ದೀಪಾಲಂಕಾರವನ್ನು ಈ ವರ್ಷ ಇನ್ನಷ್ಟು ಆಕರ್ಷಕವಾಗಿಸಲು ಪ್ರಾಯೋಜಕರು ಸೂಕ್ತ ಸಲಹೆ, ಸಹಕಾರ ನೀಡಬೇಕು. ಈ ಬಾರಿ ದಸರಾ ದೀಪಾಲಂಕಾರವನ್ನು ಆಕರ್ಷಣೀಯ ಹಾಗೂ ವಿನೂತನ ರೀತಿಯಲ್ಲಿ ಮಾಡಲು ಚಿಂತನೆ ನಡೆಸಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು.

ಭಾರತದ ರಾಷ್ಟ್ರೀಯ ಬಾಹ್ಯಾಕಾಶ ದಿನ: ಚಂದ್ರನಂಗಳ ದಾಟಿ, ಜನಜೀವನದಲ್ಲಿ ಬದಲಾವಣೆ ತರುವ ಸಾಧನೆ

ಸೆಸ್ಕ್ ತಾಂತ್ರಿಕ ನಿರ್ದೇಶಕ ಮುನಿಗೋಪಾಲ್ ರಾಜು ಮಾತನಾಡಿ, ದಸರಾ ದೀಪಾಲಂಕಾರ ಅತ್ಯಂತ ಆಕರ್ಷಣೀಯವಾಗಿರಲಿದೆ. ಹೀಗಾಗಿ, ಕಳೆದ 3- 4 ವರ್ಷಗಳಿಂದ ದಸರಾ ದೀಪಾಲಂಕಾರಕ್ಕೆ ವಿಶೇಷ ಮೆರಗು ನೀಡುವ ಮೂಲಕ ಅದರ ಆಕರ್ಷಣೆ ಹೆಚ್ಚುವಂತೆ ಮಾಡಲಾಗಿದೆ. ಈ ವರ್ಷ ವಿಜೃಂಭಣೆಯ ದಸರಾ ಆಚರಣೆ ಮಾಡಲು ಸರ್ಕಾರ ನಿರ್ಧರಿಸಿದೆ. ದೀಪಾಲಂಕಾರವನ್ನು ಇನ್ನಷ್ಟು ಆಕರ್ಷಕವಾಗಿಸಲು ರೂಪುರೇಷ ಸಿದ್ಧಪಡಿಸಲಾಗುತ್ತಿದೆ. ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರ ಮಾಡಲಿರುವ ಪ್ರಾಯೋಜಕರು ಯಾವ ಪರಿಕಲ್ಪನೆಯಲ್ಲಿ ದೀಪಾಲಂಕಾರ ಮಾಡುತ್ತಾರೆ ಎಂಬುದನ್ನು ಮೊದಲೇ ತಿಳಿಸಬೇಕಿದೆ ಎಂದು ಹೇಳಿದರು.

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ದಸರಾ ದೀಪಾಲಂಕಾರಕ್ಕೆ ಸಂಬಂಧಿಸಿದಂತೆ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕಿದೆ. ಇದರಿಂದಾಗಿ ಅವರಿಂದ ಹೊಸ ಆಲೋಚನೆಗಳು ದೊರೆಯಲಿದ್ದು, ದಸರಾ ದೀಪಾಲಂಕಾರ ಆಕರ್ಷಣೀಯಗೊಳಿಸಲು ಸಹಾಯವಾಗಲಿದೆ ಎಂದು ಸಲಹೆ ನೀಡಿದರು.

ಸಭೆಯಲ್ಲಿ ದಸರಾ ದೀಪಾಲಂಕಾರದ ಆಕರ್ಷಣೆ ಹೆಚ್ಚಿಸುವುದರೊಂದಿಗೆ ಜನರ ಸುರಕ್ಷತೆಗೂ ಆದ್ಯತೆ ನೀಡಬೇಕೆಂದು ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳು, ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು, ಪ್ರಾಯೋಜಕರು, ವಿದ್ಯುತ್ ಗುತ್ತಿಗೆದಾರರು ದೀಪಾಲಂಕಾರವನ್ನು ಆಕರ್ಷಣೀಯಗೊಳಿಸುವ ಕುರಿತಾಗಿ ಸಲಹೆಗಳನ್ನು ನೀಡಿದರು. ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಿ. ಶೀಲಾ, ಹಣಕಾಸು ನಿರ್ದೇಶಕ ಶೇಖ್ ಮಹೀಮುಲ್ಲಾ, ಅಧೀಕ್ಷಕ ಎಂಜಿನಿಯರ್ ಸುನಿಲ್ ಕುಮಾರ್, ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ರಮೇಶ್ ಹಾಗೂ ಸಂಘ ಸಂಸ್ಥೆಯವರು ಪಾಲ್ಗೊಂಡಿದ್ದರು.

ವೇಶ್ಯಾವಾಟಿಕೆ ಮಾಡಿಸುವವರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಅರವಿಂದ ಬೆಲ್ಲದ

ಈ ಬಾರಿಯ ದಸರೆಯನ್ನು ವಿಭಿನ್ನ ಮತ್ತು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ದೀಪಾಲಂಕಾರವನ್ನು ಅತ್ಯಂತ ಆಕರ್ಷಕವಾಗಿಸಲು ಎಲ್ಲಾ ಪ್ರಯತ್ನಗಳು ನಡೆದಿವೆ. ಇದಕ್ಕೆ ಪ್ರಾಯೋಜಕರು ಹೆಚ್ಚಿನ ಸಹಕಾರ ನೀಡಿದರೆ, ದೀಪಾಲಂಕಾರವನ್ನು ಹೆಚ್ಚು ಆಕರ್ಷಣೀಯವಾಗಿ ಮಾಡಬಹುದು.
- ಜಿ. ಶೀಲಾ, ವ್ಯವಸ್ಥಾಪಕ ನಿರ್ದೇಶಕರು, ಸೆಸ್ಕ್

Latest Videos
Follow Us:
Download App:
  • android
  • ios