ಬೆಂಗಳೂರು (ಮೇ.17):  ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ‘ತೌಕ್ಟೆ’ ಚಂಡಮಾರುತದ ಪರಿಣಾಮ ಕಳೆದ ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಸುರಿಯುತ್ತಿರುವ ಅಬ್ಬರದ ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 18ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಗಳಿದ್ದು, ಈಗಾಗಲೇ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್‌. ಪಾಟೀಲ್‌ ತಿಳಿಸಿದ್ದಾರೆ.

ಚಂಡಮಾರುತದಿಂದ ಕರ್ನಾಟಕ ಪಾರು: ಭಾರೀ ಹಾನಿ ಮಾಡದೇ ಸಾಗಿದ ತೌಕ್ಟೆ! .

ಭಾನುವಾರ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೋಟ, ಕೊಲ್ಲೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 19 ಸೆಂ.ಮೀ. ಮಳೆಯಾಗಿದೆ. ಭಟ್ಕಳ, ಧರ್ಮಸ್ಥಳದಲ್ಲಿ 16 ಸೆಂ.ಮೀ.ಮಳೆಯಾಗಿದೆ. ಶಿವಮೊಗ್ಗ ಹಾಗೂ ಭಾಗಮಂಡಲದಲ್ಲಿ 17 ಸೆಂ.ಮೀ. ಮಳೆಯಾಗಿದೆ. ಇನ್ನುಳಿದಂತೆ ಮೈಸೂರು, ಮಂಡ್ಯ, ರಾಮನಗರ, ಬೆಂ.ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಹಗುರ ಮಳೆಯಾಗಿದೆ. ಯಾದಗಿರಿ, ರಾಯಚೂರು, ಚಿತ್ರದುರ್ಗದಲ್ಲಿ ಮಳೆಯಾಗಿಲ್ಲ ಎಂದು ತಿಳಿದು ಬಂದಿದೆ.

 

 ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ‘ತೌಕ್ಟೆ’ ಚಂಡಮಾರುತದ ಪರಿಣಾಮ  ಅಬ್ಬರದ ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಸದ್ಯದ ಪರಿಸ್ಥಿತಿಯಲ್ಲಿ ತೌಕ್ಟೆಚಂಡಮಾರುತ ಪಣಜಿ ಹಾಗೂ ಗೋವಾದ ನೈಋುತ್ಯ ದಿಕ್ಕಿನಲ್ಲಿ 120 ಕಿ.ಮೀ. ವೇಗದಲ್ಲಿ ಉತ್ತರಕ್ಕೆ ಸಾಗುತ್ತಿದೆ. ಮೇ 18ರಂದು ಗುಜರಾತಿನ ಪೋರ್‌ಬಂದರಿಗೆ ತಲುಪಲಿದೆ. ಬಳಿಕ ರಾಜ್ಯದಲ್ಲಿ ಇದರ ಪ್ರಭಾವ ಕಡಿಮೆಯಾಗಲಿದೆ. ಮೇ 17ರ ನಂತರ ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಲಿದೆ. ಆದರೂ ಮೇ 20ರ ವರೆಗೆ ಉತ್ತಮ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.