Asianet Suvarna News Asianet Suvarna News

Rubella Vaccine ಪಡೆದಿದ್ದ 3 ಮಕ್ಕಳ ನಿಗೂಢ ಸಾವು: ತನಿಖೆಗೆ ಆದೇಶ!

*ಬೆಳಗಾವಿಯಲ್ಲಿ ಘಟನೆ: ತನಿಖೆಗೆ ಆದೇಶ
*ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚುಚ್ಚುಮದ್ದು
*ಚಿಕಿತ್ಸೆ ಫಲಿಸದೆ ಮೂವರು ಕಂದಮ್ಮಗಳ ದುರ್ಮರಣ

Three children die after Rubella shots in Belagavi Karnataka mnj
Author
Bengaluru, First Published Jan 17, 2022, 7:45 AM IST

ಬೆಳಗಾವಿ (ಜ. 17): ರೂಬೆಲ್ಲಾ ಲಸಿಕೆ (Rubella) ಪಡೆದಿದ್ದ ಮೂರು ಕಂದಮ್ಮಗಳು ನಿಗೂಢವಾಗಿ ಅಸುನೀಗಿರುವ ಮನಕಲಕುವ ಘಟನೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ (Belagavi) ನಡೆದಿದೆ. ಘಟನೆ ಬೆನ್ನಲ್ಲೇ ಎಚ್ಚೆತ್ತಿರುವ ಆರೋಗ್ಯ ಇಲಾಖೆ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ (13 ತಿಂಗಳು), ಮಧು ಕರಗುಂದಿ (14 ತಿಂಗಳು) ಹಾಗೂ ಮಲ್ಲಾಪುರ ಗ್ರಾಮದ ಚೇತನ ಪೂಜಾರಿ (18 ತಿಂಗಳು) ಮೃತ ಕಂದಮ್ಮಗಳು.

ಈ ಮಕ್ಕಳಿಗೆ ಜನವರಿ 12ರಂದು ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ರೂಬೆಲ್ಲಾ ಚುಚ್ಚುಮದ್ದು ನೀಡಿದ್ದರು. ಚುಚ್ಚುಮದ್ದು ಹಾಕಿಸಿಕೊಂಡು ಮನೆಗೆ ಹೋಗಿದ್ದ ಮಕ್ಕಳಲ್ಲಿ ಐವರು ಮಕ್ಕಳು ತೀವ್ರ ಅಸ್ವಸ್ಥಗೊಂಡು ವಾಂತಿ-ಭೇದಿಯಿಂದ ಬಳಲಿದ್ದರು. ಕುಟುಂಬಸ್ಥರು ತಕ್ಷಣವೇ ಐದೂ ಮಕ್ಕಳನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು. ಈ ಪೈಕಿ ಮೂವರು ಮಕ್ಕಳಿಗೆ ಐಸಿಯುನಲ್ಲಿ ಆಮ್ಲಜನಕದ ನೆರವಿನೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೂವರು ಕಂದಮ್ಮಗಳು ನಿಗೂಢವಾಗಿ ಅಸುನೀಗಿವೆ.

ಇದನ್ನೂ ಓದಿ: Weekend Curfew ರಾಜ್ಯಾದ್ಯಂತ ಯಶಸ್ವಿ: ಮಾಂಸದಂಗಡಿ ಬಿಟ್ಟು ಉಳಿದೆಡೆ ಜನ ಸಂಚಾರ ವಿರಳ!

ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್‌ ಲಸಿಕಾ ಅಭಿಯಾನವೂ ಜಾರಿಯಲ್ಲಿತ್ತು. ಹೀಗಾಗಿ ಅಲ್ಲಿನ ಸಿಬ್ಬಂದಿ ಮಕ್ಕಳಿಗೆ ಯಾವ ಚುಚ್ಚುಮದ್ದು ನೀಡಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಈ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಮೃತ ಹಸುಳೆಗಳ ಸಂಬಂಧಿಕರು ಆಗ್ರಹಿಸಿದ್ದಾರೆ.

"ಜ.12ರಂದು 21 ಮಕ್ಕಳಿಗೆ ಲಸಿಕೆ ನೀಡಲಾಗಿದ್ದು ಅವರಲ್ಲಿ ನಾಲ್ವರು ಮಕ್ಕಳಿಗೆ ದಡಾರ, ರುಬೆಲ್ಲಾ ವ್ಯಾಕ್ಸಿನ್‌ ನೀಡಲಾಗಿತ್ತು. ಆ ನಾಲ್ಕು ಮಕ್ಕಳಲ್ಲಿ ಪ್ರತಿಕೂಲ ಪರಿಣಾಮ ಕಾಣಿಸಿಕೊಂಡಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಪರಿಶೀಲಿಸಿ ಕ್ರಮ ವಹಿಸುತ್ತೇವೆ" ಎಂದು ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್‌.ವಿ.ಮುನ್ಯಾಳ ಹೇಳಿದ್ದಾರೆ.

ಶಾಲೆಗಳಿಂದ ಸೋಂಕು ಹಬ್ಬುತ್ತೆ ಎಂಬುದು ನಿಜವಲ್ಲ: ಕೊರೋನಾ ಪ್ರಕರಣಗಳು (Corona Cases) ಹೆಚ್ಚಾದ ಕಾರಣ ಸರ್ಕಾರಗಳು ಶಾಲೆಗಳನ್ನು ಬಂದ್‌ ಮಾಡುತ್ತಿರುವುದಕ್ಕೆ ವಿಶ್ವ ಬ್ಯಾಂಕ್‌ (World Bank) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸೋಂಕು ಹೆಚ್ಚಾಯಿತು ಎಂದು ಶಾಲೆ ಮುಚ್ಚುವುದಕ್ಕೆ ಯಾವುದೇ ಸಮರ್ಥನೆ ಇಲ್ಲ. ಕೋವಿಡ್‌ (Covid19) ಹೊಸ ಅಲೆ ಸೃಷ್ಟಿಯಾದರೂ ಶಾಲೆ ಬಂದ್‌ (Schools Closed) ಮಾಡುವುದು ಕೊನೆಯ ಆಯ್ಕೆಯಾಗಬೇಕು. ಇಲ್ಲದೆ ಹೋದರೆ ಕಲಿಕಾ ಬಡತನ ಹೆಚ್ಚಾಗುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: Corona 3rd Wave: ಕೋವಿಡ್‌ ಪ್ರಸರಣದ ಆರ್‌ ವ್ಯಾಲ್ಯೂ ಇಳಿಕೆ: 3ನೇ ಅಲೆ ತಗ್ಗಿದ ಸೂಚನೆಯೆ?

ಶಾಲೆಗಳನ್ನು ತೆರೆದಿದ್ದರಿಂದಲೇ ಸೋಂಕಿನ ಉಬ್ಬರವಾಯಿತು ಹಾಗೂ ಶಾಲೆಗಳು ಸುರಕ್ಷಿತ ಸ್ಥಳವಲ್ಲ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ವಿಶ್ವ ಬ್ಯಾಂಕ್‌ನ ಜಾಗತಿಕ ಶಿಕ್ಷಣ ನಿರ್ದೇಶಕ ಜೇಮಿ ಸಾವೇದ್ರ (Jaime Saavedra) ಅವರು ಹೇಳಿದ್ದಾರೆ. ರೆಸ್ಟೋರೆಂಟ್‌, ಬಾರ್‌ ಹಾಗೂ ಶಾಪಿಂಗ್‌ ಮಾಲ್‌ಗಳನ್ನು ತೆರೆಯಲು ಬಿಟ್ಟು, ಶಾಲೆಗಳನ್ನು ಮುಚ್ಚಿಸುವುದರಲ್ಲಿ ಅರ್ಥವೇ ಇಲ್ಲ. ಇದಕ್ಕೆ ನೆಪವೂ ಇಲ್ಲ. ಶಾಲೆಗಳನ್ನು ತೆರೆಯುವುದಕ್ಕೂ ಕೊರೋನಾ ಹರುಡುವುದಕ್ಕೂ ಸಂಬಂಧ ಇಲ್ಲ ಎಂದು ಪಿಟಿಐ ಸುದ್ದಿಸಂಸ್ಥೆಗೆ ವಾಷಿಂಗ್ಟನ್‌ನಿಂದ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಶಾಲೆಗಳನ್ನು ತೆರೆಯುವುದರಿಂದ ಮಕ್ಕಳ ಆರೋಗ್ಯ ಮೇಲಾಗುವ ಪರಿಣಾಮ ಕಡಿಮೆ. ಆದರೆ ಶಾಲೆ ಬಂದ್‌ ಮಾಡುವುದರಿಂದ ಆಗುವ ನಷ್ಟಬಲು ಅಧಿಕ. ಹಲವು ದೇಶಗಳಲ್ಲಿ ಶಾಲೆ ಬಂದ್‌ ಆಗಿದ್ದಾಗಲೂ ಕೊರೋನಾ ಅಲೆಗಳು ಸೃಷ್ಟಿಯಾಗಿದ್ದವು. ಇದರರ್ಥ ಕೊರೋನಾ ಉಬ್ಬರದ ಹಿಂದೆ ಶಾಲೆಗಳ ಪಾತ್ರ ಇಲ್ಲ ಎಂಬುದಾಗಿದೆ ಎಂದು ಹೇಳಿದ್ದಾರೆ. ಮಕ್ಕಳಿಗೆ ಲಸಿಕೆ ನೀಡಿದ ಬಳಿಕವೇ ಶಾಲೆ ಆರಂಭಿಸುತ್ತೇವೆ ಎಂದು ಯಾವುದೇ ದೇಶವೂ ಹೇಳಿಲ್ಲ. 

Follow Us:
Download App:
  • android
  • ios