ಬೆಂಗಳೂರು(ಡಿ.14): ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 672 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, 1,507 ಮಂದಿ ಗುಣಮುಖರಾಗಿದ್ದಾರೆ. ಮೂವರು ಮೃತಪಟ್ಟ ವರದಿಯಾಗಿದೆ.

ನಗರದ ಒಟ್ಟು ಸೋಂಕಿತರ ಸಂಖ್ಯೆ 3,78,529 ಏರಿಕೆಯಾಗಿದ್ದು, ಗುಣಮುಖರ ಸಂಖ್ಯೆ 3,62,231 ತಲುಪಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 12,064 ಇಳಿಕೆಯಾಗಿದ್ದು, ಆಸ್ಪತ್ರೆ, ಆರೈಕೆ ಕೇಂದ್ರ ಹಾಗೂ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 109 ಮಂದಿಯ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದಿನೇದಿನೇ ಕೊರೋನಾ ಕಡಿಮೆಯಾಗ್ತಿದೆ : ಭಾನುವಾರದ ಅಂಕಿ-ಸಂಖ್ಯೆ ಇಲ್ಲಿದೆ

ಸಾವಿನ ಸಂಖ್ಯೆ 3ಕ್ಕೆ ಇಳಿಕೆ:

ನಗರದಲ್ಲಿ ಕಳೆದ ಒಂದು ತಿಂಗಳಿನಿಂದ ಪ್ರತಿ ದಿನ ಕೊರೋನಾ ಸಾವಿನ ಸಂಖ್ಯೆ 8 ರಿಂದ 12 ಮಂದಿ ಮೃತಪಟ್ಟ ವರದಿಯಾಗುತ್ತಿತ್ತು. ಇದೇ ಮೊದಲ ಬಾರಿಗೆ ಭಾನುವಾರ ಐದಕ್ಕಿಂತ ಕಡಿಮೆ ಮೂರು ಮಂದಿ ಮೃತಪಟ್ಟವರದಿಯಾಗಿದೆ. ಈ ಮೂಲಕ ಮೃತರ ಸಂಖ್ಯೆ 4,233 ಏರಿಕೆಯಾಗಿದೆ.