Tumakuru: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ
ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ, ಸ್ಥಳದಲ್ಲೇ ಮೂವರು ದುರ್ಮರಣ ಹೊಂದಿದ್ದಾರೆ. ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಈ ಅಪಘಾತ ಸಂಭವಿಸಿದೆ.
ತುಮಕೂರು (ಏ. 10): ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ, ಸ್ಥಳದಲ್ಲೇ ಮೂವರು ದುರ್ಮರಣ ಹೊಂದಿದ್ದಾರೆ. ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇನ್ನೂ ಮೂವರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Bengaluru: ಧಗಧಗ ಹೊತ್ತಿ ಉರಿದ ಬಿಎಂಟಿಸಿ ಬಸ್: ಪ್ರಯಾಣಿಕರು ಸೇಫ್
ತುಮಕೂರು ಕಡೆಯಿಂದ ಶಿರಾ ಕಡೆಗೆ ತೆರಳುತ್ತಿತ್ತು ಕಾರು ಎನ್ನಲಾಗಿದೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.