ಮೃತರು ಮತ್ತು ಗಾಯಾಳುಗಳೆಲ್ಲರೂ ಮೈಸೂರಿನ ಸಂಬಂಧಿಕರನ್ನು ಭೇಟಿ ಮಾಡಿದ ನಂತರ ವಾಪಸ್ಸು ಬೆಂಗಳೂರಿಗೆ ತೆರಳುತ್ತಿದ್ದರು. ಐಶ್ವರ್ಯ ಕಾನ್ವೆಂಟ್ ಸಮೀಪದ ಎಕ್ಸ್‌ಪ್ರೆಸ್‌ವೇನಲ್ಲಿ ಮುಂದೆ ಹೋಗುತ್ತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಮದ್ದೂರು(ಸೆ.11): ಮದ್ದೂರು ಸಮೀಪದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು, ವೃದ್ಧೆ ಸೇರಿದಂತೆ ಮೂವರು ಮೃತಪಟ್ಟು ಆರು ಮಂದಿ ಗಾಯಗೊಂಡಿರುವ ಘಟನೆ ಜರುಗಿದೆ.

ಪಟ್ಟಣದ ಹೊರ ವಲಯದ ಐಶ್ವರ್ಯ ಕಾನ್ವೆಂಟ್ ಸಮೀಪದ ಎಕ್ಸ್‌ಪ್ರೆಸ್‌ ವೇನಲ್ಲಿ ಶನಿವಾರ ಸಂಜೆ ಕಾರೊಂದು ಮುಂದೆ ಹೋಗುತ್ತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಬಸವೇಶ್ವರನಗರದ ಭವ್ಯ-ಮಹೇಶ್ ದಂಪತಿ ಪುತ್ರಿ ಸಮನ್ವಿ (9) ಕಾರು ಚಾಲಕ ರಘು ಪುತ್ರ ಕಾರ್ತಿಕ್ (9) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಥಣಿ: ರಸ್ತೆ ಅಪಘಾತ, ರಜೆಗೆ ಬಂದಿದ್ದ ಯೋಧ ಸಾವು

ಭವ್ಯಳ ಪುತ್ರ ಶ್ರೀನಿವಾಸ್, ಈಕೆಯ ತಾಯಿ ಮಾಲಾ ಹಾಗೂ ಚಾಲಕ ರಘು ಅವರು ಗಾಯಗೊಂಡಿದ್ದು, ಮದ್ದೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಬೆಂಗಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೃತರು ಮತ್ತು ಗಾಯಾಳುಗಳೆಲ್ಲರೂ ಮೈಸೂರಿನ ಸಂಬಂಧಿಕರನ್ನು ಭೇಟಿ ಮಾಡಿದ ನಂತರ ವಾಪಸ್ಸು ಬೆಂಗಳೂರಿಗೆ ತೆರಳುತ್ತಿದ್ದರು. ಐಶ್ವರ್ಯ ಕಾನ್ವೆಂಟ್ ಸಮೀಪದ ಎಕ್ಸ್‌ಪ್ರೆಸ್‌ವೇನಲ್ಲಿ ಮುಂದೆ ಹೋಗುತ್ತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಡಿವೈಡರ್‌ಗೆ ಕಾರು ಡಿಕ್ಕಿ: ವೃದ್ಧೆ ಸಾವು

ತಾಲೂಕಿನ ನಿಡಘಟ್ಟ ಸಮೀಪ ಸಂಭವಿಸಿದ ಮತ್ತೊಂದು ಅಪಘಾತದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರಿನ ಜಿಲ್ಲೆಯ ಹೆಗ್ಗಡದೇವನಕೋಟೆಯ ಲೇ.ಗೋಪಾಲಕೃಷ್ಣ ಎಂಬುವರ ಪತ್ನಿ ವಿಜಯಲಕ್ಷ್ಮಿ (೮೦) ಎಂಬುವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ವಿಜಯಲಕ್ಷ್ಮಿ ಮೊಮ್ಮಗ ವಿದ್ಯಾಸಾಗರ್ ಹಾಗೂ ಆತನ ಪತ್ನಿ ಪಲ್ಲವಿ ಗಾಯಗೊಂಡು ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಮೈಸೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಮೃತರು ಮತ್ತು ಗಾಯಾಳುಗಳು ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ಎಚ್.ಡಿ. ಕೋಟೆಗೆ ತೆರಳುತ್ತಿದ್ದರು. ನಿಡಘಟ್ಟದ ಬೆಂಗಳೂರು-ಮೈಸೂರು ಮೇಲ್ಸೇತುವೆ ಮೇಲೆ ಕಾರು ಚಾಲಕ ನಿಯಂತ್ರಣ ತಪ್ಪಿ ರಸ್ತೆಯ ಎಡ ಭಾಗದ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಎರಡೂ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸಂಚಾರಿ ಠಾಣೆ ಪಿಎಸ್‌ಐ ಜೆ.ಇ. ಮಹೇಶ್ ಹಾಗೂ ಕಾಮಾಕ್ಷಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.