ಮಂಗಳೂರು(ಜು.14): ಅರಂಬೂರು ಬಳಿ ಕಾರು ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಅರಂಬೂರು ಕೆ.ಎಸ್‌.ಆರ್.ಟಿ.ಸಿ ಬಸ್‌ಗೆ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ 12 ವರ್ಷದ ತನ್ಮಯಿ ಮತ್ತು ಜಯಶೀಲಗೆ ಗಂಭೀರ ಗಾಯಗಳಾಗಿದ್ದು,  ಸುಳ್ಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಕಾರಿನಲ್ಲಿದ್ದವರು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದವರು ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.